ಮೊಸರಿಗೆ ಒಂದು ಚಮಚ ಈ ವಸ್ತು ಬೆರೆಸಿ!ಹಾರ್ಟ್ ಬ್ಲೋಕೆಜ್ ಗೆ ಕಾರಣವಾಗುವ ಕೊಲೆಸ್ಟ್ರಾಲ್ ಸುಲಭವಾಗಿ ಕರಗುತ್ತದೆ!ಹೃದಯಾಘಾತದ ಅಪಾಯಕ್ಕೂ ಬೀಳುವುದು ಬ್ರೇಕ್ !
ಕೆಲವು ಮನೆಮದ್ದುಗಳ ಸಹಾಯದಿಂದ ದೇಹದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಬಹುದು.ಈ ಒಂದು ಪರಿಣಾಮಕಾರಿ ಮನೆ ಮದ್ದಿನ ಸಹಾಯದಿಂದ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಅತಿ ಶೀಘ್ರದಲ್ಲಿ ಕರಗಿಸಬಹುದು.
ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು,ಮೊಸರಿನೊಂದಿಗೆ ಬೆರೆಸಿದ ಚಿಯಾ ಬೀಜಗಳನ್ನು ಸೇವಿಸಬಹುದು.ಚಿಯಾ ಬೀಜಗಳಲ್ಲಿ ಫೈಬರ್ ಹೇರಳವಾಗಿದ್ದು,ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ.
ಚಿಯಾ ಬೀಜ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕರಗಿಸಿ ಒಳ್ಳೆಯ ಕೊಲೆಸ್ಟ್ರಾಲ್ ಅನ್ನು ಹೆಚ್ಚು ಮಾಡುತ್ತದೆ.
ಮೊಸರು ಅಪಧಮನಿಗಳಲ್ಲಿ ಸಂಗ್ರಹವಾಗಿರುವ ಕೆಟ್ಟ ಕೊಲೆಸ್ಟ್ರಾಲ್ ಮತ್ತು ಟ್ರೈಗ್ಲಿಸರೈಡ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.ಮೊಸರು ಮತ್ತು ಚಿಯಾ ಬೀಜಗಳನ್ನು ಒಟ್ಟಿಗೆ ಸೇವಿಸುವುದರಿಂದ ಅಧಿಕ ಕೊಲೆಸ್ಟ್ರಾಲ್ ಸಮಸ್ಯೆಯಿಂದ ಬೇಗನೆ ಪರಿಹಾರ ಪಡೆಯಬಹುದು.
ಒಂದು ಚಮಚ ಚಿಯಾ ಬೀಜಗಳನ್ನು ಒಂದು ಲೋಟ ನೀರಿನಲ್ಲಿ ರಾತ್ರಿ ಪೂರ್ತಿ ನೆನೆಸಿ. ಮರುದಿನ ಬೆಳಿಗ್ಗೆ ಈ ಬೀಜಗಳನ್ನು ಮೊಸರಿನೊಂದಿಗೆ ಬೆರೆಸಿ ತಿನ್ನಿರಿ. ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಇದನ್ನು ಸೇವಿಸುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಇದರ ನಿಯಮಿತ ಸೇವನೆಯು ತೂಕವನ್ನು ಕಳೆದುಕೊಳ್ಳಲು ಮತ್ತು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಸೂಚನೆ : ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ.zee kannada news ಇದನ್ನು ಖಚಿತಪಡಿಸುವುದಿಲ್ಲ.