ರಾಗಿಯನ್ನು ಈ ರೀತಿ ಸೇವಿಸಿ !ಯೂರಿಕ್ ಆಸಿಡ್ ಮತ್ತು ಕಿಡ್ನಿ ಸ್ಟೋನ್ ಎರಡೂ ಮೂತ್ರದ ಮೂಲಕವೇ ಹೊರ ಹೋಗುತ್ತದೆ
ಆಹಾರದಲ್ಲಿ ಬದಲಾವಣೆಗಳನ್ನು ಮಾಡುವ ಮೂಲಕ ಯೂರಿಕ್ ಆಸಿಡ್ ಮಟ್ಟವನ್ನು ಹೆಚ್ಚಿನ ಪ್ರಮಾಣದಲ್ಲಿ ನಿಯಂತ್ರಿಸಬಹುದು.ಕೆಲವೊಂದು ಆಹಾರ ಸೇವಿಸುವ ಮೂಲಕವೂ ಯೂರಿಕ್ ಆಸಿಡ್ ಮಟ್ಟವನ್ನು ಕಡಿಮೆ ಮಾಡಬಹುದು.
ರಾಗಿ ಹೆಚ್ಚಿನ ಪ್ರಮಾಣದ ಫೈಬರ್ ಮತ್ತು ಕ್ಯಾಲ್ಸಿಯಂ ಅನ್ನು ಹೊಂದಿರುತ್ತದೆ. ಇದು ಯೂರಿಕ್ ಆಸಿಡ್ ಮಟ್ಟವನ್ನು ಕಡಿಮೆ ಮಾಡುವುದರೊಂದಿಗೆ ಮೂತ್ರಪಿಂಡದ ಕಲ್ಲುಗಳನ್ನು ಕರಗಿಸಲು ಕೂಡಾ ಸಹಾಯ ಮಾಡುತ್ತದೆ.
ರಾಗಿ ಕಡಿಮೆ ಪ್ಯೂರಿನ್ ಆಹಾರವಾಗಿದ್ದು, ದೇಹದಲ್ಲಿ ಯೂರಿಕ್ ಆಮ್ಲದ ಮಟ್ಟವನ್ನು ಕಡಿಮೆ ಮಾಡುತ್ತದೆ.ರಾಗಿಯನ್ನು ನಿಯಮಿತವಾಗಿ ಸೇವಿಸುವ ಮೂಲಕ ಯೂರಿಕ್ ಆಸಿಡ್ ಅನ್ನು ಕಡಿಮೆ ಮಾಡಬಹುದು.
ರಾಗಿ ಮಜ್ಜಿಗೆ ಮಾಲ್ಟ್ ಮಾಡಿ ಸೇವಿಸುವ ಮೂಲಕ ದೇಹದಲ್ಲಿನ ಯೂರಿಕ್ ಆಸಿಡ್ ಮಟ್ಟವನ್ನು ಕಡಿಮೆ ಮಾಡಬಹುದು.ಇದಕ್ಕಾಗಿ ರಾಗಿಯನ್ನು ರಾತ್ರಿಯಿಡೀ ಮಜ್ಜಿಗೆ ಲ್ಲಿ ನೆನೆಸಿಟ್ಟು ಬೆಳಿಗ್ಗೆ ಅದನ್ನು ಸೇವಿಸಿ.
ದೇಹದಲ್ಲಿ ಯೂರಿಕ್ ಆಮ್ಲದ ಮಟ್ಟವನ್ನು ಕಡಿಮೆ ಮಾಡಲು, ರಾಗಿಯಿಂದ ಮಾಡಿದ ರೊಟ್ಟಿಯನ್ನು ಕೂಡಾ ಸೇವಿಸಬಹುದು.ಇನ್ನು ರಾಗಿಯಿಂದ ಮಾಡಿದ ಲಡ್ಡುಗಳು ಕೂಡಾ ಯೂರಿಕ್ ಆಸಿಡ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇವುಗಳನ್ನು ಅನುಸರಿಸುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. Zee News Kannada ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ.)