ಎರಡು ದಿನ ಶಾಲೆಗಳಿಗೆ ರಜೆ !ರಜಾ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಶಾಲೆಗಳಿಗೆ ಸರ್ಕಾರ ಸೂಚನೆ
)
ನಿನ್ನೆ ಕ್ರಿಸ್ ಮಸ್ ಎನ್ನುವ ಕಾರಣಕ್ಕೆ ಶಾಲೆಗಳಿಗೆ ರಜೆ ಇತ್ತು. ಮುಂದುವರಿದು ಇನ್ನೆರಡು ದಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.ಈ ಸಂಬಂಧ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
)
1924ರಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಸಮಾರಂಭದ ಅಂಗವಾಗಿ ಇಂದು ಮತ್ತು ನಾಳೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಈ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಎರಡು ದಿನಗಳ ರಜೆ ಆದೇಶ ಹೊರಡಿಸಲಾಗಿದೆ.
)
ಬೆಳಗಾವಿಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಲಕ್ಷಾಂತರ ಜನ ಭಾಗವಹಿಸುವ ಸಾಧ್ಯತೆ ಇದೆ.ಅಲ್ಲದೆ ವಾಹನ ಸಂಚಾರ ದಟ್ಟಣೆ ಹೆಚ್ಚಾಗುವ ಕಾರಣ ಶಾಲಾಮಕ್ಕಳ ಸುರಕ್ಷತಾ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಬೆಳಗಾವಿಯಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಈ ರಜೆ ದಿನಗಳನ್ನು ನಗರ ಯೋಜನೆ ಹಾಗೂ ಉಪನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ ಬೆಳಗಾವಿ(ದ) ಹಾಗೂ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಬೆಳಗಾವಿ ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಹೇಳಲಾಗಿದೆ.
ಈ ರಜೆಯು ರಾಜ್ಯದ ಬೆಳಗಾವಿ ತಾಲೂಕಿಗೆ ಮಾತ್ರ ಅನ್ವಯವಾಗಲಿದೆ. ಉಳಿದಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಎಂದಿನಂತೆ ಶಾಲೆಗಳು ನಡೆಯಲಿವೆ.