ಕರೋನಾ ಲಕ್ಷಣ ಕಂಡುಬಂದಲ್ಲಿ ವೈದ್ಯರ ಸಲಹೆಯಿಲ್ಲದೆ ಕೆಲ ಔಷಧಿಗಳನ್ನು ತೆಗೆದುಕೊಳ್ಳದಂತೆ ಐಸಿಎಂಆರ್ ತಿಳಿಸಿದೆ.
ನವದೆಹಲಿ: ಕೊರೊನಾವೈರಸ್ನಿಂದ (Coronavirus) ಬಳಲುತ್ತಿರುವವರು ಸೂಕ್ತ ಚಿಕಿತ್ಸೆಯ ಮೂಲಕ ಮನೆಯಲ್ಲಿಯೇ ಚೇತರಿಸಿಕೊಳ್ಳುತ್ತಿದ್ದಾರೆ. ಸರಿಯಾದ ಕಾಳಜಿ ಮತ್ತು ಸರಿಯಾದ ಔಷಧಿಗಳನ್ನು (Medicine) ತೆಗೆದುಕೊಂಡರೆ ಸಂಭವಿಸಬಹುದಾದ ಅಪಾಯವನ್ನು ತಪ್ಪಿಸಬಹುದು. ಈ ಮಧ್ಯೆ, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಕೆಲವು ಔಷಧಿಗಳ ಹೆಸರನ್ನು ಸೂಚಿಸಿದೆ. ಕರೋನಾ (COVID-19) ಲಕ್ಷಣ ಕಾಣಿಸಿಕೊಂಡರೆ ವೈದ್ಯರ ಸಲಹೆಯಿಲ್ಲದೆ ಈ ಔಷಧಿಗಳನ್ನು ತೆಗೆದುಕೊಳ್ಳದಂತೆ ಸೂಚಿಸಿದೆ. ವೈದ್ಯರ ಸಲಹೆಯಿಲ್ಲದೆ ಈ ಔಷಧಿಗಳನ್ನು ತೆಗೆದುಕೊಂಡರೆ, ಸಮಸ್ಯೆಗಳು ಕಡಿಮೆಯಾಗುವುದಕ್ಕಿಂತ ಉಲ್ಬಣಗೊಳ್ಳುವ ಅಪಾಯವಿದೆ ಎಂದು ಅದು ಹೇಳಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
ಹೃದಯ ರೋಗಿಗಳಿಗೆ ಅಪಾಯಕಾರಿ ಎಂದು ಪರಿಗಣಿಸಲಾದ ಇಬುಪ್ರೊಫೇನ್ (Ibuprofen) ನಂತಹ ಕೆಲವು ನೋವು ನಿವಾರಕಗಳು ಕೋವಿಡ್ -19 ರೋಗಲಕ್ಷಣಗಳನ್ನು ಉಲ್ಬಣಗೊಳಿಸಬಹುದು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಹೇಳಿದೆ. ಇವು ಮೂತ್ರಪಿಂಡ ವೈಫಲ್ಯದ ಅಪಾಯವನ್ನು ಹೆಚ್ಚಿಸಬಹುದು.
ನಾನ್ 'ಸ್ಟಿರಾಯ್ಡ್ ಆಂಟಿ ಇನ್ ಫ್ಲೆಮೇಟರಿ ಔಷಧಿಗಳನ್ನು ತೆಗೆದುಕೊಳ್ಳುವ ಬದಲು ಅನಾರೋಗ್ಯದ ಸಮಯದಲ್ಲಿ ಪ್ಯಾರಸಿಟಮಾಲ್ (Paracetamol) ತೆಗೆದುಕೊಳ್ಳಬೇಕು ಎಂದು ಐಸಿಎಂಆರ್ ಸೂಚಿಸಿದೆ.
ಹೃದಯ ರೋಗಿಗಳು, ಮಧುಮೇಹ ಅಥವಾ ಅಧಿಕ ರಕ್ತದೊತ್ತಡ ಹೊಂದಿರುವ ರೋಗಿಗಳಿಗೆ ಕರೋನಾ ಸೋಂಕು ಹರಡುವ ಅಪಾಯ ಅಧಿಕವಾಗಿರುವುದಿಲ್ಲ. ಆದರೆ, ಕರೋನಾಗೆ ಸಂಬಂಧಪಟ್ಟ ಯಾವುದೇ ಲಕ್ಷಣ ಕಂಡು ಬಂದರೂ ತಕ್ಷಣ ಕರೋನಾ ಪರೀಕ್ಷೆಗೆ ಒಳಗಾಗುವುದು ಅವಶ್ಯಕ.
ಮಧುಮೇಹ, ಅಧಿಕ ರಕ್ತದೊತ್ತಡ ಮತ್ತು ದುರ್ಬಲ ಹೃದಯ ಹೊಂದಿರುವ ಕೆಲವು ಜನರು ಹೆಚ್ಚು ತೀವ್ರವಾದ ರೋಗಲಕ್ಷಣಗಳನ್ನು ಹೊಂದಿರಬಹುದು. ಅವರಿಗೆ ಹೆಚ್ಚುವರಿ ಕಾಳಜಿ ಅಗತ್ಯ ಎಂದು ಐಸಿಎಂಆರ್ ಹೇಳಿದೆ.