Rahul Gandhi: ಚಿತ್ರದುರ್ಗದ ಮುರುಘಾ ಮಠಕ್ಕೆ ರಾಹುಲ್ ಗಾಂಧಿ ಭೇಟಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಂದು ಚಿತ್ರದುರ್ಗದ ಮುರುಘಾಮಠಕ್ಕೆ ಭೇಟಿ ನೀಡಿ ಮುರುಘಾಶರಣರು ಸೇರಿದಂತೆ ಹಲವು ಮಠಾಧೀಶರ ಆಶೀರ್ವಾದ ಪಡೆದರು. ಈ ವೇಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಮತ್ತಿತರ ನಾಯಕರು ಉಪಸ್ಥಿತರಿದ್ದರು.

ಚಿತ್ರದುರ್ಗ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಂದು ಚಿತ್ರದುರ್ಗದ ಮುರುಘಾಮಠಕ್ಕೆ ಭೇಟಿ ನೀಡಿ ಮುರುಘಾಶರಣರು ಸೇರಿದಂತೆ ಹಲವು ಮಠಾಧೀಶರ ಆಶೀರ್ವಾದ ಪಡೆದರು. ಈ ವೇಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಮತ್ತಿತರ ನಾಯಕರು ಉಪಸ್ಥಿತರಿದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /4

ಚಿತ್ರದುರ್ಗದ ಮುರುಘಾ ಮಠಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಭೇಟಿ ನೀಡಿದರು. ಶಿವಮೂರ್ತಿ ಮುರುಘಾ ಶರಣರ ಆಶೀರ್ವಾದ ಪಡೆದು ಮಾಠಾಧೀಶರೊಂದಿಗೆ ಸಂವಾದ ನಡೆಸಿದರು.

2 /4

ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ 20ಕ್ಕೂ ಹೆಚ್ಚು ಮಠಾಧೀಶರು ಸಂವಾದದಲ್ಲಿ ಪಾಲ್ಗೊಂಡಿದ್ದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಸೇರಿ ಹಲವು ಕಾಂಗ್ರೆಸ್ ಮುಖಂಡರು ಈ ವೇಳೆ ಉಪಸ್ಥಿತರಿದ್ದರು.

3 /4

ರಾಹುಲ್ ಗಾಂಧಿಯವರು ಹುಬ್ಬಳ್ಳಿಯಿಂದ ರಸ್ತೆ ಮಾರ್ಗವಾಗಿ ಚಿತ್ರದುರ್ಗಕ್ಕೆ ಆಗಮಿಸಿದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ನಾಯಕನಿಗೆ ಅದ್ದೂರಿ ಸ್ವಾಗತ ಕೋರಿದರು.

4 /4

ಮಾಜಿ ಸಿಎಂ ಸಿದ್ದರಾಮಯ್ಯನವರ 75ನೇ ಹುಟ್ಟುಹಬ್ಬದ ಪ್ರಯುಕ್ತ ಇಂದು ದಾವಣಗೆರೆಯಲ್ಲಿ ಆಯೋಜಿಸಿರುವ ‘ಸಿದ್ದರಾಮೋತ್ಸವ ಅಮೃತ ಮಹೋತ್ಸವ’ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಪಾಲ್ಗೊಂಡು ನಂತರ ದೆಹಲಿಗೆ ಪ್ರಯಾಣ ಬೆಳಸಲಿದ್ದಾರೆ.