ಒಂದು ಚಮಚ ಕಾಫಿ ಪುಡಿಯನ್ನು ಈ ಎಣ್ಣೆ ಜೊತೆ ಬೆರೆಸಿ ಹಚ್ಚಿ: 20 ನಿಮಿಷದಲ್ಲಿ ಬಿಳಿಕೂದಲು ಗಾಢ ಕಪ್ಪುಬಣ್ಣ ಪಡೆಯುತ್ತೆ!
ಬೆಳಿಗ್ಗೆ ಒಂದು ಕಪ್ ಬಿಸಿ ಕಾಫಿ ಕುಡಿದರೆ ದಿನಪೂರ್ತಿ ಫ್ರೆಶ್ ಫೀಲ್ ಸಿಗುತ್ತದೆ. ಅಂದಹಾಗೆ ಅದೇ ಕಾಫಿ ಕೂದಲು ಮತ್ತು ಚರ್ಮಕ್ಕೆ ತುಂಬಾ ಪ್ರಯೋಜನಕಾರಿ ಎಂದು ನಿಮಗೆ ತಿಳಿದಿದೆಯೇ?
ಕಾಫಿ ಕೂದಲಿನ ಬೆಳವಣಿಗೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಕಾಫಿಯಲ್ಲಿರುವ ಆಂಟಿಆಕ್ಸಿಡೆಂಟ್‌ಗಳು ಫ್ರೀ ರ್ಯಾಡಿಕಲ್’ಗಳಿಂದ ಉಂಟಾಗುವ ಹಾನಿಯಿಂದ ಕೂದಲನ್ನು ರಕ್ಷಿಸಲು ಸಹಾಯ ಮಾಡುತ್ತದೆ.
ಇದರೊಂದಿಗೆ ಇದರಲ್ಲಿರುವ ಕೆಫೀನ್ ಕೂದಲಿನ ಬೆಳವಣಿಗೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಕೂದಲನ್ನು ಉದ್ದ, ಕಪ್ಪು ಮತ್ತು ದಪ್ಪವಾಗಿಸಲು ಕಾಫಿಯನ್ನು ಹಲವು ರೀತಿಯಲ್ಲಿ ಬಳಸಬಹುದು.
ಕೂದಲಿನ ಬೆಳವಣಿಗೆಯನ್ನು ಹೆಚ್ಚಿಸಲು ಕಾಫಿ ಮತ್ತು ತೆಂಗಿನ ಎಣ್ಣೆಯನ್ನು ಬಳಸಬಹುದು. ತೆಂಗಿನ ಎಣ್ಣೆಗೆ ಒಂದು ಚಮಚ ಕಾಫಿ ಪುಡಿಯನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ಇದನ್ನು ಸಂಪೂರ್ಣವಾಗಿ ಕೂದಲಿಗೆ ಹಚ್ಚಿ. ಸ್ವಲ್ಪ ಸಮಯ ಮಸಾಜ್ ಮಾಡಿ 30 ನಿಮಿಷಗಳ ಕಾಲ ಹಾಗೇಬಿಡಿ. ನಂತರ ಶಾಂಪೂ ಬಳಸಿ ಕೂದಲನ್ನು ಸ್ವಚ್ಛಗೊಳಿಸಿ. ಉತ್ತಮ ಫಲಿತಾಂಶಕ್ಕಾಗಿ ವಾರಕ್ಕೆ ಎರಡು ಬಾರಿ ಈ ಹೇರ್ ಮಾಸ್ಕ್’ಅನ್ನು ಬಳಸಬಹುದು.
ಕಾಫಿ ಮತ್ತು ಅಲೋವೆರಾ ಕೂಡ ಕೂದಲಿನ ಬೆಳವಣಿಗೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಒಂದು ಬೌಲ್’ನಲ್ಲಿ ಎರಡು ಚಮಚ ಅಲೋವೆರಾ ಜೆಲ್ ಮತ್ತು ಒಂದು ಚಮಚ ಕಾಫಿ ಪುಡಿಯನ್ನು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ಈಗ ಈ ಪೇಸ್ಟ್ ಅನ್ನು ನೆತ್ತಿ ಮತ್ತು ಕೂದಲಿಗೆ ಹಚ್ಚಿ ಸ್ವಲ್ಪ ಸಮಯ ಮಸಾಜ್ ಮಾಡಿ. 30 ನಿಮಿಷಗಳ ನಂತರ ಸೌಮ್ಯವಾದ ಶಾಂಪೂ ಬಳಸಿ ಕೂದಲನ್ನು ಸ್ವಚ್ಛಗೊಳಿಸಿ. ಉತ್ತಮ ಫಲಿತಾಂಶಕ್ಕಾಗಿ, ವಾರಕ್ಕೊಮ್ಮೆ ಈ ಹೇರ್ ಮಾಸ್ಕ್’ಅನ್ನು ಬಳಸಬಹುದು
ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಅರ್ಹ ವೈದ್ಯಕೀಯ ಅಭಿಪ್ರಾಯಕ್ಕೆ ಯಾವುದೇ ರೀತಿಯಲ್ಲಿ ಪರ್ಯಾಯವಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞ ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸಿ. ಈ ಮಾಹಿತಿಯ ಹೊಣೆಯನ್ನು Zee Kannada News ಖಚಿತಪಡಿಸಿಕೊಳ್ಳುವುದಿಲ್ಲ.