ಬೇಸಿಗೆಯಲ್ಲಿ ಈ ಐದು ಆಹಾರಗಳಿಂದ ಯುರಿಕ್ ಆಸಿಡ್ ಸಮಸ್ಯೆಯನ್ನು ನಿಯಂತ್ರಿಸಬಹುದು

ಬೇಸಿಗೆಯಲ್ಲಿ ಯೂರಿಕ್ ಆಸಿಡ್ ಮಟ್ಟವನ್ನು ನಿಯಂತ್ರಿಸಲು ನೀವು ಅನೇಕ ರೀತಿಯ ಆಹಾರಗಳನ್ನು ಸೇವಿಸಬಹುದು. ಕೆಲವು ಆರೋಗ್ಯಕರ ಆಹಾರಗಳ ಬಗ್ಗೆ  ಮಾಹಿತಿ ಇಲ್ಲಿದೆ. 
 

ಬೆಂಗಳೂರು : ದೇಹವನ್ನು ಆರೋಗ್ಯಕರವಾಗಿಡಲು ಉತ್ತಮ ಜೀವನಶೈಲಿ ಮತ್ತು ಆಹಾರಕ್ರಮದ ಅಗತ್ಯವಿದೆ. ಇಲ್ಲವಾದಲ್ಲಿ ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಈ ಸಮಸ್ಯೆಗಳಲ್ಲಿ ರಕ್ತದಲ್ಲಿ ಯೂರಿಕ್ ಆಮ್ಲದ ಹೆಚ್ಚಳ ಕೂಡಾ ಸೇರಿದೆ. ರಕ್ತದಲ್ಲಿ ಯೂರಿಕ್ ಆಮ್ಲದ ಮಟ್ಟ ಹೆಚ್ಚಾದಾಗ  ಕಿಡ್ನಿ ಸಮಸ್ಯೆಯಿಂದ ಹಿಡಿದು, ಕೀಲು ನೋವಿನವರೆಗೆ ಹಲವು ರೀತಿಯ ಸಮಸ್ಯೆಗಳು ಎದುರಾಗುತ್ತವೆ. ರಕ್ತದಲ್ಲಿನ ಯೂರಿಕ್ ಆಮ್ಲದ ಮಟ್ಟವು ನಿಯಂತ್ರಣದಲ್ಲಿರಬೇಕಾದರೆ ಸರಿಯಾದ ಆಹಾರಕ್ರಮದತ್ತ ಗಮನ ಹರಿಸಬೇಕಾಗುತ್ತದೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

1 /5

ದೇಹದಲ್ಲಿನ ಯೂರಿಕ್ ಆಮ್ಲದ ಮಟ್ಟವನ್ನು ನಿಯಂತ್ರಿಸಲು, ಬೇಸಿಗೆಯಲ್ಲಿ ಪ್ರತಿದಿನ 1 ಗ್ಲಾಸ್ ಎಳ ನೀರನ್ನು ಕುಡಿಯಿರಿ.   ಎಳನೀರಿನಲ್ಲಿರುವ ಗುಣಲಕ್ಷಣಗಳು ಯೂರಿಕ್ ಆಮ್ಲವನ್ನು ನಿಯಂತ್ರಿಸುವಲ್ಲಿ ಪರಿಣಾಮಕಾರಿಯಾಗಿದೆ. ಅಲ್ಲದೆ, ತೂಕ ಹೆಚ್ಚಳ,  ಕೊಲೆಸ್ಟ್ರಾಲ್, ಅಧಿಕ ರಕ್ತದೊತ್ತಡದಂತಹ ಸಮಸ್ಯೆಗಳನ್ನು ದೂರವಿಡಲು ಇದು ನಿಮಗೆ ಸಹಾಯ ಮಾಡುತ್ತದೆ.  

2 /5

ಬೇಸಿಗೆಯಲ್ಲಿ ಸೌತೆಕಾಯಿಯನ್ನು ಸೇವಿಸಿದರೆ ದೇಹಕ್ಕೆ ಸಾಕಷ್ಟು ಪ್ರಮಾಣದಲ್ಲಿ ನೀರು ಸಿಗುತ್ತದೆ. ಮಾತ್ರವಲ್ ದೇಹ ತಂಪಾಗಿರುತ್ತದೆ. ಸೌತೆಕಾಯಿಯನ್ನು ತಿನ್ನುವ ಮೂಲಕ ರಕ್ತದಲ್ಲಿನ ಯೂರಿಕ್ ಆಮ್ಲವನ್ನು ನಿಯಂತ್ರಿಸಬಹುದು. ಸೌತೆಕಾಯಿಯಲ್ಲಿರುವ ಫೈಬರ್ ಮತ್ತು ಆಂಟಿ-ಆಕ್ಸಿಡೆಂಟ್‌ಗಳು ಯೂರಿಕ್ ಆಸಿಡ್ ಮಟ್ಟವನ್ನು ನಿಯಂತ್ರಿಸುವಲ್ಲಿ ಪರಿಣಾಮಕಾರಿಯಾಗಿರುತ್ತದೆ.    

3 /5

ಬೇಸಿಗೆಯಲ್ಲಿ ನೆಲ್ಲಿಕಾಯಿ ಚಟ್ನಿ, ಜ್ಯೂಸ್, ಮುರಬ್ಬದಂತಹ ಪದಾರ್ಥಗಳನ್ನು ಸೇವಿಸುವುದರಿಂದ ರಕ್ತದಲ್ಲಿನ ಯೂರಿಕ್ ಆಮ್ಲದ ಪ್ರಮಾಣವನ್ನು ನಿಯಂತ್ರಿಸಬಹುದು. 

4 /5

ಬೇಸಿಗೆಯಲ್ಲಿ ನಿಂಬೆ ಪಾನಕವನ್ನು ಕುಡಿಯುವುದರಿಂದ ತೂಕವನ್ನು ನಿಯಂತ್ರಿಸುವುದರ ಜೊತೆಗೆ ಯೂರಿಕ್ ಆಮ್ಲವನ್ನು ನಿಯಂತ್ರಿಸಬಹುದು.  ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಇದನ್ನು ಸೇವಿಸಿದರೆ, ಬಹಳಷ್ಟು ಪ್ರಯೋಜನಗಳನ್ನು ಪಡೆಯಬಹುದು.   

5 /5

ಬೇಸಿಗೆಯಲ್ಲಿ ಸ್ಟ್ರಾಬೆರಿಗಳು, ಬ್ಲ್ಯಾಕ್‌ಬೆರಿಗಳು, ಬ್ಲೂಬೆರ್ರಿಗಳು ಮತ್ತು ಚೆರ್ರಿ ಹಣ್ಣುಗಳನ್ನು ಮಾರುಕಟ್ಟೆಯಲ್ಲಿ ಕಾಣಬಹುದು. ಈ ಹಣ್ಣುಗಳನ್ನು ಸೇವಿಸುವ ಮೂಲಕ ಯೂರಿಕ್ ಆಮ್ಲದ ಮಟ್ಟವನ್ನು ನಿಯಂತ್ರಿಸಲಾಗುತ್ತದೆ.