ಬೆಳಗ್ಗೆ ಹಳಸಿದ ಬಾಯಿಗೆ ಒಂದು ಸ್ಪೂನ್ ಈ ಎಣ್ಣೆ ಸೇವಿಸಿ: ಹೊಟ್ಟೆ ಮತ್ತು ಸೊಂಟದ ಸುತ್ತ ಸಂಗ್ರಹವಾದ ಬೊಜ್ಜು 5 ದಿನದಲ್ಲಿ ಬೆಣ್ಣೆಯಂತೆ ಕರಗುವುದು!
ತೆಂಗಿನ ಮರವನ್ನು ಕಲ್ಪವೃಕ್ಷ ಎಂದು ಕರೆಯಲಾಗುತ್ತದೆ. ಈ ಮರದಿಂದ ಸಿಗುವ ಎಲ್ಲಾ ವಸ್ತುಗಳು ಸಹ ಉಪಯುಕ್ತವಾಗಿವೆ. ಇನ್ನು ತೆಂಗಿನ ಎಣ್ಣೆಯು ಪೋಷಕಾಂಶಗಳಿಂದ ಸಮೃದ್ಧವಾಗಿದ್ದು, ಕೂದಲು ಚೆನ್ನಾಗಿ ಬೆಳೆಯಲು ಮತ್ತು ಚರ್ಮವು ಹೊಳೆಯಲು ಸಹಾಯ ಮಾಡುತ್ತದೆ. ಹಾಗಾಗಿಯೇ ತೆಂಗಿನೆಣ್ಣೆ ಪೌಷ್ಟಿಕಾಂಶಗಳ ಸಂಪತ್ತು ಎನ್ನುತ್ತಾರೆ ಆಯುರ್ವೇದ ತಜ್ಞರು.
ತೆಂಗಿನೆಣ್ಣೆ ಆಂಟಿ-ಮೈಕ್ರೊಬಿಯಲ್ ಮತ್ತು ಉತ್ಕರ್ಷಣ ನಿರೋಧಕ ಗುಣಗಳಿಂದ ಸಮೃದ್ಧವಾಗಿದೆ. ತೆಂಗಿನ ಎಣ್ಣೆಯಲ್ಲಿ ಪೊಟ್ಯಾಸಿಯಮ್, ಮೆಗ್ನೀಸಿಯಮ್, ವಿಟಮಿನ್ ಸಿ ಮತ್ತು ವಿಟಮಿನ್ ಇ ಕೂಡ ಸಮೃದ್ಧವಾಗಿದ್ದು, ಹೀಗಾಗಿಯೇ ಆಯುರ್ವೇದದಲ್ಲಿ ತೆಂಗಿನ ಎಣ್ಣೆಯನ್ನು ವ್ಯಾಪಕವಾಗಿ ಬಳಸಲಾಗುತ್ತದೆ.
ಆದರೆ ಗೊತ್ತಾ..? ತೆಂಗಿನೆಣ್ಣೆಯನ್ನು ಟಾನಿಕ್ ಆಗಿ ತೆಗೆದುಕೊಳ್ಳಬಹುದು ಎನ್ನುತ್ತಾರೆ ತಜ್ಞರು. ವಿಶೇಷವಾಗಿ ಚಳಿಗಾಲದಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರತಿದಿನ ಒಂದು ಚಮಚ ತೆಂಗಿನ ಎಣ್ಣೆಯನ್ನು ತೆಗೆದುಕೊಳ್ಳಿ. ಹೀಗೆ ಮಾಡುವುದರಿಂದ ದೇಹಕ್ಕೆ ಐದು ಶಕ್ತಿಶಾಲಿ ಲಾಭಗಳು ಸಿಗುತ್ತವೆ.
ತೆಂಗಿನ ಎಣ್ಣೆ ದೇಹಕ್ಕೆ ಶಕ್ತಿಯನ್ನು ನೀಡುತ್ತದೆ. ಸಾಮಾನ್ಯವಾಗಿ ಚಳಿಗಾಲದಲ್ಲಿ ದೇಹ ನಿಸ್ತೇಜವಾಗಿರುತ್ತದೆ. ಹಾಗಾಗಿ ಪ್ರತಿದಿನ ಒಂದು ಚಮಚ ತೆಂಗಿನೆಣ್ಣೆ ಕುಡಿಯುವುದರಿಂದ ದಿನವಿಡೀ ಉಲ್ಲಾಸದಿಂದ ಇರುತ್ತೀರಿ. ಮುಂಜಾನೆ ತೆಂಗಿನೆಣ್ಣೆ ಕುಡಿಯುವುದರಿಂದ ದೇಹ ದುರ್ಬಲವಾಗುವುದಿಲ್ಲ.
ಬೆಳಗ್ಗೆ ಒಂದು ಚಮಚ ತೆಂಗಿನೆಣ್ಣೆ ಕುಡಿಯುವುದರಿಂದ ದೇಹದ ಜೀವಕೋಶಗಳ ಆರೋಗ್ಯ ಸುಧಾರಿಸುತ್ತದೆ. ತೆಂಗಿನ ಎಣ್ಣೆ ಮಾನಸಿಕ ಆರೋಗ್ಯಕ್ಕೆ ಒಳ್ಳೆಯದು. ಇದು ನಿಮ್ಮ ಜ್ಞಾಪಕಶಕ್ತಿಯನ್ನು ಸುಧಾರಿಸುವುದಲ್ಲದೆ ನಿಮ್ಮ ಮೆದುಳನ್ನು ಆರೋಗ್ಯವಾಗಿರಿಸುತ್ತದೆ.
ತೆಂಗಿನ ಎಣ್ಣೆ ಚಯಾಪಚಯವನ್ನು ಸುಧಾರಿಸುತ್ತದೆ. ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುತ್ತದೆ. ಒಂದು ಚಮಚ ತೆಂಗಿನ ಎಣ್ಣೆಯನ್ನು ನಿಯಮಿತವಾಗಿ ಸೇವಿಸುವುದರಿಂದ ಜೀರ್ಣಾಂಗ ವ್ಯವಸ್ಥೆಯು ಉತ್ತಮಗೊಳ್ಳುತ್ತದೆ. ಮಲಬದ್ಧತೆ ಸಮಸ್ಯೆ ದೂರವಾಗುತ್ತದೆ. ಇದು ಹೃದಯಕ್ಕೂ ಒಳ್ಳೆಯದು.
ತೆಂಗಿನ ಎಣ್ಣೆಯು ತೂಕ ನಷ್ಟಕ್ಕೆ ಸಹಾಯ ಮಾಡುವ ಅಂಶಗಳನ್ನು ಒಳಗೊಂಡಿದೆ. ಇದು ಆಂಟಿವೈರಲ್ ಗುಣಲಕ್ಷಣಗಳ ಜೊತೆಗೆ ಪೋಷಕಾಂಶಗಳಿಂದ ಸಮೃದ್ಧವಾಗಿದ್ದು, ದೇಹದ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುತ್ತದೆ. ಅಲ್ಲದೆ ಇದು ನಿಮ್ಮ ಹಸಿವನ್ನು ಕಡಿಮೆ ಮಾಡುತ್ತದೆ. ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ.
ತೆಂಗಿನೆಣ್ಣೆ ಕುಡಿಯುವುದರಿಂದ ಚರ್ಮಕ್ಕೆ ತೇವಾಂಶ ಸಿಗುತ್ತದೆ ಮತ್ತು ಸೌಂದರ್ಯವನ್ನು ಹೆಚ್ಚಿಸುತ್ತದೆ. ಇದು ಮುಖದ ಮೇಲಿನ ಕಲೆಗಳನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ. ಇದು ಕೂದಲನ್ನು ಬಲವಾಗಿ ಮತ್ತು ಹೊಳೆಯುವಂತೆ ಮಾಡುತ್ತದೆ.
ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಯಾವುದೇ ರೀತಿಯಲ್ಲಿ ಅರ್ಹ ವೈದ್ಯಕೀಯ ಅಭಿಪ್ರಾಯಕ್ಕೆ ಪರ್ಯಾಯವಾಗಿಲ್ಲ. ಹೆಚ್ಚಿನ ವಿವರಗಳಿಗಾಗಿ ಯಾವಾಗಲೂ ಪರಿಣಿತರನ್ನು ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸಿ. ಜೀ ಕನ್ನಡ ನ್ಯೂಸ್ ಈ ಮಾಹಿತಿಯ ಜವಾಬ್ದಾರಿಯನ್ನು ಪಡೆದುಕೊಳ್ಳುವುದಿಲ್ಲ