PHOTOS: ಕರುಣಾನಿಧಿ ಅಂತಿಮ ದರ್ಶನ: ಶೋಕಸಾಗರದಲ್ಲಿ ಮುಳುಗಿದ ತಮಿಳುನಾಡು
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಮುಖ್ಯಸ್ಥ ಎಂ. ಕರುಣಾನಿಧಿ ತಮ್ಮ 94ನೇ ವಯಸ್ಸಿನಲ್ಲಿ ಮಂಗಳವಾರ ಸಂಜೆ ನಿಧನರಾದರು.
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಮುಖ್ಯಸ್ಥ ಎಂ. ಕರುಣಾನಿಧಿ ತಮ್ಮ 94ನೇ ವಯಸ್ಸಿನಲ್ಲಿ ಮಂಗಳವಾರ ಸಂಜೆ ನಿಧನರಾದರು.

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಮುಖ್ಯಸ್ಥ ಎಂ. ಕರುಣಾನಿಧಿ ತಮ್ಮ 94ನೇ ವಯಸ್ಸಿನಲ್ಲಿ ಮಂಗಳವಾರ ಸಂಜೆ ನಿಧನರಾದರು. 11 ದಿನಗಳಿಂದ ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕರುಣಾನಿಧಿಯವರು ನಿನ್ನೆ ಸಂಜೆ ಕೊನೆಯುಸಿರೆಳೆದಿದ್ದಾರೆ. ಕರುಣಾನಿಧಿಯವರ ಅಗಲಿಕೆ ತಮಿಳುನಾಡನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ಅಗಲಿದ ದ್ರಾವಿಡ ಸೂರ್ಯನ ಅಂತಿಮ ದರ್ಶನಕ್ಕಾಗಿ ಪಾರ್ಥಿವ ಶರೀರವನ್ನು ಚೆನ್ನೈನ ರಾಜಾಜಿ ಹಾಲ್ ನಲ್ಲಿ ಇರಿಸಲಾಗಿದ್ದು, ಸಾರ್ವಜನಿಕ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ.


ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ತಮ್ಮದೇ ಛಾಪು ಮೂಡಿಸಿದ್ದ, ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಸಂಖ್ಯಾತ ಅಭಿಮಾನಿ ಬಳಗವನ್ನು ಹೊಂದಿದ್ದ ಡಿಎಂಕೆ ಅಧಿನಾಯಕ ಎಂ. ಕರುಣಾನಿಧಿ ಅವರ ನಿಧನದ ಬೆನ್ನಲ್ಲೇ, ಅವರ ಅಂತ್ಯಸಂಸ್ಕಾರದ ವಿಚಾರ ವಿವಾದ ಸೃಷ್ಟಿಸಿದೆ. ನಾಡಿನ ಹಿಂದುಳಿದ ವರ್ಗದ ಏಳಿಗೆಗಾಗಿ ಶ್ರಮಿಸಿದ ನಾಯಕನನ್ನು ಮರೀನಾ ಬೀಚ್ ಬಳಿಯ ಅಣ್ಣ ಮೆಮರಿಯಲ್‌ನಲ್ಲಿ ನಡೆಸಲು ಪುತ್ರ ಸ್ಟಾಲಿನ್ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಇದಕ್ಕೆ ಸರ್ಕಾರ ಒಪ್ಪಿಗೆ ಸೂಚಿಸದ ಹಿನ್ನೆಲೆಯಲ್ಲಿ ಇದನ್ನು ಪ್ರಶ್ನಿಸಿ ಡಿಎಂಕೆ ಹೈಕೋರ್ಟ್ ಮೆಟ್ಟಿಲೇರಿತ್ತು. ಡಿಎಂಕೆಯ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್‌ನಲ್ಲಿ ಮಧ್ಯರಾತ್ರಿ ವಿಚಾರಣೆಗೆ ತೆಗೆದುಕೊಂಡಿತ್ತು.


