Summer Diet: ಬಿರು ಬೇಸಿಗೆಯಲ್ಲಿ ದೇಹವನ್ನು ತಂಪಾಗಿರಿಸಲು ತುಂಬಾ ಪ್ರಯೋಜನಕಾರಿ ಮಸಾಲೆಗಳಿವು
ಬೇಸಿಗೆ ಕಾಲದಲ್ಲಿ ದೇಹವನ್ನು ತಂಪಾಗಿರಿಸಲು ಕೆಲವು ಮಸಾಲೆಗಳು ತುಂಬಾ ಪ್ರಯೋಜನಕಾರಿ ಆಗಿವೆ. ಹಾಗಾಗಿಯೇ, ಈ ಮಸಾಲೆಗಳನ್ನು ಕೂಲಿಂಗ್ ಮಸಾಲೆಗಳು ಎನ್ನಲಾಗುತ್ತದೆ. ಆ ಮಸಾಲೆಗಳೆಂದರೆ...
ಮೆಂತ್ಯ ಬೀಜಗಳಲ್ಲಿ ಆಮ್ಲೀಯತೆ, ವಾಕರಿಕೆ ಮತ್ತು ಮಲಬದ್ಧತೆಯನ್ನು ನಿವಾರಿಸುವ ಶಕ್ತಿ ಇದೆ. ಹಾಗಾಗಿ, ಇದು ಜೀರ್ಣಕ್ರಿಯೆಗೆ ತುಂಬಾ ಪ್ರಯೋಜನಕಾರಿ ಆಗಿದೆ. ಬೇಸಿಗೆಯಲ್ಲಿ ರಾತ್ರಿ ವೇಳೆ ಒಂದು ಲೋಟ ನೀರಿನಲ್ಲಿ ಒಂದು ಚಮಚ ಮೆಂತ್ಯ ಬೆರೆಸಿಟ್ಟು ಬೆಳಿಗ್ಗೆ ಎದ್ದು ಈ ನೀರು ಕುಡಿಯುವುದರಿಂದ ತುಂಬಾ ಪ್ರಯೋಜನಕಾರಿ.
ಕೊತ್ತಂಬರಿ ಬೀಜಗಳಲ್ಲಿ ಆಂಟಿಆಕ್ಸಿಡೆಂಟ್‌ಗಳು, ವಿಟಮಿನ್‌ಗಳು ಮತ್ತು ಖನಿಜಾಂಶಗಳು ಹೇರಳವಾಗಿ ಕಂಡು ಬರುತ್ತವೆ. ಬೇಸಿಗೆಯಲ್ಲಿ ಇದನ್ನು ಹೆಚ್ಚಾಗಿ ಬಳಸುವುದರಿಂದ ದೇಹದಿಂದ ವಿಷಕಾರಿ ಅಂಶಗಳನ್ನು ಹೊರಹಾಕಲು ತುಂಬಾ ಪ್ರಯೋಜನಕಾರಿ ಆಗಿದೆ.
ಪುದೀನಾ ಬಳಕೆ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಪುದೀನಾ ನಿಮ್ಮ ಚರ್ಮಕ್ಕೆ ಪ್ರಯೋಜನಕಾರಿ. ಇದು ಅಜೀರ್ಣದ ವಿರುದ್ಧ ಹೋರಾಡಲು ಸಹಕಾರಿ ಆಗಿದೆ.
ದೇಹದ ಉಷ್ಣತೆಯನ್ನು ಕಡಿಮೆ ಮಾಡಲು ಏಲಕ್ಕಿ ಕೂಡ ತುಂಬಾ ಪ್ರಯೋಜನಕಾರಿ ಆಗಿದೆ. ಮನೆಯಲ್ಲಿ ತಯಾರಿಸುವ ತಂಪು ಪಾನೀಯಗಳಲ್ಲಿ ಏಲಕ್ಕಿ ಬೆರೆಸಿ ಸವಿಯುವುದು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ.
ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.