ಅತಿಯಾದ ಬಿಸಿ ನೀರು ಸೇವನೆ ನಿಮ್ಮ ಈ ಅಂಗಗಳಿಗೆ ಹಾನಿಕಾರಕವಾಗಬಹುದು, ಎಚ್ಚರ!
ಬಾಯಾರಿಕೆಯಾದಾಗ ಹೆಚ್ಚು ಬಿಸಿ ನೀರು ಕುಡಿದರೆ ಅದು ಏಕಾಗ್ರತೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಹಲವು ಅಧ್ಯಯನಗಳಿಂದ ತಿಳಿದು ಬಂದಿದೆ. ಅತಿಯಾದ ಬಿಸಿನೀರು ಮೆದುಳಿನ ಜೀವಕೋಶಗಳಲ್ಲಿ ಊತವನ್ನು ಉಂಟುಮಾಡಬಹುದು. ಇದು ಮಾನಸಿಕ ಸಮಸ್ಯೆಗಳನ್ನು ಉಂಟುಮಾಡಬಹುದು.
ಬಿಸಿನೀರು ಕುಡಿಯುವುದರಿಂದ ಕಿಡ್ನಿ ಸಮಸ್ಯೆಯೂ ಉಂಟಾಗುತ್ತದೆ. ಮೂತ್ರಪಿಂಡಗಳು ವಿಶೇಷ ಕ್ಯಾಪಿಲ್ಲರಿ ವ್ಯವಸ್ಥೆಯನ್ನು ಹೊಂದಿವೆ. ಇದು ದೇಹದಿಂದ ವಿಷವನ್ನು ಹೊರಹಾಕುತ್ತದೆ. ಬಿಸಿನೀರಿನಿಂದಾಗಿ ಕಿಡ್ನಿ ಮೇಲೆ ಹೆಚ್ಚು ಒತ್ತಡ ಬೀಳುತ್ತದೆ ಎನ್ನುತ್ತಾರೆ ತಜ್ಞರು. ಹಾಗಾಗಿಯೇ, ಅತಿಯಾಗಿ ಬಿಸಿ ನೀರು ಸೇವಿಸುವವರಿಗೆ ಅದು ವ್ಯತಿರಿಕ್ತ ಪರಿಣಾಮವನ್ನು ಉಂಟುಮಾಡಬಹುದು.
ತುಂಬಾ ಬಿಸಿ ನೀರು ಜೀರ್ಣಾಂಗ ವ್ಯವಸ್ಥೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಇದು ಕರುಳಿನ ಮೇಲೂ ಪರಿಣಾಮ ಬೀರುತ್ತದೆ. ಕರುಳಿನ ಸಮಸ್ಯೆ ಇರುವವರು ಬಿಸಿನೀರು ಕುಡಿಯುವುದನ್ನು ತಪ್ಪಿಸಿ. ಇದಲ್ಲದೆ ಬಿಸಿನೀರು ಬಾಯಿಯಲ್ಲಿ ಹುಣ್ಣುಗಳನ್ನು ಉಂಟುಮಾಡಬಹುದು.
ಪದೇ ಪದೇ ಬಿಸಿನೀರು ಕುಡಿಯುವುದರಿಂದ ಅನೇಕ ಗಂಭೀರ ಸಮಸ್ಯೆಗಳು ಉಂಟಾಗಬಹುದು. ಇದು ಮೆದುಳು ಮತ್ತು ಉಸಿರಾಟದ ಕಾಯಿಲೆಗಳಿಗೆ ಕಾರಣವಾಗಬಹುದು. ಅತಿಯಾಗಿ ಬಿಸಿ ನೀರು ಕುಡಿಯುವುದರಿಂದ ಉಸಿರಾಟದ ತೊಂದರೆಯಂತಹ ಸಮಸ್ಯೆಗಳು ಉಂಟಾಗಬಹುದು.
ಹೆಚ್ಚು ಬಿಸಿ ನೀರು ಕುಡಿಯುವುದರಿಂದ ನಮ್ಮ ದೇಹದ ಆಂತರಿಕ ಅಂಗಗಳ ಮೇಲೆ ಪರಿಣಾಮ ಬೀರುತ್ತದೆ. ಹೆಚ್ಚು ಬಿಸಿ ನೀರು ಕುಡಿದರೆ ಹೊಟ್ಟೆ ಉರಿ ಸಮಸ್ಯೆ ಕಾಡಬಹುದು. ಇದು ಹೊಟ್ಟೆಗೆ ಸಂಬಂಧಿಸಿದ ಅಪಾಯಕಾರಿ ಕಾಯಿಲೆಗಳಿಗೆ ಕಾರಣವಾಗಬಹುದು ಎಂದು ಹೇಳಲಾಗುತ್ತದೆ.
ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ZEE ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.