Custard apple: ಇಂತಹ ಜನರು ಅಪ್ಪಿತಪ್ಪಿಯೂ ಸೀತಾಫಲವನ್ನು ಸೇವಿಸಬಾರದು, ದೂರವಿದ್ದಷ್ಟು ಉತ್ತಮ

Custard apple benefits: ಸೀತಾಫಲ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಚಳಿಗಾಲ ಪ್ರಾರಂಭವಾದಾಗ ಎಲ್ಲರಿಗೂ ಸೀತಾಫಲ ನೆನಪಾಗುತ್ತದೆ. ಈ ಋತುವಿನಲ್ಲಿ ಲಭ್ಯವಿರುವ ಸೀತಾಫಲವನ್ನು ತಿನ್ನಲು ಪ್ರತಿಯೊಬ್ಬರೂ ಇಷ್ಟಪಡುತ್ತಾರೆ. ಆದರೆ ಮಧುಮೇಹ ಹೊಂದಿರುವ ಜನರು ಸೀತಾಫಲವನ್ನು ಅಪ್ಪಿತಪ್ಪಿಯೂ ತಿನ್ನಬಾರದು. 

Health Benefits of Sugar Apples: ನಿಯಮಿತವಾಗಿ ಸೀತಾಫಲ ಹಣ್ಣಿನ ಸೇವನೆಯಿಂದ ಹಲವಾರು ಆರೋಗ್ಯಕರ ಪ್ರಯೋಜನಗಳಿವೆ. ಸೀತಾಫಲವು ಹಲವಾರು ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಇದರ ಸೇವನೆಯಿಂದ ನೀವು ಹಲವಾರು ಕಾಯಿಲೆಗಳಿಂದ ಮುಕ್ತಿ ದೊರೆಯುತ್ತದೆ. ಈ ಹಣ್ಣು ಅನೇಕ ಔಷಧೀಯ ಗುಣಗಳನ್ನ ಹೊಂದಿದೆ. ಇದರ ಎಲೆಗಳು, ತೊಗಟೆ ಮತ್ತು ಬೇರು ಎಲ್ಲವೂ ಅನೇಕ ರೋಗಗಳನ್ನು ತಡೆಗಟ್ಟಲು ಬಳಸಲಾಗುತ್ತದೆ. ಸೀತಾಫಲ ಹಣ್ಣಿನ ಮತ್ತಷ್ಟು ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿಯಿರಿ...

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ಇತ್ತೀಚೆಗೆ ಕೆಲವು ಆರೋಗ್ಯ ತಜ್ಞರು ಸೀತಾಫಲ ಹಣ್ಣಿನ ಎಲೆಗಳು ಮಧುಮೇಹವನ್ನು ಕಡಿಮೆ ಮಾಡಲು ಮತ್ತು ತೂಕವನ್ನು ಕಳೆದುಕೊಳ್ಳುವ ಗುಣವನ್ನು ಹೊಂದಿದೆ ಎಂದು ತಿಳಿಸಿದ್ದಾರೆ.

2 /6

ಸೀತಾಫಲ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಚಳಿಗಾಲ ಪ್ರಾರಂಭವಾದಾಗ ಎಲ್ಲರಿಗೂ ಸೀತಾಫಲ ನೆನಪಾಗುತ್ತದೆ. ಈ ಋತುವಿನಲ್ಲಿ ಲಭ್ಯವಿರುವ ಸೀತಾಫಲವನ್ನು ತಿನ್ನಲು ಪ್ರತಿಯೊಬ್ಬರೂ ಇಷ್ಟಪಡುತ್ತಾರೆ. ಆದರೆ ಮಧುಮೇಹ ಹೊಂದಿರುವ ಜನರು ಸೀತಾಫಲವನ್ನು ಅಪ್ಪಿತಪ್ಪಿಯೂ ತಿನ್ನಬಾರದು. 

3 /6

ಮಧುಮೇಹ ಇರುವವರು ಸೀತಾಫಲವನ್ನು ತಿನ್ನಬಹುದೇ? ಈ ಬಗ್ಗೆ ವೈದ್ಯಕೀಯ ತಜ್ಞರು ಏನು ಹೇಳುತ್ತಾರೆ? ಪ್ರಸ್ತುತ ಅನೇಕ ಜನರು ಮಧುಮೇಹದಿಂದ ಬಳಲುತ್ತಿದ್ದಾರೆ. ಈ ಮಧುಮೇಹ ಕಾಯಿಲೆಯಿಂದ ಬಳಲುತ್ತಿರುವ ಹೆಚ್ಚಿನ ಜನರು ಭಾರತದಲ್ಲಿದ್ದಾರೆಂದು ಹಲವಾರು ಅಧ್ಯಯನಗಳು ತೋರಿಸಿವೆ. ಭಾರತವನ್ನು ಮಧುಮೇಹದ ರಾಜಧಾನಿ ಎಂದು ಕರೆಯಲಾಗುತ್ತದೆ.  

4 /6

ಇಂದು ಮಧುಮೇಹವು ದೊಡ್ಡವರಿರಲಿ ಅಥವಾ ಚಿಕ್ಕವರಿರಲಿ ಎಲ್ಲಾ ವಯಸ್ಸಿನ ಜನರಿಗೆ ದೊಡ್ಡ ಸಮಸ್ಯೆಯಾಗಿದೆ. ಬಿಡುವಿಲ್ಲದ ಜೀವನದಿಂದ ಬದಲಾದ ಆಹಾರ ಪದ್ಧತಿ ಮತ್ತು ಜೀವನಶೈಲಿಯೇ ಮಧುಮೇಹಕ್ಕೆ ಕಾರಣವೆಂದು ಆರೋಗ್ಯ ತಜ್ಞರು ಹೇಳುತ್ತಾರೆ.

5 /6

ಸೀತಾಫಲದಲ್ಲಿ ಆಂಟಿ-ಆಕ್ಸಿಡೆಂಟ್‌ಗಳು, ಕ್ಯಾರಟೆನಾಯ್ಡ್‌ಗಳು, ಫ್ಲೇವನಾಯ್ಡ್‌ಗಳು, ವಿಟಮಿನ್ ಸಿ, ಬಿ6, ಮೆಗ್ನೀಸಿಯಮ್, ಕ್ಯಾಲ್ಸಿಯಂ, ಪೊಟ್ಯಾಸಿಯಮ್ ಮತ್ತು ಫೈಬರ್ ಸಮೃದ್ಧವಾಗಿದೆ. ಆದರೆ ಮಧುಮೇಹದಿಂದ ಬಳಲುತ್ತಿರುವವರು ಹೆಚ್ಚಿನ ಗ್ಲೈಸೆಮಿಕ್ ಇಂಡೆಕ್ಸ್ ಇರುವ ಹಣ್ಣುಗಳನ್ನು ಸೇವಿಸುತ್ತಾರೆ. ಗ್ಲೈಸೆಮಿಕ್ ಇಂಡೆಕ್ಸ್ ಇರುವ ಹಣ್ಣುಗಳಲ್ಲಿ ಈ ಸೀತಾಫಲವೂ ಒಂದು. ಈ ಹಣ್ಣಿನಲ್ಲಿ ಫ್ರಕ್ಟೋಸ್ ಇರುವುದರಿಂದ ಮಧುಮೇಹಿಗಳಿಗೆ ಇದು ಒಳ್ಳೆಯದಲ್ಲ.

6 /6

ಇನ್ಸುಲಿನ್ ಬಳಸದ ಮಧುಮೇಹ ರೋಗಿಗಳು ಸೀತಾಫಲವನ್ನು ಮಿತವಾಗಿ ತೆಗೆದುಕೊಳ್ಳಬಹುದು. ಇದನ್ನು 15 ದಿನಕ್ಕೊಮ್ಮೆ ತಿನ್ನುವುದರಿಂದ ಅವರ ಸಕ್ಕರೆಯ ಮಟ್ಟದಲ್ಲಿ ಯಾವುದೇ ಬದಲಾವಣೆಯಾಗಲ್ಲ. ಆದರೆ ಇನ್ಸುಲಿನ್ ತೆಗೆದುಕೊಳ್ಳುವ ಮಧುಮೇಹ ರೋಗಿಗಳು ಈ ಹಣ್ಣನ್ನು ತಿನ್ನುವ ಮೂಲಕ ತಮ್ಮ ಸಕ್ಕರೆ ಮಟ್ಟವನ್ನು ಹೆಚ್ಚಿಸಬಹುದು. ಈ ಸಿಹಿ ಹಣ್ಣನ್ನು ಸೇವಿಸುವುದರಿಂದ ಅವರ ಸಕ್ಕರೆ ಪ್ರಮಾಣ ಹೆಚ್ಚಾದರೆ ಇನ್ಸುಲಿನ್ ಪ್ರಮಾಣವನ್ನು ಮತ್ತೊಮ್ಮೆ ಹೆಚ್ಚಿಸಬೇಕಾಗುತ್ತದೆ. ಅದಕ್ಕಾಗಿಯೇ ಮಧುಮೇಹದಿಂದ ಬಳಲುತ್ತಿರುವವರು ಈ ಹಣ್ಣನ್ನು ತಿನ್ನಬಾರದು ಎಂದು ಸಲಹೆ ನೀಡಲಾಗಿದೆ.