Detox Liver: ಶೀತ ವಾತಾವರಣದಲ್ಲಿ ಲಿವರ್ ಆರೋಗ್ಯಕ್ಕೆ ಹೀಗೆ ಮಾಡಿ

Tue, 20 Dec 2022-7:31 pm,

ಬೆಚ್ಚಗಿನ ನೀರಿನಿಂದ ನಿಂಬೆ ಕುಡಿಯುವುದರ ಮೂಲಕ ನಿಮ್ಮ ಯಕೃತ್ತನ್ನು ಸಹ ನೀವು ಡಿಟಾಕ್ಸ್ ಮಾಡಬಹುದು. ಇದನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬಳಸಬಹುದು.

ಯಕೃತ್ತನ್ನು ಸ್ವಚ್ಛವಾಗಿಡಲು ನಿಮ್ಮ ಆಹಾರದಲ್ಲಿ ನೀವು ಹಣ್ಣುಗಳು ಮತ್ತು ತರಕಾರಿಗಳನ್ನು ಸೇರಿಸಿಕೊಳ್ಳಬೇಕು. ಇದು ಯಕೃತ್ತಿನಿಂದ ವಿಷವನ್ನು ತೆಗೆದುಹಾಕುವ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ.

ಮದ್ಯಪಾನ ಮತ್ತು ಧೂಮಪಾನವನ್ನು ತ್ಯಜಿಸುವ ಮೂಲಕ ನಿಮ್ಮ ಯಕೃತ್ತಿನ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಏಕೆಂದರೆ ಆಲ್ಕೋಹಾಲ್ ಸೇವನೆಯು ನಿಮ್ಮ ಯಕೃತ್ತಿಗೆ ತುಂಬಾ ಹಾನಿಕಾರಕವಾಗಿದೆ. ಆದ್ದರಿಂದ ಅದರಿಂದ ಆದಷ್ಟು ದೂರವಿರುವುದು ಉತ್ತಮ.

ಪ್ರತಿದಿನವೂ ನೀವು ಸಾಕಷ್ಟು ನೀರು ಕುಡಿಯಬೇಕು. ದಿನಕ್ಕೆ 8 ಗ್ಲಾಸ್ ನೀರು ಕುಡಿಯುವುದು ಆರೋಗ್ಯದ ದೃಷ್ಟಿಯಿಂದ ಉತ್ತಮ. ಹೀಗೆ ಮಾಡುವುದರಿಂದ ನಿಮ್ಮ ಯಕೃತ್ತನ್ನು ನಿರ್ವಿಷಗೊಳಿಸಬಹುದು.

ಲಿವರ್ ಆರೋಗ್ಯವಾಗಿರಲು ವ್ಯಾಯಾಮ ಮಾಡಬೇಕು. ಪ್ರತಿದಿನ ವ್ಯಾಯಾಮ ಮಾಡುವುದು ಯಕೃತ್ತಿಗೆ ತುಂಬಾ ಪ್ರಯೋಜನಕಾರಿ. ಅದಕ್ಕಾಗಿಯೇ ಪ್ರತಿದಿನ 30 ನಿಮಿಷಗಳ ಕಾಲ ವ್ಯಾಯಾಮ ಮಾಡಿ.

(ವಿಶೇಷ ಸೂಚನೆ: ಇಲ್ಲಿ ನೀಡಲಾಗಿರುವ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿ ಆಧರಿಸಿದೆ. ಈ ಸಲಹೆ ಪಾಲಿಸುವ ಮುನ್ನ ನೀವು ಕಡ್ಡಾಯವಾಗಿ ವೈದ್ಯರ ಸಲಹೆ ಪಡೆದುಕೊಳ್ಳಬೇಕು. Zee Kannada News ಇದನ್ನು ದೃಢಪಡಿಸುವುದಿಲ್ಲ.)

ZEENEWS TRENDING STORIES

By continuing to use the site, you agree to the use of cookies. You can find out more by Tapping this link