ಬರೀ ಈ ನೀರನ್ನು ಕುಡಿದು ನೋಡಿ 15 ದಿನಗಳಲ್ಲಿ ಸಣ್ಣಗಾಗುವುದು ಗ್ಯಾರಂಟಿ ! ಹಠಮಾರಿ ಬೊಜ್ಜು ಕೂಡಾ ಕರಗಿ ನೀರಾಗುವುದು !
ಕೆಲವು ಮಸಾಲೆಯನ್ನು ನಾವು ನಿತ್ಯದ ಅಡುಗೆಯಲ್ಲಿ ಬಳಸುತ್ತೇವೆ. ಅಂಥಹ ಮಸಾಲೆಯಲ್ಲಿ ಒಂದು ಜೀರಿಗೆ. ಜೀರಿಗೆ ಫೈಬರ್ ಮತ್ತು ಪೊಟ್ಯಾಸಿಯಮ್‌ನ ಉತ್ತಮ ಮೂಲವಾಗಿದೆ. ಜೀರಿಗೆ ಬೀಜಗಳನ್ನು ತಿನ್ನುವುದು ದೇಹದ ರೋಗ ನಿರೋಧಕ ಶಕ್ತಿಯನ್ನು ಕೂಡಾ ಹೆಚ್ಚಿಸುತ್ತದೆ. ಜೊತೆಗೆ ಇದು ತೂಕ ನಷ್ಟದಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.
ಜೀರಿಗೆ ಮತ್ತು ಕರಿಬೇವಿನ ಎಲೆಯ ನೀರು ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ರಾತ್ರಿ ಒಂದು ಲೋಟ ನೀರಿಗೆ 1 ಚಮಚ ಜೀರಿಗೆ ಮತ್ತು 5-7 ಕರಿಬೇವಿನ ಎಲೆಗಳನ್ನು ಹಾಕಿಡಿ. ಬೆಳಿಗ್ಗೆ ಈ ನೀರನ್ನು ಫಿಲ್ಟರ್ ಮಾಡಿ ಕುಡಿಯಿರಿ.ಪ್ರತಿದಿನ ಹೀಗೆ ಮಾಡುವುದರಿಂದ ತೂಕ ಕಳೆದುಕೊಳ್ಳುವುದು ಸಾಧ್ಯವಾಗುತ್ತದೆ.
ಜೀರಿಗೆ ಮತ್ತು ಕೊತ್ತಂಬರಿ ಎರಡೂ ತೂಕವನ್ನು ಕಡಿಮೆ ಮಾಡುವಲ್ಲಿ ಬಹಳ ಮುಖ್ಯ ಪಾತ್ರ ವಹಿಸುತ್ತದೆ. ಜೀರಿಗೆ ಮತ್ತು ಕೊತ್ತಂಬರಿ ಬೀಜಗಳನ್ನು ರಾತ್ರಿಯಿಡಿ ನೀರಿನಲ್ಲಿ ನೆನೆಸಿಟ್ಟು ಬೆಳಿಗ್ಗೆ ಈ ನೀರನ್ನು ಕುಡಿಯಬೇಕು. ಅಥವಾ ಜೀರಿಗೆ ಮತ್ತು ಕೊತ್ತಂಬರಿ ಬೀಜವನ್ನು ನೀರಿನಲ್ಲಿ ಹಾಕಿ ಕುದಿಸಿ ಕೂಡಾ ಆ ನೀರನ್ನು ಕುಡಿಯಬಹುದು.
ಜೀರಿಗೆಯಂತೆ, ನಿಂಬೆ ಕೂಡಾ ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ . 2 ಚಮಚ ಜೀರಿಗೆ ಬೀಜಗಳನ್ನು ಒಂದು ಲೋಟ ನೀರಿನಲ್ಲಿ ನೆನೆಸಿಡಿ. ಬೆಳಿಗ್ಗೆ ಈ ನೀರನ್ನು ಚೆನ್ನಾಗಿ ಕುದಿಸಿ. ಈ ನೀರಿಗೆ ನಿಂಬೆ ರಸ ಬೆರೆಸಿ ಕುಡಿಯಿರಿ.ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಈ ನೀರನ್ನು ಕುಡಿದರೆ ಸುಲಭವಾಗಿ ತೂಕ ಕಡಿಮೆಯಾಗುತ್ತದೆ.
ಜೀರಿಗೆ, ನಿಂಬೆಯಂತೆ ಚಕ್ಕೆ ಕೂಡಾ ತೂಕ ನಷ್ಟಕ್ಕೂ ಸಹಾಯ ಮಾಡುತ್ತದೆ. ಜೀರಿಗೆ ಮತ್ತು ಚಕ್ಕೆಯನ್ನು ನೀರಿನಲ್ಲಿ ಹಾಕಿ ಕುದಿಸಿ ಆ ನೀರನ್ನು ಕುಡಿಯಬಹುದು. ಇದಕ್ಕಾಗಿ, 1 ಚಮಚ ಜೀರಿಗೆ ಮತ್ತು ಚಕ್ಕೆ ತುಂಡುಗಳನ್ನು ಒಂದು ಲೋಟ ನೀರಿನಲ್ಲಿ ಹಾಕಿ ರಾತ್ರಿಯಿಡೀ ನೆನೆಸಿಡಬೇಕು. ಬೆಳಿಗ್ಗೆ ಅದೇ ನೀರನ್ನು ಕುದಿಸಿ ಕುಡಿಯಬೇಕು. ( ಸೂಚನೆ: ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ.)