ಡಯಾಬಿಟಿಸ್ ಕಂಟ್ರೋಲ್ ಫುಡ್ಸ್
ಅವಕಾಡೊ ಹಣ್ಣು: ಅವಕಾಡೊ ಹಣ್ಣು ದೇಹಕ್ಕೆ ಅಗತ್ಯವಾದ ಅನೇಕ ಪೋಷಕಾಂಶಗಳನ್ನು ಹೊಂದಿದೆ, ಇದು ಮುಖ್ಯವಾಗಿ ಮಧುಮೇಹವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ ಎಂದು ಹೇಳಲಾಗುತ್ತದೆ.
ಸೊಪ್ಪು-ತರಕಾರಿಗಳು : ಪ್ರತಿದಿನ ಹೆಚ್ಚು ಫೈಬರ್ ಭರಿತ ಹಸಿರು ಸೊಪ್ಪು ಮತ್ತು ತರಕಾರಿಗಳನ್ನು ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ.
ಮೊಟ್ಟೆ: ಮಧುಮೇಹಿಗಳು ತಮ್ಮ ದೈನಂದಿನ ಆಹಾರದಲ್ಲಿ 2 ಮೊಟ್ಟೆಗಳನ್ನು ಸೇರಿಸಿಕೊಳ್ಳಬಹುದು. ಏಕೆಂದರೆ ಅವುಗಳಲ್ಲಿನ ಕೊಬ್ಬು ಮತ್ತು ಪ್ರೋಟೀನ್ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ.
ಮೊಸರು: ನಿಮ್ಮ ದೈನಂದಿನ ಆಹಾರದಲ್ಲಿ ಮೊಸರು ಮತ್ತು ಮಜ್ಜಿಗೆಯಂತಹ ಆಹಾರಗಳನ್ನು ಸೇರಿಸುವುದರಿಂದ ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳಲಾಗುತ್ತದೆ. ಮಧುಮೇಹವನ್ನು ನಿಯಂತ್ರಿಸಲು ಸಹ ಇದು ಪ್ರಯೋಜನಕಾರಿ ಎಂದು ಹೇಳಲಾಗುತ್ತಿದೆ.
ಕಿತ್ತಳೆ : ಕಿತ್ತಳೆಯಂತಹ ಸಿಟ್ರಸ್ ಹಣ್ಣುಗಳನ್ನು ಪ್ರತಿದಿನ ಸೇವಿಸುವುದರಿಂದ ಚರ್ಮವು ಸುಧಾರಿಸುತ್ತದೆ ಮತ್ತು ದೇಹದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ ಹೇಳಲಾಗುತ್ತದೆ.
ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ಖಂಡಿತವಾಗಿಯೂ ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ZEE ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.