ಶುಗರ್ ಲೆವಲ್ ಹೆಚ್ಚಿದ್ದರೆ ಈ ಹೂವಿನ ನೀರು ಕುಡಿಯಿರಿ, ಔಷಧಿ ಇಲ್ಲದೆ ನಿಯಂತ್ರಣಕ್ಕೆ ಬರುತ್ತೆ ರಕ್ತದಲ್ಲಿನ ಸಕ್ಕರೆ ಮಟ್ಟ!
ಮಧುಮೇಹ ಅನೇಕರನದನು ಕಾಡುತ್ತಿರುವ ಸಾಮಾನ್ಯ ಸಮಸ್ಯೆಯಾಗಿದೆ. ಆರೋಗ್ಯಕರ ಜೀವನಶೈಲಿ ಮತ್ತು ಆಹಾರದ ಮೂಲಕ ಮಧುಮೇಹವನ್ನು ನಿಯಂತ್ರಿಸಬಹುದು.
ಮುತ್ತುಗದ ಹೂವುಗಳಲ್ಲಿ ಆಂಟಿ-ಹೈಪರ್ಗ್ಲೈಸೆಮಿಕ್ ಗುಣಲಕ್ಷಣಗಳು ಕಂಡುಬರುತ್ತವೆ, ಆದ್ದರಿಂದ ಅವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ತ್ವರಿತವಾಗಿ ನಿಯಂತ್ರಿಸುವಲ್ಲಿ ಪರಿಣಾಮಕಾರಿ.
ಒಂದೆರಡು ಮುತ್ತುಗದ ಹೂವುಗಳನ್ನು ತೆಗೆದುಕೊಂಡು ಸ್ವಚ್ಛಗೊಳಿಸಿ. ಒಂದು ಪಾತ್ರೆಯಲ್ಲಿ 2 ಕಪ್ ನೀರನ್ನು ಕುದಿಸಿ. ಗ್ಯಾಸ್ ಆಫ್ ಮಾಡಿ, ಈ ಹೂವುಗಳನ್ನು ಬಿಸಿ ನೀರಿನಲ್ಲಿ ಹಾಕಿ.
ಪಾತ್ರೆಯನ್ನು ಮುಚ್ಚಿ ಮತ್ತು ರಾತ್ರಿಯಿಡೀ ಬಿಡಿ. ಬೆಳಿಗ್ಗೆ ಎದ್ದ ಬಳಿಕ ಈ ಹೂವುಗಳನ್ನು ನೀರಿನಿಂದ ಫಿಲ್ಟರ್ ಮಾಡಿ.
ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಈ ನೀರನ್ನು ಸೇವಿಸಿ. ಇದರಿಂದ ಬ್ಲಡ್ ಶುಗರ್ ನಿಯಂತ್ರಣಕ್ಕೆ ಬರುವುದು.
ಸೂಚನೆ: ಪ್ರಿಯ ಓದುಗರೇ, ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.