PHOTOS: ಕರುಣಾನಿಧಿ ಅಂತಿಮ ದರ್ಶನ: ಶೋಕಸಾಗರದಲ್ಲಿ ಮುಳುಗಿದ ತಮಿಳುನಾಡು

Wed, 08 Aug 2018-10:04 am,

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಮುಖ್ಯಸ್ಥ ಎಂ. ಕರುಣಾನಿಧಿ ತಮ್ಮ 94ನೇ ವಯಸ್ಸಿನಲ್ಲಿ ಮಂಗಳವಾರ ಸಂಜೆ ನಿಧನರಾದರು. 11 ದಿನಗಳಿಂದ ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕರುಣಾನಿಧಿಯವರು ನಿನ್ನೆ ಸಂಜೆ ಕೊನೆಯುಸಿರೆಳೆದಿದ್ದಾರೆ. ಕರುಣಾನಿಧಿಯವರ ಅಗಲಿಕೆ ತಮಿಳುನಾಡನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ಅಗಲಿದ ದ್ರಾವಿಡ ಸೂರ್ಯನ ಅಂತಿಮ ದರ್ಶನಕ್ಕಾಗಿ ಪಾರ್ಥಿವ ಶರೀರವನ್ನು ಚೆನ್ನೈನ ರಾಜಾಜಿ ಹಾಲ್ ನಲ್ಲಿ ಇರಿಸಲಾಗಿದ್ದು, ಸಾರ್ವಜನಿಕ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ.

1957ರಲ್ಲಿ ಮೊದಲ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿದ ಎಂ. ಕರುಣಾನಿಧಿ ಐದು ಬಾರಿ ತಮಿಳುನಾಡಿನ ಮುಖ್ಯಮಂತ್ರಿಯಾಗಿದ್ದರು. ಪ್ರತಿ ಬಾರಿ ಸ್ಪರ್ಧಿಸಿದಾಗಲೂ ಗೆಲುವಿನ ನಗೆ ಬೀರಿದ್ದ ಕರುಣಾನಿಧಿ ಅವರನ್ನು ಅವರ ಅಭಿಮಾನಿಗಳು 'ಸೋಲಿಲ್ಲದ ಸರದಾರ' ಎಂದೇ ಕರೆಯುತ್ತಾರೆ. 

ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ತಮ್ಮದೇ ಛಾಪು ಮೂಡಿಸಿದ್ದ, ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಸಂಖ್ಯಾತ ಅಭಿಮಾನಿ ಬಳಗವನ್ನು ಹೊಂದಿದ್ದ ಡಿಎಂಕೆ ಅಧಿನಾಯಕ ಎಂ. ಕರುಣಾನಿಧಿ ಅವರ ನಿಧನದ ಬೆನ್ನಲ್ಲೇ, ಅವರ ಅಂತ್ಯಸಂಸ್ಕಾರದ ವಿಚಾರ ವಿವಾದ ಸೃಷ್ಟಿಸಿದೆ. ನಾಡಿನ ಹಿಂದುಳಿದ ವರ್ಗದ ಏಳಿಗೆಗಾಗಿ ಶ್ರಮಿಸಿದ ನಾಯಕನನ್ನು ಮರೀನಾ ಬೀಚ್‌ ಬಳಿಯ ಅಣ್ಣ ಮೆಮರಿಯಲ್‌ನಲ್ಲಿ ನಡೆಸಲು ಪುತ್ರ ಸ್ಟಾಲಿನ್‌ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಇದಕ್ಕೆ ಸರ್ಕಾರ ಒಪ್ಪಿಗೆ ಸೂಚಿಸದ ಹಿನ್ನೆಲೆಯಲ್ಲಿ ಇದನ್ನು ಪ್ರಶ್ನಿಸಿ ಡಿಎಂಕೆ ಹೈಕೋರ್ಟ್‌ ಮೆಟ್ಟಿಲೇರಿತ್ತು. ಡಿಎಂಕೆಯ ಅರ್ಜಿಯನ್ನು ಮದ್ರಾಸ್‌ ಹೈಕೋರ್ಟ್‌ನಲ್ಲಿ ಮಧ್ಯರಾತ್ರಿ ವಿಚಾರಣೆಗೆ ತೆಗೆದುಕೊಂಡಿತ್ತು.

ಇಂದು ನನ್ನ ಜೀವನದಲ್ಲೇ ಕರಾಳ ದಿನ. ಕರುಣಾನಿಧಿ ಅವರನ್ನು ಕಳೆದುಕೊಂಡ ಈ ದಿನ ಮರೆಯುವುದಕ್ಕೆ ಸಾಧ್ಯವಿಲ್ಲ. ಅವರ ಆತ್ಮ ಶಾಂತಿಗಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಖ್ಯಾತ ನಟ ರಜನೀಕಾಂತ್ ತಮ್ಮ ಸಂತಾಪ ಸೂಚಿಸಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ, ಉಪಮುಖ್ಯಮಂತ್ರಿ ಓ. ಪನ್ನೀರ್ ಸೆಲ್ವಂ ಸೇರಿದಂತೆ ಹಲವು ರಾಜಕೀಯ ನಾಯಕರು ಅಗಲಿದ ನಾಯಕನಿಗೆ ಅಂತಿಮ ನಮನ ಸಲ್ಲಿಸಿದರು.

ಕರುಣಾನಿಧಿಗೆ ಅಂತಿಮ ನಮನ ಸಲ್ಲಿಸಿದ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ ಸಂಜೆ ಕರುಣಾನಿಧಿ ಅವರ ಅಂತಿಮ ದರ್ಶನ ಪಡೆದರು.

ತಮಿಳುನಾಡು ಗವರ್ನರ್ ಬನ್ವಾರಿಲಾಲ್ ಪುರೋಹಿತ್ ಅವರು ತಮಿಳುನಾಡಿನ ಮಾಜಿ ಸಿಎಂ ಕಲೈನಾರ್ ಕರುಣಾನಿಧಿ ಅಂತಿಮ ದರ್ಶನ ಪಡೆದರು.

ಕರುಣಾನಿಧಿ ಅವರಿಗೆ ಅಂತಿಮ ನಮನ ಸಲ್ಲಿಸಿದ ದೀಪಾ ಜಯಕುಮಾರ್.

Pics: ANI

ZEENEWS TRENDING STORIES

By continuing to use the site, you agree to the use of cookies. You can find out more by Tapping this link