Diabetes Diet: ಮಧುಮೇಹಿಗಳಿಗೆ ವರದಾನಕ್ಕಿಂತ ಕಡಿಮೆ ಇಲ್ಲ ಈ 5 ಆಯುರ್ವೇದ ಆಹಾರ
ಆಯುರ್ವೇದದ ಪ್ರಕಾರ, ಕೆಲವು ಆಯುರ್ವೇದ ಗಿಡಮೂಲಿಕೆಗಳ ಬಳಕೆಯಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಬಹಳ ಸುಲಭವಾಗಿ ನಿಯಂತ್ರಿಸಬಹುದು ಎಂದು ಹೇಳಲಾಗುತ್ತದೆ. ಆ ಐದು ಆಹಾರ ಪದಾರ್ಥಗಳು ಯಾವುವು ಎಂದು ತಿಳಿಯೋಣ...
ನಿಲ್ಲಿಕಾಯಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಇದು ಮೇದೋಜ್ಜೀರಕ ಗ್ರಂಥಿಯ ಕಾರ್ಯನಿರ್ವಹಣೆಯನ್ನು ಸುಧಾರಿಸಲು ಮತ್ತು ಇನ್ಸುಲಿನ್ ಸ್ರವಿಸುವಿಕೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಹಾಗಾಗಿ, ಮಧುಮೇಹವನ್ನು ನಿಯಂತ್ರಣದಲ್ಲಿಡಲು ನೆಲ್ಲಿಕಾಯಿಯನ್ನು ದಿವ್ಯೌಷಧ ಎಂದು ಪರಿಗಣಿಸಲಾಗುತ್ತದೆ. ಇದಕ್ಕಾಗಿ ನೆಲ್ಲಿಕಾಯಿಯನ್ನು ನೇರವಾಗಿ ಸೇವಿಸಬಹುದು. ಇಲ್ಲವೇ ಇದನ್ನು ರಸ, ಪುಡಿ ಮಾಡಿಯಾದರೂ ಸೇವಿಸಬಹುದು.
ಭಾರತೀಯ ಅಡುಗೆಮನೆಗಳಲ್ಲಿ ಪ್ರಮುಖ ಮಸಾಲೆಯಾಗಿ ಬಳಸುವ ದಾಲ್ಚಿನ್ನಿಯು ಉತ್ಕರ್ಷಣ ನಿರೋಧಕವಾಗಿದ್ದು ಅದು ರಕ್ತದಲ್ಲಿನ ಸಕ್ಕರೆಯನ್ನು ಕಡಿಮೆ ಮಾಡಲು ಸಹಾಯಕವಾಗಿದೆ. ಡಯಾಬಿಟಿಸ್ ಸಮಸ್ಯೆ ಇರುವವರು ದಾಲ್ಚಿನ್ನಿಯನ್ನು ಚಹಾ, ಪಾನೀಯ ರೂಪದಲ್ಲಿ ಸೇವಿಸಬಹುದು.
ಆಯುರ್ವೇದ ತಜ್ಞರ ಪ್ರಕಾರ, ಡಯಾಬಿಟಿಸ್ ರೋಗಿಗಳಿಗೆ ಮೆಂತ್ಯ ರಾಮಬಾಣವಿದ್ದಂತೆ. ನಿತ್ಯ ಮುಂಜಾನೆ, ಖಾಲಿ ಹೊಟ್ಟೆಯಲ್ಲಿ ಮೆಂತ್ಯದ ಪುಡಿಯನ್ನು ಉಗುರು ಬೆಚ್ಚಗಿನ ನೀರಿನಲ್ಲಿ ಬೆರೆಸಿ ಸವಿಯುವುದರಿಂದ ಬ್ಲಡ್ ಶುಗರ್ ಲೆವೆಲ್ ಕಂಟ್ರೋಲ್ ಮಾಡಬಹುದು ಎಂದು ಹೇಳಲಾಗುತ್ತದೆ.
ಕರಿಬೇವಿನ ಎಲೆಗಳು ಕೂಡ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ತುಂಬಾ ಪ್ರಯೋಜನಕಾರಿ. ಒಂದೆರಡು ಕರಿಬೇವಿನ ಎಲೆಗಳನ್ನು ತೊಳೆದು ನಿತ್ಯ ಖಾಲಿ ಹೊಟ್ಟೆಯಲ್ಲಿ ಚೆನ್ನಾಗಿ ಜಗಿದು ತಿನ್ನುವುದರಿಂದ ಮಧುಮೇಹವನ್ನು ನಿಯಂತ್ರಿಸಬಹುದು.
ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ಅರಿಶಿನದ ಬಳಕೆಯಿಂದಲೂ ಡಯಾಬಿಟಿಸ್ ನಿಯಂತ್ರಿಸಬಹುದು ಎಂದು ಹೇಳಲಾಗುತ್ತದೆ.
ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಕೆಲವು ಸಂಶೋಧನೆ ಹಾಗೂ ಸಾಮಾನ್ಯ ಮಾಹಿತಿಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.