ಜುಲೈ 31 ರ ಮೊದಲು ಈ ಕೆಲಸವನ್ನು ಪೂರೈಸದಿದ್ದರೆ ಜೇಬಿಗೆ ಕತ್ತರಿ ಗ್ಯಾರಂಟಿ

ಸರ್ಕಾರ ಬಿಡುಗಡೆ ಮಾಡಿರುವ ಡೆಡ್ ಲೈನ್ ಪ್ರಕಾರ ಆದಾಯ ತೆರಿಗೆ ರಿಟರ್ನ್ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ. 

 31st July Deadline: ಜುಲೈ 31 ಬರಲು ಕೆಲವೇ ದಿನಗಳು ಮಾತ್ರ ಉಳಿದಿವೆ. ಜುಲೈ 31 ರ ಮೊದಲು  ಮಾಡಿ ಮುಗಿಸಲೇ ಬೇಕಾದ ಹಲವಾರು ಕಾರ್ಯಗಳಿವೆ. ಈ ಕೆಲಸಗಳಲ್ಲಿ ಪಿಎಂ ಕಿಸಾನ್ ಯೋಜನೆಗಾಗಿ ಇ-ಕೆವೈಸಿ ಪಡೆಯುವುದು, ಸಬ್ಸಿಡಿಯಲ್ಲಿ ಎಲೆಕ್ಟ್ರಿಕ್ ವಾಹನ ಖರೀದಿಸುವುದು, ಗ್ಯಾಸ್ ಸಿಲಿಂಡರ್ ಬುಕ್ ಮಾಡುವುದು, ಅಂತ್ಯೋದಯ ಪಡಿತರ ಚೀಟಿದಾರರನ್ನು ಗ್ಯಾಸ್ ಸಂಪರ್ಕ ಕಾರ್ಡ್‌ನೊಂದಿಗೆ ಲಿಂಕ್ ಮಾಡುವುದು ಮತ್ತು ಆದಾಯ ತೆರಿಗೆ ರಿಟರ್ನ್ ಸಲ್ಲಿಸುವುದು ಸೇರಿವೆ. ಆಗಸ್ಟ್ 1 ರಿಂದ, ಅದರ ನಿಯಮಗಳು ಬದಲಾಗುತ್ತಿವೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

1 /4

ಸರ್ಕಾರ ಬಿಡುಗಡೆ ಮಾಡಿರುವ ಡೆಡ್ ಲೈನ್ ಪ್ರಕಾರ ಆದಾಯ ತೆರಿಗೆ ರಿಟರ್ನ್ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ. ಈ ದಿನದೊಳಗೆ ಆದಾಯ ತೆರಿಗೆ ರಿಟರ್ನ್ ಸಲ್ಲಿಸದಿದ್ದರೆ, ದಂಡದ ಜೊತೆಗೆ ಅದನ್ನು ಸಲ್ಲಿಸಬೇಕಾಗುತ್ತದೆ. ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವ ಗಡುವನ್ನು ಸರ್ಕಾರ ಇನ್ನೂ ಯಾವುದೇ ಕಾರಣಕ್ಕೂ ವಿಸ್ತರಣೆ ಮಾಡುವುದಿಲ್ಲ ಎನ್ನಲಾಗಿದೆ. ಗಡುವಿನ ನಂತರ ಐಟಿಆರ್ ಸಲ್ಲಿಸುವ ಜನರು 5,000 ರೂಪಾಯಿಗಳನ್ನು ದಂಡವಾಗಿ ಪಾವತಿಸಬೇಕಾಗುತ್ತದೆ.

2 /4

ಸಿಲಿಂಡರ್ ಅನ್ನು ಅಗ್ಗದ ಬೆಲೆಯಲ್ಲಿ  ಬುಕ್ ಮಾಡಬೇಕಾದರೆ ಜುಲೈ ೩೧ರೊಲಗೆ ಬುಕ್ ಮಾಡಬೇಕು. ಸಿಲಿಂಡರ್‌ಗಳ ಬೆಲೆಗಳನ್ನು ಪ್ರತಿ ತಿಂಗಳ ಮೊದಲ ದಿನದಂದು ನಿಗದಿಪಡಿಸಲಾಗುತ್ತದೆ. ಆಗಸ್ಟ್ 1 ರಂದು ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು ಸಿಲಿಂಡರ್ ದರಗಳನ್ನು ನಿರ್ಧರಿಸಲಿವೆ. ಈ ಬಾರಿ ಕಂಪನಿಗಳು ದರ ಹೆಚ್ಚಿಸಬಹುದು.

3 /4

ಪಿಎಂ ಕಿಸಾನ್ ಯೋಜನೆಯ ಫಲಾನುಭವಿಯಾಗಿದ್ದರೆ, ಜುಲೈ 31 ರ ಮೊದಲು KYC ಮಾಡಿ. ಇದರ ಕೊನೆಯ ದಿನಾಂಕ ಕೂಡ ಜುಲೈ 31 ಆಗಿದೆ. ಇ-ಕೆವೈಸಿ ಮಾಡಲು ಸಾಧ್ಯವಾಗದ ರೈತರು 12ನೇ ಕಂತಿನಿಂದ ವಂಚಿತರಾಗಬೇಕಾಗುತ್ತದೆ.  

4 /4

 ಸಬ್ಸಿಡಿಯಲ್ಲಿ ಎಲೆಕ್ಟ್ರಿಕ್ ವಾಹನವನ್ನು ಖರೀದಿಸಲು ಬಯಸಿದರೆ ಗೋವಾ ಸರ್ಕಾರವು ನಿಮಗೆ ಸಬ್ಸಿಡಿಯನ್ನು ನೀಡುತ್ತಿದೆ. ವಾಸ್ತವವಾಗಿ, ಗೋವಾ ಸರ್ಕಾರವು ಜುಲೈ 31 ರವರೆಗೆ ಖರೀದಿಸುವ ಎಲೆಕ್ಟ್ರಿಕ್ ವಾಹನಕ್ಕೆ ಮಾತ್ರ ಸಬ್ಸಿಡಿ ನೀಡುತ್ತದೆ. ದ್ವಿಚಕ್ರ ವಾಹನದಲ್ಲಿ 30,000, ತ್ರಿಚಕ್ರ ವಾಹನದಲ್ಲಿ 60,000 ಮತ್ತು ನಾಲ್ಕು ಚಕ್ರದ ವಾಹನದಲ್ಲಿ 3 ಲಕ್ಷದವರೆಗೆ ಸಬ್ಸಿಡಿ ನೀಡುತ್ತದೆ. ಇದಕ್ಕಾಗಿ ಜುಲೈ 31ರೊಳಗೆ ಎಲೆಕ್ಟ್ರಿಕ್ ವಾಹನ ಖರೀದಿಸಿ ಸಬ್ಸಿಡಿಗೆ ಅರ್ಜಿ ಸಲ್ಲಿಸಬೇಕು.