ಐದು ರಾಶಿಯವರಿಗೆ ಈ ಮಾಸದಲ್ಲಿ ಸಿಗುವುದು ವೃತ್ತಿ ಜೀವನದಲ್ಲಿ ಯಶಸ್ಸು, ಪ್ರಾಪ್ತಿಯಾಗುವುದು ಧನ ಸಂಪತ್ತು
ಮಿಥುನ ರಾಶಿ : ಸೂರ್ಯ, ಬುಧ ಮತ್ತು ಶುಕ್ರನ ಸಂಚಾರವು ಮಿಥುನ ರಾಶಿಯವರಿಗೆ ಪ್ರಯೋಜನಕಾರಿಯಾಗಿರಲಿದೆ. ಈ ಸಮಯದಲ್ಲಿ, ಒತ್ತಡದ ಜೀವನದಿಂದ ಮುಕ್ತಿ ಸಿಗಲಿದೆ. ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ವ್ಯಾಪಾರಸ್ಥರಿಗೆ ಲಾಭವಾಗುವ ಸಾಧ್ಯತೆ ಇದೆ.
ವೃಶ್ಚಿಕ ರಾಶಿ : ಡಿಸೆಂಬರ್ ತಿಂಗಳ ಗ್ರಹಗಳ ಸಂಚಾರವು ವೃಶ್ಚಿಕ ರಾಶಿಯವರಿಗೆ ಅನುಕೂಲಕರವಾಗಿರುತ್ತದೆ. ಮೂರೂ ಗ್ರಹಗಳ ಸಂಕ್ರಮಣ ಇ ರಾಶಿಯವರಿಗೆ ಉತ್ತಮ ಲಾಭವನ್ನು ನೀಡುತ್ತದೆ. ನಿಂತು ಹೋಗಿದ್ದ ಕೆಲಸ ಕಾರ್ಯಗಳು ಮತ್ತೆ ವೇಗ ಪಡೆಯಲಿವೆ. ಉದ್ಯೋಗಿಗಳಿಗೆ ಕಚೇರಿಯಲ್ಲಿ ಪ್ರಶಂಸೆ ಸಿಗುವುದು.
ಮಕರ ರಾಶಿ : ಬುಧ, ಸೂರ್ಯ ಮತ್ತು ಶುಕ್ರ ಗ್ರಹಗಳ ರಾಶಿ ಬದಲಾವಣೆಯು ಮಕರ ರಾಶಿಯವರಿಗೆ ಆರ್ಥಿಕ ಸ್ಥಿತಿಯನ್ನು ಸುಧಾರಿಸಲಿದೆ. ಉದ್ಯೋಗದಲ್ಲಿ ಉತ್ತಮ ಪ್ರಗತಿಯಾಗುವ ಸಾಧ್ಯತೆಗಳಿವೆ. ನಿಮ್ಮ ಗುರಿಯತ್ತ ಗಮನ ಹರಿಸಿದರೆ, ಗುರಿ ಸಾಧಿಸುವುದರಲ್ಲಿ ಯಶಸು ಸಿಗಲಿದೆ.
ಕುಂಭ ರಾಶಿ : ಡಿಸೆಂಬರ್ನಲ್ಲಿ ಗ್ರಹಗಳ ರಾಶಿ ಬದಲಾವಣೆಯು ಕುಂಭ ರಾಶಿಯವರಿಗೆ ಫಲಕಾರಿಯಾಗಿರಲಿದೆ. ಉದ್ಯೋಗಸ್ಥರಿಗೆ ಈ ತಿಂಗಳು ವರದಾನದಂತೆ ಇರಲಿದೆ. ನೀವು ಮಾಡುವ ಎಲ್ಲಾ ಕೆಲಸಗಳಲ್ಲಿ ಹಿರಿಯರ ಆಶೀರ್ವಾದ ಇರಲಿದೆ.
ಮೀನ ರಾಶಿ : ಬುಧ, ಶುಕ್ರ ಮತ್ತು ಸೂರ್ಯನ ಸಂಚಾರವು ಮೀನ ರಾಶಿಯವರಿಗೆ ಬಹಳಷ್ಟು ಲಾಭವನ್ನು ತರಲಿದೆ. ಕೆಲವು ಸಣ್ಣ ಪುಟ್ಟ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಆದರೆ ಆದಾಯ ಹೆಚ್ಚಾಗುತ್ತದೆ. ಕಠಿಣ ಪರಿಶ್ರಮದ ಫಲಿತಾಂಶ ಸಿಗಲಿದೆ.
( ಸೂಚನೆ : ಇಲ್ಲಿ ನೀಡಲಾದ ಲೇಖನವು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಅದನ್ನು ಖಚಿತಪಡಿಸುವುದಿಲ್ಲ.)