ಶುಗರ್ ಕಂಟ್ರೋಲ್ ಮಾಡುತ್ತೆ ರಸ್ತೆಬದಿ ಬೆಳೆಯುವ ಈ ಗಿಡದ ಹೂವು!
ರಸ್ತೆಬದಿ ಬೆಳೆಯುವ ಈ ಸಸ್ಯದಲ್ಲಿರುವ ಔಷಧೀಯ ಗುಣಗಳು ಅನೇಕ ರೀತಿಯ ಆರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತದೆ. ಹಲವಾರು ಔಷಧೀಯ ಗುಣಗಳನ್ನು ಹೊಂದಿರುವ ಸಸ್ಯಗಳಲ್ಲಿ ನಿತ್ಯ ಕಣಗಿಲೆ ಗಿಡವೂ ಒಂದು
ಬಸವನಪಾದ ಅಥವಾ ಸದಾಪುಷ್ಪ ಅಥವಾ ನಿತ್ಯ ಕಣಗಿಲೆ ಎಂದು ಕರೆಯುವ ಈ ಹೂವುಗಳಿಂದ ಮಧುಮೇಹ ಮತ್ತು ಅನೇಕ ದೀರ್ಘಕಾಲದ ಕಾಯಿಲೆಗಳಿಂದ ಸುಲಭವಾಗಿ ಪರಿಹಾರ ಒದಗಿಸಲು ಸಹಾಯ ಮಾಡುತ್ತದೆ.
ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನಿತ್ಯ ಕಣಗಿಲೆ ಗಿಡದ ಎಲೆಗಳ ರಸವನ್ನು ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.
ನಿತ್ಯ ಕಣಗಿಲೆಯಲ್ಲಿರುವ ಮಧುಮೇಹ ವಿರೋಧಿ ಗುಣಲಕ್ಷಣಗಳು ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ.
ನಿತ್ಯ ಕಣಗಿಲೆ ಎಲೆಗಳಿಗೆ ರಕ್ತದೊತ್ತಡವನ್ನು ಕಡಿಮೆ ಮಾಡುವ ಶಕ್ತಿಯೂ ಇದೆ. ಇದು ಹೆಚ್ಚಿನ ಪ್ರಮಾಣದಲ್ಲಿ ಆಂಟಿಹೈಪರ್ಟೆನ್ಸಿವ್ ಗುಣಲಕ್ಷಣಗಳನ್ನು ಹೊಂದಿದೆ. ಇದು ರಕ್ತದ ಹರಿವನ್ನು ಸುಧಾರಿಸಲು ಸಹಾಯ ಮಾಡುತ್ತದೆ.
ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.