ಡಯಾಬಿಟೀಸ್ ರೋಗಿಗಳು ಈ ಧಾನ್ಯಗಳನ್ನು ಸೇವಿಸುತ್ತಾ ಬಂದರೆ ಸಂಪೂರ್ಣ ನಿಯಂತ್ರಣಕ್ಕೆ ಬರುವುದು ಕಾಯಿಲೆ

Thu, 22 Dec 2022-11:22 am,

ಬಾರ್ಲಿ : ಬಾರ್ಲಿಯು ಅನೇಕ ಜನರು ಇಷ್ಟಪಡುವ ಧಾನ್ಯವಾಗಿದೆ. ಇದನ್ನು ನಿಯಮಿತವಾಗಿ ಸೇವಿಸಿದರೆ, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು  ನಿಯಂತ್ರಣಕ್ಕೆ ಬರುವುದು ಮಾತ್ರವಲ್ಲ, ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಇದು ಹೃದಯ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ.

ಓಟ್ಸ್ :ಜನರು ಸಾಮಾನ್ಯವಾಗಿ ಬೆಳಗಿನ ಉಪಾಹಾರಕ್ಕಾಗಿ ಓಟ್ಸ್ ಅನ್ನು ಸೇವಿಸುತ್ತಾರೆ. ಇದು ಪ್ರೋಟೀನ್, ಮೆಗ್ನೀಸಿಯಮ್ ಮತ್ತು ಕರಗುವ ಫೈಬರ್ ನಲ್ಲಿ ಸಮೃದ್ಧವಾಗಿದೆ. ಈ ಕಾರಣದಿಂದ ಒಟ್ಸ್ ಸೇವಿಸಿದರೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸುಲಭವಾಗಿ ನಿಯಂತ್ರಿಸಬಹುದು.   

ರಾಜ್‌ಗಿರಾ : ರಾಜ್‌ಗಿರಾದಲ್ಲಿ ಪ್ರೋಟೀನ್ ಸಾಕಷ್ಟು ಪ್ರಮಾಣದಲ್ಲಿ ಕಂಡುಬರುತ್ತದೆ. ಇದು ಉತ್ಕರ್ಷಣ ನಿರೋಧಕಗಳು ಮತ್ತು ಉರಿಯೂತದ ಗುಣಲಕ್ಷಣಗಳಿಂದ ತುಂಬಿದೆ. ಈ ಕಾರಣದಿಂದಲೇ ರಾಜ್‌ಗಿರಾ ಮಧುಮೇಹ ರೋಗಿಗಳಿಗೆ ಉತ್ತಮ ಆಯ್ಕೆ  ಎಂದು ಹೇಳಲಾಗುತ್ತದೆ.   

ರಾಗಿ : ರಾಗಿಯಲ್ಲಿ ಕೂಡಾ ಸಾಕಷ್ಟು ಪ್ರಮಾಣದಲ್ಲಿ ಪೋಷಕಾಂಶಗಳು ಕಂಡುಬರುತ್ತವೆ. ಇದನ್ನು ತಿನ್ನುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ಗಣನೀಯವಾಗಿ ಕಡಿಮೆಯಾಗುತ್ತದೆ. ಇದರಿಂದಾಗಿ ಮಧುಮೇಹ ರೋಗಿಗಳಿಗೆ ಹೆಚ್ಚಿನ ಸಹಾಯವಾಗುತ್ತದೆ. 

ಜೋಳ : ಜೋಳವು ವಿಟಮಿನ್ ಕೆ 1 ನಲ್ಲಿ ಸಮೃದ್ಧವಾಗಿದೆ. ಇದು ರಕ್ತ ಹೆಪ್ಪುಗಟ್ಟುವಿಕೆಯನ್ನು ತಡೆಗಟ್ಟುವಲ್ಲಿ ಮತ್ತು ಮೂಳೆಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಈ ಧಾನ್ಯದಲ್ಲಿ ಕಂಡುಬರುವ ಫೀನಾಲಿಕ್ ಸಂಯುಕ್ತಗಳು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕೂಡಾ ನಿಯಂತ್ರಣಕ್ಕೆ ತರುತ್ತದೆ. 

 ( ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. ZEE NEWS ಅದನ್ನು ಖಚಿತಪಡಿಸುವುದಿಲ್ಲ.)  

ZEENEWS TRENDING STORIES

By continuing to use the site, you agree to the use of cookies. You can find out more by Tapping this link