ಊಟ ಮಾಡಿದ ತಕ್ಷಣ ಈ ತಪ್ಪುಗಳನ್ನು ಮಾಡಲೇಬೇಡಿ

                                

Things Never Do after Meals: ಆರೋಗ್ಯ ತಜ್ಞರ ಪ್ರಕಾರ, ಊಟ ಮಾಡಿದ ಬಳಿಕ ನಾವು ಮಾಡುವ ಕೆಲವು ಸಾಮಾನ್ಯ ತಪ್ಪುಗಳು ನಮ್ಮ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮವನ್ನು ಬೀರುತ್ತವೆ. ಹಾಗಾಗಿ, ಯಾವುದೇ ಕಾರಣಕ್ಕೂ ಅಂತಹ ತಪ್ಪುಗಳನ್ನು  ಮಾಡಬಾರದು ಎಂದು ಹೇಳಲಾಗುತ್ತದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /5

ಊಟ ಮಾಡಿದ ಕೂಡಲೇ ಕೆಲವರಿಗೆ ಟೀ ಕುಡಿಯುವ ಅಭ್ಯಾಸವಿರುತ್ತದೆ, ಇನ್ನೂ ಕೆಲವರಿಗೆ ಸಣ್ಣ ನಿದ್ರೆ ಮಾಡುವುದು ರೂಢಿಯಾಗಿರುತ್ತದೆ. ಆದರೆ, ಆರೋಗ್ಯದ ದೃಷಿಯಿಂದ ಇದು ಸರಿಯೇ ಎಂದು ಎಂದಾದರೂ ಯೋಚಿಸಿದ್ದೀರಾ? ವಾಸ್ತವವಾಗಿ ಊಟ ಮಾಡಿದ ಬಳಿಕ ನಾವು ಮಾಡುವ ಕೆಲವು ಸಾಮಾನ್ಯ ತಪ್ಪುಗಳು ನಮ್ಮ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮವನ್ನು ಬೀರಬಹುದು. . ಅಂತಹ ತಪ್ಪುಗಳು ಯಾವುವೆಂದರೆ... 

2 /5

ಕೆಲವರು ಊಟ ಮಾಡಿದ ಕೂಡಲೇ ನಿದ್ರೆ ಮಾಡುವ ಅಭ್ಯಾಸ ಹೊಂದಿರುತ್ತಾರೆ. ಆದರೆ, ಇದು ನಿಮ್ಮ ಜೀರ್ಣಾಂಗ ವ್ಯವಸ್ಥೆಯ ಮೇಲೆ ವ್ಯತಿರಿಕ್ತ ಪರಿಣಾಮವನ್ನು ಬೀರುತ್ತದೆ.  ಮಾತ್ರವಲ್ಲ ಇದು ತೂಕ ಹೆಚ್ಚಲಕ್ಕೂ ಕಾರಣವಾಗುತ್ತದೆ. 

3 /5

ನಮ್ಮಲ್ಲಿ ಕೆಲವರಿಗೆ ಊಟ ಮಾಡಿದ ತಕ್ಷಣ ಟೀ, ಕಾಫಿ ಕುಡಿಯುವುದು ರೂಢಿ. ಆದರೆ, ಇದರಿಂದ ಆಸಿಡ್ ರಿಲೀಸ್ ಆಗಿ ಅಸಿಡಿಟಿ ಸಮಸ್ಯೆಗೆ ಕಾರಣವಾಗುತ್ತದೆ. 

4 /5

ಊಟವಾದ ತಕ್ಷಣ ಸ್ನಾನ ಮಾಡುವುದರಿಂದ ಇದು ಜೀರ್ಣಾಗ್ನಿಗೆ ತೊಂದರೆ ಉಂಟುಮಾಡುತ್ತದೆ. 

5 /5

ಊಟ ಮಾಡಿದ ಬಳಿಕ ಕೂಡಲೇ ವ್ಯಾಯಾಮ ಮಾಡುವುದರಿಂದ ಹೊಟ್ಟೆ ನೋವು, ವಾಂತಿ ಸೇರಿದಂತೆ ಉದರ ಸಂಬಂಧಿತ ಸಮಸ್ಯೆಗಳು ನಿಮ್ಮನ್ನು ಬಾಧಿಸಬಹುದು.  ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇದನ್ನು Zee ಮೀಡಿಯಾ ಖಚಿತಪಡಿಸುವುದಿಲ್ಲ.