ಸೀತಾಫಲ ಹಣ್ಣು ಚಳಿಗಾಲದಲ್ಲಿ ಕಾಡುವ ಈ ಸಮಸ್ಯೆಗೆ ರಾಮಬಾಣ!
ಸೀಸನಲ್ ಹಣ್ಣುಗಳನ್ನು ಸೇವಿಸುವುದರಿಂದ ಆಯಾ ಕಾಲದಲ್ಲಿ ಬರುವ ಆರೋಗ್ಯ ಸಮಸ್ಯೆಗಳನ್ನು ನಿಯಂತ್ರಿಸಬಹುದು.
ಸೀತಾಫಲ ಹಣ್ಣುಗಳು ತುಂಬಾ ರುಚಿಯಾಗಿರುತ್ತವೆ. ಇದರ ಸೇವನೆ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ.
ಸೀತಾಫಲ ಹಣ್ಣುಗಳನ್ನು ಹೆಚ್ಚಾಗಿ ಜ್ಯೂಸ್, ಸಲಾಡ್ ಮತ್ತು ಐಸ್ ಕ್ರೀಮ್‌ಗಳಲ್ಲಿ ಬಳಸಲಾಗುತ್ತದೆ.
ಸೀತಾಫಲದಲ್ಲಿ ಹಲವಾರು ರೀತಿಯ ಪೋಷಕಾಂಶಗಳಿವೆ. ಸೀತಾಫಲ ಹಣ್ಣಿನ ಸೇವನೆಯಿಂದ ಶ್ವಾಸಕೋಶದ ಸಮಸ್ಯೆ ಕಡಿಮೆ ಆಗುತ್ತದೆ ಎನ್ನುತ್ತಾರೆ ಆರೋಗ್ಯ ತಜ್ಞರು.
ಸೀತಾಫಲ ಹಣ್ಣು ಶ್ವಾಸಕೋಶದಲ್ಲಿನ ಕಲ್ಮಶಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಶ್ವಾಸನಾಳದ ಟ್ಯೂಬ್‌ನಲ್ಲಿ ಉರಿಯೂತವನ್ನು ಕಡಿಮೆ ಮಾಡುತ್ತದೆ.
ಸೀತಾಫಲವನ್ನು ಪ್ರತಿದಿನ ಸೇವಿಸುವುದರಿಂದ ಶ್ವಾಸಕೋಶದಲ್ಲಿನ ಕಲ್ಮಶಗಳನ್ನು ಹೊರಹಾಕಲು ಸಹಾಯ ಮಾಡುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.