ಭಾರತರತ್ನ ಅಟಲ್ ಬಿಹಾರಿ ವಾಜಪೇಯಿಗೆ ಗಣ್ಯರಿಂದ ಅಂತಿಮ ನಮನ : Photos

  

  • Aug 17, 2018, 19:11 PM IST
1 /12

ಕಿಡ್ನಿ ಮತ್ತು ಮೂತ್ರನಾಳದ ಸೋಂಕಿನಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ(93) ಅವರನ್ನು ಜೂ. 11ರಂದು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆಗಸ್ಟ್ 16ರಂದು ವಿಧಿವಶರಾದರು. 

2 /12

ವಾಜಪೇಯಿ ಅವರ ಪಾರ್ಥಿವ ಶರೀರವನ್ನು ಬಿಜೆಪಿ ಮುಖ್ಯ ಕಚೇರಿಯಲ್ಲಿ ದರ್ಶನಕ್ಕೆ ಇಡಲಾಗಿತ್ತು. 

3 /12

ನಂತರ ಬಿಜೆಪಿ ಮುಖ್ಯ ಕಚೇರಿಯಿಂದ ರಾಷ್ಟ್ರೀಯ ಸ್ಮೃತಿ ಸ್ಥಳಕ್ಕೆ ನಡೆದ ಅಂತಿಮ ಯಾತ್ರೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಸೇರಿದಂತೆ ಅನೇಕ ನಾಯಕರು ಜನರೊಂದಿಗೆ ನಡೆದೇ ಸಾಗಿದರು.

4 /12

ಅಟಲ್ ಬಿಹಾರಿ ವಾಜಪೇಯಿ ಅವರ ಅಂತಿಮ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಜನಸ್ತೋಮ

5 /12

ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ, ರಾಷ್ಟ್ರಪತಿ ರಾಮನಾಥ್ ಕೋವಿಂದ್, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಸೇರಿದಂತೆ ಅಂತಾರಾಷ್ಟ್ರೀಯ ನಾಯಕರೂ ಸಹ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. 

6 /12

ಪ್ರಧಾನಿ ನರೇಂದ್ರ ಮೋದಿ ಅಂತಿಮ ನಮನ ಸಲ್ಲಿಸಿದರು. 

7 /12

ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮ್ ಅಂತಿಮ ನಮನ ಸಲ್ಲಿಸಿದರು.

8 /12

 ಲೋಕಸಭಾ ಸಭಾಪತಿ ಸುಮಿತ್ರಾ ಮಹಾಜನ್ ಅಂತಿಮ ನಮನ ಸಲ್ಲಿಸಿದರು. 

9 /12

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಉಪಸ್ಥಿತಿಯಲ್ಲಿ ಸಕಲ ಸರ್ಕಾರಿ ಗೌರವ ಸಲ್ಲಿಕೆ. 

10 /12

ಭೂತಾನ್ ದೊರೆ ಜಿಗ್ಮೆ ಖೇಸರ್ ನಮ್ಗ್ಯಾಲ್ ವಾಂಗ್ ಚುಕ್ ಅವರಿಂದ ಅಂತಿಮ ನಮನ.

11 /12

ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿದ ಅಂತ್ಯ ಸಂಸ್ಕಾರದಲ್ಲಿ ಶಾಂತಿ ಮಂತ್ರ ಘೋಷಗಳು ಮೊಳಗಿದವು. ವಾಜಪೇಯಿ ಪಾರ್ಥಿವ ಶರೀರದ ಮೇಲೆ ಹೊದಿಸಿದ್ದ ರಾಷ್ಟ್ರಧ್ವಜವನ್ನು ಪುತ್ರಿ ನಮಿತಾ ಭಟ್ಟಾಚಾರ್ಯ ಪಡೆದರು.

12 /12

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಅಂತ್ಯ ಸಂಸ್ಕಾರ ಶುಕ್ರವಾರ ಸಂಜೆ 4.55ಕ್ಕೆ ದೆಹಲಿಯ ರಾಷ್ಟ್ರೀಯ ಸ್ಮೃತಿ ಸ್ಥಳದಲ್ಲಿ ನೆರವೇರಿತು.