Narendra Modi - Deve Gowda: ಪ್ರಧಾನಿ ಮೋದಿ ಭೇಟಿಯಾದ ದೇವೇಗೌಡರು! ಉದ್ದೇಶವೇನು?

Tue, 13 Dec 2022-11:02 pm,

ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಹಾಲಿ ಮತ್ತು ಮಾಜಿ ಪ್ರಧಾನಿಗಳು ಭೇಟಿಯಾಗಿದ್ದು, ಮಾತುಕತೆ ನಡೆಸಿದ್ದಾರೆ. 

ನವದೆಹಲಿಯಲ್ಲಿ ನಡೆಯುತ್ತಿರುವ ಸಂಸತ್ ಚಳಿಗಾಲದ ಅಧಿವೇಶನದ ಮಧ್ಯೆಯೂ ಈ ಮಾತುಕತೆ ನಡೆದಿರುವುದು ಮಹತ್ವ ಪಡೆದಿದೆ. 

ನಾನು ಇಂದು ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿದ್ದೇನೆ. ನಮ್ಮ ರಾಜ್ಯದ ನೀರಾವರಿ ವಿಚಾರವನ್ನ ಪ್ರಸ್ತಾಪ ಮಾಡಿದ್ದೇನೆ ಎಂದು ಮಾಜಿ ಪ್ರಧಾನಿ ದೇವೇಗೌಡರು ತಿಳಿಸಿದ್ದಾರೆ. 

ಮುಖ್ಯವಾಗಿ ಕಾವೇರಿ, ಕೃಷ್ಣಾ ಹಾದೂ ಮಹದಾಯಿ ನದಿ ನೀರಿನ ಹಂಚಿಕೆ ವಿಚಾರವನ್ನು ಪ್ರಸ್ತಾಪಿಸಿದ್ದೇನೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಟ್ವೀಟ್‌ ಮಾಡಿದ್ದಾರೆ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link