Dandruff: ತಲೆ ಹೊಟ್ಟಿನಿಂದ ಮುಕ್ತಿ ಪಡೆಯಲು ಈ ಸಿಂಪಲ್ ಸಲಹೆಗಳನ್ನು ಪಾಲಿಸಿ
)
ಸಾಮಾನ್ಯವಾಗಿ ಕೂದಲಿನ ಬುಡ ಒಣಗಿದಾಗ ತಲೆ ಹೊಟ್ಟಿನ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಆಗ ಕೂದಲಿಗೆ ಚೆನ್ನಾಗಿ ಎಣ್ಣೆ ಮಸಾಜ್ ಮಾಡುವುದರಿಂದ ತಲೆ ಹೊಟ್ಟು ನಿವಾರಣೆಯಾಗುತ್ತದೆ.
)
ವಾರಕ್ಕೊಮ್ಮೆ ಮೊಟ್ಟೆಯ ಹಳದಿ ಭಾಗವನ್ನು ತಲೆಗೆ ಹಚ್ಚಿಕೊಂಡು 1 ಗಂಟೆಯ ನಂತರ ತೊಳೆಯುವುದರಿಂದ ತಲೆ ಹೊಟ್ಟು ನಿವಾರಣೆಯಾಗುವುದಲ್ಲದೇ ತಲೆ ಕೂದಲೂ ಸಹ ಸೊಂಪಾಗಿ ಬೆಳೆಯುತ್ತದೆ.
)
ವಾರಕ್ಕೊಮ್ಮೆ ಲೋಳೆ ರಸವನ್ನು ತಲೆಗೆ ಹಚ್ಚಿ ಶ್ಯಾಂಪೂ ಬಳಸದೆ ಹಾಗೆಯೇ ತೊಳೆಯುವುದರಿಂದಲೂ ಸಹ ತಲೆಹೊಟ್ಟು ನಿವಾರಣೆಯಾಗುತ್ತದೆ.
ತಲೆ ಸ್ನಾನ ಮಾಡುವಾಗ ಶ್ಯಾಂಪೂ ಬಳಸುವುದರ ಬದಲು ಸೀಗೆಕಾಯಿ ಬಳಸುವುದರಿಂದ ತಲೆಹೊಟ್ಟು ನಿವಾರಣೆಯಾಗುವುದಲ್ಲದೇ ಅದು ಮತ್ತೆ ಬರದಂತೆ ತಡೆಗಟ್ಟಬಹುದು.
1 ಚಮಚ ಅಡುಗೆ ಸೋಡಾವನ್ನು ನೀರಿನಲ್ಲಿ ಬೆರೆಸಿ 5 ನಿಮಿಷದ ನಂತರ ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯುವುದರಿಂದ ತಲೆಹೊಟ್ಟು ನಿವಾರಣೆಯಾಗುತ್ತದೆ.