ಮುಂಜಾನೆ ಈ 5 ಆಹಾರಗಳ ಸೇವನೆಯಿಂದ ದಿನವಿಡೀ ಕಾಡುತ್ತೆ ಆಯಾಸ
ದೈಹಿಕ ಆರೋಗ್ಯಕ್ಕೆ ನಮ್ಮ ಆಹಾರಪದ್ಧತಿ ಬಗ್ಗೆ ನಿಗಾವಹಿಸುವುದು ಬಹಳ ಮುಖ್ಯ. ತಪ್ಪಾದ ಆಹಾರ ಪದ್ದತಿಯು ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಆರೋಗ್ಯ ತಜ್ಞರ ಪ್ರಕಾರ, ಮುಂಜಾನೆ ಕೆಲವು ಆಹಾರಗಳ ಸೇವನೆಯು ಆರೋಗ್ಯದ ಮೇಲೆ ಕೆಟ್ಟ ಪರಿಣಾಮವನ್ನು ಬೀರುತ್ತದೆ.
ಕಚ್ಚಾ ತರಕಾರಿಗಳು: ಹಸಿ ತರಕಾರಿಗಳು ಆರೋಗ್ಯಕ್ಕೆ ಒಳ್ಳೆಯದೇ. ಆದರೆ, ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಕಚ್ಚಾ ತರಕಾರಿಗಳ ಸೇವನೆ ಹೊಟ್ಟೆಗೆ ಸಂಬಂಧಿಸಿದ ಹಲವು ಸಮಸ್ಯೆಗಳಿಗೆ ಕಾರಣವಾಗಬಹುದು.
ಜ್ಯೂಸ್: ಕೆಲವರು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜ್ಯೂಸ್ ಕುಡಿಯುವ ಅಭ್ಯಾಸ ಹೊಂದಿರುತ್ತಾರೆ. ಆದರೆ, ನಿತ್ಯ ಖಾಲಿ ಜ್ಯೂಸ್ ಸೇವನೆ ಆರೋಗ್ಯಕ್ಕೆ ಒಳ್ಳೆಯದಲ್ಲ. ಜ್ಯೂಸ್ ನಲ್ಲಿರುವ ಸಕ್ಕರೆಯು ಯಕೃತ್ತಿನ ಆರೋಗ್ಯದ ಮೇಲೆ ಪರಿಣಾಮವನ್ನು ಬೀರುತ್ತದೆ.
ಟೀ/ ಕಾಫಿ: ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಟೀ ಅಥವಾ ಕಾಫಿ ಕುಡಿಯುವುದರಿಂದ ಅಸಿಡಿಟಿ ಸಮಸ್ಯೆ ಉಂಟಾಗುತ್ತದೆ.
ಮೊಸರು: ಮೊಸರಿನಲ್ಲಿ ಲ್ಯಾಕ್ಟಿಕ್ ಆಮ್ಲ ಕಂಡು ಬರುತ್ತದೆ. ಇದೂ ಕೂಡ ಅಸಿಡಿಟಿಗೆ ಕಾರಣವಾಗುತ್ತದೆ. ಹಾಗಾಗಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಮೊಸರನ್ನು ತಿನ್ನಬಾರದು.
ಮಸಾಲೆ ಆಹಾರ: ಬೆಳಿಗ್ಗೆ ಸಮಯದಲ್ಲಿ ಮಸಾಲೆಯುಕ್ತ ಆಹಾರಗಳನ್ನು ಸೇವಿಸಬಾರದು. ಇದೂ ಸಹ ಜೀರ್ಣಾಂಗ ವ್ಯವಸ್ಥೆಯನ್ನು ಹದಗೆಡಿಸುತ್ತದೆ. ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.