ಈ ಎಲೆಯನ್ನು ಜಗಿದು ರಸ ನುಂಗಿದರೆ ಸಾಕು.. ಬ್ಲಡ್ ಶುಗರ್ ನಿಯಂತ್ರಣಕ್ಕೆ ಬಂದು ಮಧುಮೇಹದಿಂದ ಬಾಧಿಸುವ ತುರಿಕೆ ಸಹ ಗುಣವಾಗುವುದು!
ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸದಿದ್ದರೆ ಮೂತ್ರಪಿಂಡ, ಹೃದಯ, ಚರ್ಮ, ಕಣ್ಣುಗಳಿಗೆ ಹಾನಿಯಾಗುತ್ತದೆ.
ಕರಿಬೇವಿನ ಎಲೆಗಳು ಮಧುಮೇಹ ರೋಗಿಗಳಿಗೆ ಬಹಳಷ್ಟು ಪ್ರಯೋಜನಕಾರಿಯಾಗಿದೆ. ಕರಿಬೇವಿನ ಎಲೆಯನ್ನು ದಿನನಿತ್ಯ ಸೇವಿಸುವುದರಿಂದ ಬ್ಲಡ್ ಶುಗರ್ ಕಂಟ್ರೋಲ್ ಮಾಡಬಹುದು.
ಕರಿಬೇವಿನ ಎಲೆಗಳು ಫೈಬರ್‌ನಲ್ಲಿ ಸಮೃದ್ಧವಾಗಿವೆ ಮತ್ತು ಫೈಬರ್ ಜೀರ್ಣಕ್ರಿಯೆಯನ್ನು ನಿಧಾನಗೊಳಿಸುತ್ತದೆ.
ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಡಲು ಪ್ರತಿನಿತ್ಯ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಕರಿಬೇವಿನ ಎಲೆ ಜಗಿದು ಅದರ ರಸ ನುಂಗಿರಿ.
ಕರಿಬೇವಿನ ಎಲೆ ಇನ್ಸುಲಿನ್ ಚಟುವಟಿಕೆಯನ್ನು ಹೆಚ್ಚಿಸುತ್ತದೆ. ಪ್ರತಿದಿನ ಬೆಳಿಗ್ಗೆ ಕೆಲವು ಕರಿಬೇವಿನ ಎಲೆಗಳನ್ನು ರುಬ್ಬಿ ಅದರ ರಸ ಕುಡಿಯಬಹುದು.
ಸೂಚನೆ: ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.