How To Control Uric ACid : ಯೂರಿಕ್ ಆಸಿಡ್ ಹೆಚ್ಚಾಗಿ ನಡೆದಾಡುವುದು ಕೂಡಾ ಕಷ್ಟ ಎನ್ನುವ ಹಂತ ತಲುಪುವ ಮುನ್ನ ದೈನಂದಿನ ಆಹಾರ ಮತ್ತು ಜೀವನಶೈಲಿಯನ್ನು ಬದಲಾಯಿಸುವುದು ಬಹಳ ಮುಖ್ಯ.
uric Acid control tips : ಯೂರಿಕ್ ಆಸಿಡ್ ಸಮಸ್ಯೆಯು ವೇಗವಾಗಿ ಬೆಳೆಯುತ್ತಿರುವ ಆರೋಗ್ಯ ಸಮಸ್ಯೆಗಳಲ್ಲಿ ಒಂದಾಗಿದೆ. ಈ ಸಮಸ್ಯೆ ಇರುವವರು ನಮ್ಮ ಸುತ್ತ ಬಹಳ ಜನ ಇದ್ದಾರೆ. ದೇಹದಲ್ಲಿ ಯೂರಿಕ್ ಆಸಿಡ್ ಹೆಚ್ಚಾದಾಗ, ಕಾಲು ಮತ್ತು ಕೈ ಗಂಟುಗಳು ಊದಿಕೊಳ್ಳುತ್ತವೆ. ಕೀಲುಗಳಲ್ಲಿ ವಿಪರೀತ ನೋವು ಉಂಟಾಗುತ್ತದೆ.ಸೂಕ್ತ ಸಮಯದಲ್ಲಿ ಯೂರಿಕ್ ಆಸಿಡ್ ಅನ್ನು ನಿಯಂತ್ರಿಸದಿದ್ದಲ್ಲಿ ಸ್ಥಿತಿಯು ತುಂಬಾ ಗಂಭೀರವಾಗುತ್ತದೆ. ನಡೆದಾಡುವುದು ಕೂಡಾ ಕಷ್ಟವಾಗುತ್ತದೆ.ಯೂರಿಕ್ ಆಸಿಡ್ ಹೆಚ್ಚಾಗಿ ನಡೆದಾಡುವುದು ಕೂಡಾ ಕಷ್ಟ ಎನ್ನುವ ಹಂತ ತಲುಪುವ ಮುನ್ನ ದೈನಂದಿನ ಆಹಾರ ಮತ್ತು ಜೀವನಶೈಲಿಯನ್ನು ಬದಲಾಯಿಸುವುದು ಬಹಳ ಮುಖ್ಯ.ಇದಲ್ಲದೆ,ಕೆಲವು ಮನೆಮದ್ದುಗಳನ್ನು ಮಾಡುವ ಮೂಲಕವೂ ಯೂರಿಕ್ ಆಮ್ಲವನ್ನು ನಿಯಂತ್ರಿಸಬಹುದು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ದೇಹದಲ್ಲಿ ಯೂರಿಕ್ ಆಸಿಡ್ ಹೆಚ್ಚಾಗಿದ್ದರೆ ನೀರಿನ ಸೇವನೆಯನ್ನು ಹೆಚ್ಚಿಸಬೇಕು.ಇದು ನಮ್ಮ ಮೂತ್ರಪಿಂಡಗಳು ದೇಹದಿಂದ ವಿಷವನ್ನು ಇರ ಹಾಕಲು ಸಹಾಯ ಮಾಡುತ್ತದೆ.ಯೂರಿಕ್ ಆಸಿಡ್ ಸಮಸ್ಯೆ ಇದ್ದರೆ ದಿನಕ್ಕೆ ಎಂಟರಿಂದ ಹತ್ತು ಲೋಟ ನೀರು ಕುಡಿಯುವುದು ಅಗತ್ಯ.
ಯೂರಿಕ್ ಆಸಿಡ್ ಅಧಿಕವಾಗಿದ್ದರೆ ಆಲಿವ್ ಎಣ್ಣೆಯನ್ನು ಆಹಾರದಲ್ಲಿ ಬಳಸಬೇಕು.ಇದು ನೈಸರ್ಗಿಕವಾಗಿ ಯೂರಿಕ್ ಆಸಿಡ್ ಅನ್ನು ಕಡಿಮೆ ಮಾಡುತ್ತದೆ.
ಓಮ ಕಾಳು ಆಹಾರದ ರುಚಿಯನ್ನು ಹೆಚ್ಚಿಸುವ ಮತ್ತು ಆರೋಗ್ಯ ಪ್ರಯೋಜನಗಳನ್ನು ಹೊಂದಿರುವ ಮಸಾಲೆಯಾಗಿದೆ.ಒಯ್ದು ಯೂರಿಕ್ ಆಸಿಡ್ ಅನ್ನು ನಿಯಂತ್ರಣದಲ್ಲಿ ಇಡಲು ಸಹಾಯ ಮಾಡುತ್ತದೆ. ಓಮ ಕಾಳಿನ ನೀರನ್ನು ನಿಯಮಿತವಾಗಿ ಕುಡಿಯುವುದರಿಂದ ಯೂರಿಕ್ ಆಸಿಡ್ ನಿಯಂತ್ರಣದಲ್ಲಿರುತ್ತದೆ.
ಸಾಕಷ್ಟು ನಿದ್ರೆ ಮಾಡದಿದ್ದರೆ ಯೂರಿಕ್ ಆಸಿಡ್ ಹೆಚ್ಚಾಗುತ್ತದೆ. ನಿಯಮಿತವಾಗಿ ಏಳರಿಂದ ಎಂಟು ಗಂಟೆಗಳ ನಿದ್ದೆ ಮಾಡುವುದು ಯೂರಿಕ್ ಆಸಿಡ್ ನಿಯಂತ್ರಣಕ್ಕೆ ಸಹಾಯಕ .
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ZEE KANNADA NEWS ಇದನ್ನು ಖಚಿತಪಡಿಸುವುದಿಲ್ಲ