ಈ ಸೊಪ್ಪು ನೆನೆಸಿಟ್ಟ ನೀರು ಕುಡಿದರೆ ನಾರ್ಮಲ್ ಆಗುವುದು ಬ್ಲಡ್ ಶುಗರ್! ಕೊಲೆಸ್ಟ್ರಾಲ್, ಫ್ಯಾಟ್ ಕೂಡಾ ಕರಗುವುದು
ಹಿತ್ತಲ ಗಿಡ ಮದ್ದಲ್ಲ ಎನ್ನುವ ಮಾತಿದೆ. ಆದರೆ ಹಿತ್ತಲಲ್ಲಿಯೇ ಸಿಗುವ ಕೆಲವು ಪದಾರ್ಥಗಳು ಬ್ಲಡ್ ಶುಗರ್ ಅನ್ನು ಸದಾ ನಿಯಂತ್ರಣದಲ್ಲಿಯೇ ಇಟ್ಟುಕೊಳ್ಳಲು ಸಹಾಯ ಮಾಡುತ್ತದೆ.
ಕೊತ್ತಂಬರಿ ಸೊಪ್ಪು ಸಕ್ಕರೆ ಮಟ್ಟವನ್ನು ನಿಯಂತ್ರಿಸುವಲ್ಲಿ ಪರಿಣಾಮಕಾರಿಯಾಗಿದೆ. ಇದರಲ್ಲಿರುವ ಉತ್ಕರ್ಷಣ ನಿರೋಧಕಗಳು ಮತ್ತು ಸಾರಭೂತ ತೈಲಗಳು ಇನ್ಸುಲಿನ್ ಚಟುವಟಿಕೆಯನ್ನು ಹೆಚ್ಚಿಸುತ್ತದೆ.
ಕೊತ್ತಬರಿ ಸೊಪ್ಪು ನೆನೆಸಿಟ್ಟ ನೀರು ಸೇವಿಸುವುದರಿಂದ ಮಧುಮೇಹ ಅಥವಾ ಪ್ರಿಡಿಯಾಬಿಟಿಸ್‌ನಿಂದ ಬಳಲುತ್ತಿರುವ ಬಹಳ ಹೆಚ್ಚಿನ ಪ್ರಮಾಣದಲ್ಲಿ ಪ್ರಯೋಜನಕಾರಿಯಾಗಲಿದೆ.
ಕೊತ್ತಂಬರಿ ಸೊಪ್ಪಿನ ನೀರನ್ನು ಕುಡಿಯುವುದರಿಂದ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಬಹುದು. ಇದು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವ ಸಂಯುಕ್ತಗಳನ್ನು ಒಳಗೊಂಡಿದೆ ಹಾಗಾಗಿ ಹೃದಯ ಸಂಬಂಧಿ ಸಮಸ್ಯೆಗಳನ್ನು ದೂರವಿಡುವಲ್ಲಿ ಇದು ಪರಿಣಾಮಕಾರಿ ಎಂದು ಪರಿಗಣಿಸಲಾಗಿದೆ.
ಕೊತ್ತಂಬರಿ ನೀರಿನಲ್ಲಿ ಕಡಿಮೆ ಕ್ಯಾಲೋರಿ ಅಂಶವಿದೆ.ಊಟಕ್ಕೆ ಮುಂಚಿತವಾಗಿ ಇದನ್ನು ಸೇವಿಸುವುದರಿಂದ ಅತಿಯಾದ ಆಹಾರ ಸೇವನೆಗಾಗಿ ಕಡುಬಯಕೆಗಳನ್ನು ಕಡಿಮೆ ಮಾಡುತ್ತದೆ. ಇದು ದೇಹದ ಹೆಚ್ಚುವರಿ ಕೊಬ್ಬನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಕೊತ್ತಂಬರಿ ನೀರು ನೈಸರ್ಗಿಕವಾಗಿ ಜೀರ್ಣಕಾರಿ ಶಕ್ತಿಯನ್ನು ಬಲಪಡಿಸುವ ಗುಣವನ್ನು ಹೊಂದಿದೆ.ಇದು ಹೊಟ್ಟೆಯಲ್ಲಿ ಊತವನ್ನು ಕಡಿಮೆ ಮಾಡಬಹುದು.ಕೊತ್ತಂಬರಿ ಸೊಪ್ಪಿನಲ್ಲಿರುವ ಸಂಯುಕ್ತಗಳು ಜೀರ್ಣಕಾರಿ ಕಿಣ್ವಗಳ ಸ್ರವಿಸುವಿಕೆಯನ್ನು ಉತ್ತೇಜಿಸುತ್ತದೆ.
ಸೂಚನೆ: ಪ್ರಿಯ ಓದುಗರೇ, ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ.