ಈ ಆಯುರ್ವೇದ ಗಿಡಮೂಲಿಕೆಗಳಿಂದ ಮಧುಮೇಹ ನಿಯಂತ್ರಣ ತುಂಬಾ ಸುಲಭ
ಪ್ರಸ್ತುತ, ಇಡೀ ವಿಶ್ವದಲ್ಲಿ ಮಧುಮೇಹಿಗಳ ಸಂಖ್ಯೆ ತುಂಬಾ ಹೆಚ್ಚಾಗುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆಯ ಅಂಕಿ ಅಂಶಗಳ ಪ್ರಕಾರ, ದೇಶದಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟ ಸುಮಾರು 77 ಮಿಲಿಯನ್ ಜನರು ಟೈಪ್ 2 ಡಯಾಬಿಟಿಸ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದೇ ವೇಳೆ ಸುಮಾರು 25 ಮಿಲಿಯನ್ ಮಂದಿ ಪ್ರಿ-ಡಯಾಬಿಟಿಸ್ ಹಂತದಲ್ಲಿದ್ದಾರೆ ಎಂದು ತಿಳಿದುಬಂದಿದೆ. ಆಯುರ್ವೇದ ತಜ್ಞರ ಪ್ರಕಾರ, ಕೆಲವು ಆಯುರ್ವೇದ ಗಿಡ ಮೂಲಿಕೆಗಳ ಸಹಾಯದಿಂದ ಡಯಾಬಿಟಿಸ್ ಅನ್ನು ನಿಯಂತ್ರಿಸಬಹುದು ಎಂದು ಹೇಳಲಾಗುತ್ತದೆ.
ರುಚಿಯಲ್ಲಿ ಕಹಿಯಾಗಿರುವ ಹಾಗಲಕಾಯಿ ಮಧುಮೇಹ ನಿಯಂತ್ರಿಸುವಲ್ಲಿ ಬಹಳ ಪ್ರಯೋಜನಕಾರಿ ಆಗಿದೆ.
ಆಯುರ್ವೇದ ತಜ್ಞರ ಪ್ರಕಾರ, ಮೆಂತ್ಯ ಬೀಜಗಳ ಬಳಕೆಯಿಂದಲೂ ಕೂಡ ಡಯಾಬಿಟಿಸ್ ಅನ್ನು ಸುಲಭವಾಗಿ ನಿಯಂತ್ರಿಸಬಹುದು ಎಂದು ಹೇಳಲಾಗುತ್ತದೆ.
ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ಬೇವಿನ ಎಲೆಗಳನ್ನು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ನಿತ್ಯ ಒಂದೆರಡು ಬೇವಿನ ಎಲೆಗಳನ್ನು ಜಗಿದು ತಿನ್ನುವುದರಿಂದ ಬ್ಲಡ್ ಶುಗರ್ ಲೆವೆಲ್ ಅನ್ನು ನಿಯಂತ್ರಣದಲ್ಲಿಡಬಹುದು ಎಂದು ಹೇಳಲಾಗುತ್ತದೆ.
ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇದನ್ನು Zee ಮೀಡಿಯಾ ಖಚಿತಪಡಿಸುವುದಿಲ್ಲ.