Diabetes Lowering Foods: ಡಯಾಬಿಟಿಸ್ ಸ್ನೇಹಿ ಆಹಾರಗಳು

Foods For Diabetes: ಆರೋಗ್ಯ ತಜ್ಞರ ಪ್ರಕಾರ, ಕೆಲವು ಆಹಾರಗಳಲ್ಲಿ  ಗ್ಲೈಸೆಮಿಕ್ ಇಂಡೆಕ್ಸ್ ಕಡಿಮೆ ಇದ್ದು ಅವು ರಕ್ತದಲ್ಲಿನ ಗ್ಲೂಕೋಸ್ ಪ್ರಮಾಣವನ್ನು ಹೆಚ್ಚಿಸಲು ಅನುಮತಿಸುವುದಿಲ್ಲ. ಅವುಗಳನ್ನು ಡಯಾಬಿಟಿಸ್ ಸ್ನೇಹಿ ಆಹಾರಗಳು ಎಂದು ಕರೆಯಲಾಗುತ್ತದೆ.

Foods For Diabetes: ಪ್ರಸ್ತುತ ಭಾರತದಲ್ಲಿ ಅತಿ ಹೆಚ್ಚು ಮಂದಿ ಡಯಾಬಿಟಿಸ್ ಕಾಯಿಲೆಯಿಂದ ಬಳಲುತ್ತಿದ್ದಾರೆ. ಮಧುಮೇಹಿ ರೋಗಿಗಳು ಅವರ ಆಹಾರ-ಪಾನೀಯಗಳ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಅತ್ಯಗತ್ಯ. ಆರೋಗ್ಯ ತಜ್ಞರ ಪ್ರಕಾರ, ಕೆಲವು ಆಹಾರಗಳಲ್ಲಿ  ಗ್ಲೈಸೆಮಿಕ್ ಇಂಡೆಕ್ಸ್ ಕಡಿಮೆ ಇದ್ದು ಅವು ರಕ್ತದಲ್ಲಿನ ಗ್ಲೂಕೋಸ್ ಪ್ರಮಾಣವನ್ನು ಹೆಚ್ಚಿಸಲು ಅನುಮತಿಸುವುದಿಲ್ಲ. ಅವುಗಳನ್ನು ಡಯಾಬಿಟಿಸ್ ಸ್ನೇಹಿ ಆಹಾರಗಳು ಎಂದು ಕರೆಯಲಾಗುತ್ತದೆ. ಈ ಆಹಾರಗಳ ಸೇವನೆ ಮಧುಮೇಹ ರೋಗಿಗಳಿಗೆ ವರದಾನಕ್ಕಿಂತ ಕಡಿಮೆ ಇಲ್ಲ ಎಂತಲೂ ಹೇಳಲಾಗುತ್ತದೆ. ಆ ಆಹಾರಗಳು ಯಾವುವು ತಿಳಿಯೋಣ...

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ನಮ್ಮ ದಿನನಿತ್ಯದ ಆಹಾರದಲ್ಲಿ ಬೇಳೆ ಕಾಳುಗಳನ್ನು ಬಳಸುತ್ತೇವೆ. ಇವುಗಳಲ್ಲಿ ಪ್ರೋಟೀನ್ ಮತ್ತು ಫೈಬರ್‌ ಸಮೃದ್ಧವಾಗಿರುವುದು ಮಾತ್ರವಲ್ಲ, ಇವು ಕ್ಯಾಲ್ಸಿಯಂ, ಪೊಟ್ಯಾಸಿಯಮ್ ಮತ್ತು ವಿಟಮಿನ್ ಬಿ -9 ಅತ್ಯುತ್ತಮ ಮೂಲಗಳಾಗಿವೆ. ಇದನ್ನು ಡಯಾಬಿಟಿಸ್ ರೋಗಿಗಳಿಗೆ ಉತ್ತಮ ಆಹಾರ ಎಂದು ಪರಿಗಣಿಸಲಾಗಿದೆ.

2 /5

ವರ್ಷವಿಡೀ ಸುಲಭವಾಗಿ ಲಭ್ಯವಾಗುವ ತರಕಾರಿ ಎಂದರೆ ಅದು ಕ್ಯಾರೆಟ್. ಇದರಲ್ಲಿ ಪೊಟ್ಯಾಸಿಯಮ್, ಬೀಟಾ-ಕ್ಯಾರೋಟಿನ್ ಮತ್ತು ಉತ್ಕರ್ಷಣ ನಿರೋಧಕಗಳು ಹೇರಳವಾಗಿ ಕಂಡು ಬರುತ್ತದೆ. ಇದು ರುಚಿಯಲ್ಲಿ ಸಿಹಿಯಾದರೂ ಕೂಡ ಬ್ಲಡ್ ಶುಗರ್ ಅನ್ನು ನಿಯಂತ್ರಿಸುವಲ್ಲಿ ಬಹಳ ಪರಿಣಾಮಕಾರಿ ಎಂದು ಹೇಳಲಾಗುತ್ತದೆ.

3 /5

ಸೂಪರ್ ಫುಡ್ ಎಂದು ಕರೆಯಲ್ಪಡುವ ಹಾಲು ಒಂದು ಪರಿಪೂರ್ಣ ಆಹಾರ. ಇದು ಮೂಳೆಗಳ ಆರೋಗ್ಯಕ್ಕೆ ಮಾತ್ರವಲ್ಲ, ಮಧುಮೇಹಿಗಳಿಗೂ ಕೂಡ ಪ್ರಯೋಜನಕಾರಿ ಆಗಿದೆ. ಮಧುಮೇಹಿಗಳು ಕಡಿಮೆ ಕೊಬ್ಬಿನ ಹಾಲನ್ನು ಸಕ್ಕರೆ ಇಲ್ಲದೆ ಕುಡಿಯುವುದು ಪ್ರಯೋಜನಕಾರಿ ಆಗಿದೆ.

4 /5

ಸಾಮಾನ್ಯವಾಗಿ ತೂಕ ಇಳಿಕೆ ಪ್ರಯತ್ನದಲ್ಲಿರುವವರು ಓಟ್ಸ್ ಸೇವಿಸುತ್ತಾರೆ. ಆದರೆ, ಇದು ಕಡಿಮೆ ಗ್ಲೈಸೆಮಿಕ್ ಸೂಚಿಯ ಆಹಾರವಾಗಿರುವುದರಿಂದ ಮಧುಮೇಹಿಗಳಿಗೂ ಇದು ಪ್ರಯೋಜನಕಾರಿ ಎಂದು ಸಾಬೀತುಪಡಿಸಲಿದೆ.

5 /5

ಸಾಮಾನ್ಯವಾಗಿ ಕಿಡ್ನಿ ಬೀನ್ಸ್ ಎಂದೇ ಪ್ರಸಿದ್ಧಿಯಾಗಿರುವ ರಾಜ್ಮಾ  ಫೈಬರ್ ಮತ್ತು ಪ್ರೋಟೀನ್‌ನಲ್ಲಿ ಸಮೃದ್ಧವಾಗಿದೆ. ಮಾತ್ರವಲ್ಲ ಇದು ಕಡಿಮೆ  ಜಿಐ ಅನ್ನು ಹೊಂದಿದೆ. ಹಾಗಾಗಿ, ಇದನ್ನು ಮಧುಮೇಹಿಗಳಿಗೆ ಅತ್ಯುತ್ತಮ ಆಹಾರಗಳಲ್ಲಿ ಒಂದು ಎಂದು ಹೇಳಲಾಗುತ್ತದೆ. ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಜ್ಞಾನವನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ಪಡೆಯಿರಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.