ಬಿಳಿ ಕೂದಲು ಗಾಢ ಕಪ್ಪು ಬಣ್ಣಕ್ಕೆ ತಿರುಗಬೇಕಾದರೆ ಮೊಸರಿಗೆ ಈ ಹಣ್ಣಿನ ರಸ ಬೆರೆಸಿ ಹಚ್ಚಿ! ತಿರುಗಿ ಬರುವುದೇ ಇಲ್ಲ ವೈಟ್ ಹೇರ್
ತಲೆಯಲ್ಲಿ ಮೊದಲು ಕಾಣಿಸಿಕೊಳ್ಳುವ ಒಂದು ಬಿಳಿ ಕೂದಲು ಮತ್ತೆ ನೂರಾಗುವುದಕ್ಕೆ ಹೆಚ್ಚು ಕಾಲ ತೆಗೆದುಕೊಳ್ಳುವುದಿಲ್ಲ.
ಹೀಗೆ ಕೂದಲು ಬಿಳಿಯಾಗುವುದನ್ನು ತಡೆಯಲು ಮತ್ತು ಬಿಳಿ ಕೂದಲು ಕಪ್ಪು ಬಣ್ಣಕ್ಕೆ ತಿರುಗುವಂತೆ ಮಾಡಲು ಕೆಲವು ನೈಸರ್ಗಿಕ ಮತ್ತು ಶಾಶ್ವತ ಪರಿಹಾರಗಳಿವೆ.
ಟೊಮೆಟೊವನ್ನು ರುಬ್ಬಿಕೊಂಡು ಅದಕ್ಕೆ ಮೊಸರು ಸೇರಿಸಿ ಮಿಶ್ರಣ ಮಾಡಿಕೊಳ್ಳಿ. ಈ ಪೇಸ್ಟ್‌ಗೆ ನೀಲಗಿರಿ ಎಣ್ಣೆಯನ್ನು ಕೂಡಾ ಸೇರಿಸಿ.ನಂತರ ಈ ಮಿಶ್ರಣವನ್ನು ಕೂದಲಿಗೆ ಹಚ್ಚಿ ಮಸಾಜ್ ಮಾಡಿ. ಬಿಳಿ ಕೂದಲನ್ನು ಕಪ್ಪಾಗಿಸಲು ಇದು ಬೆಸ್ಟ್ ಮದ್ದು.
ಈರುಳ್ಳಿ ರಸಕ್ಕೆ ಜೇನುತುಪ್ಪವನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ ಕೂದಲಿಗೆ ಹಚ್ಚಬೇಕು.ನಿಯಮಿತವಾಗಿ ಹೀಗೆ ಮಾಡುವುದರಿಂದ ಬಿಳಿ ಕೂದಲಿನಿಂದ ಮುಕ್ತಿ ಪಡೆಯಬಹುದು.
ಕೂದಲು ಕಪ್ಪಾಗಲು ಕರಿಬೇವನ್ನು ಚೆನ್ನಾಗಿ ರುಬ್ಬಿಕೊಂಡು ತೆಂಗಿನೆಣ್ಣೆಯೊಂದಿಗೆ ಬೆರೆಸಿ.ಸ್ನಾನಕ್ಕೆ ಎರಡು ಗಂಟೆಗಳ ಮೊದಲು ಈ ಮಿಶ್ರಣವನ್ನು ಹಚ್ಚುವುದರಿಂದ ಉತ್ತಮ ಫಲಿತಾಂಶ ಸಿಗುತ್ತದೆ.
ಸೂಚನೆ: ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.