ನೀವು ಫ್ರಿಡ್ಜ್‌ನಲ್ಲಿಟ್ಟು ಕಲ್ಲಂಗಡಿ ಹಣ್ಣು ತಿಂತಿರಾ..? ಹಾಗಾದ್ರೆ ಅಪ್ಪಿತಪ್ಪಿಯೂ ಈ ತಪ್ಪು ಮಾಡ್ಬೇಡಿ!!

Watermelon: ಕಲ್ಲಂಗಡಿ ಬೇಸಿಗೆಯಲ್ಲಿ ದೊರೆಯುವ ಅದ್ಭುತ ಹಾಗೂ ಹೆಚ್ಚು ನೀರಿನ ಅಂಶವಿರುವ ಹಣ್ಣು. ಆದರೆ ಅದನ್ನು ಫ್ರಿಡ್ಜ್‌ನಲ್ಲಿ ಇಡುವುದರಿಂದ ಅದರ ಪೋಷಕಾಂಶಗಳು ಕಡಿಮೆಯಾಗುತ್ತವೆ. ತಣ್ಣನೆಯ ಕಲ್ಲಂಗಡಿ ತಿನ್ನುವುದರಿಂದ ಕೆಮ್ಮು ಮತ್ತು ಶೀತ ಉಂಟಾಗುತ್ತದೆ.

Health Benefits of Eating Watermelon: ರಸಭರಿತ ಹಣ್ಣು ಎಂದಾಕ್ಷಣ ನೆನಪಿಗೆ ಬರುವ ಮೊದಲ ಹಣ್ಣೇ ಕಲ್ಲಂಗಡಿ ಹಣ್ಣು. ಬಹುತೇಕರು ಕಲ್ಲಂಗಡಿ ಹಣ್ಣನ್ನು ಇಷ್ಟಪಟ್ಟು ಸೇವಿಸುತ್ತಾರೆ. ನೀರಿನಾಂಶ ಹೆಚ್ಚಾಗಿರುವುದರಿಂದ ಬೇಸಿಗೆಯಲ್ಲಿ ಈ ಹಣ್ಣು ಅಮೃತದಂತಿರುತ್ತದೆ. ಈಗ ಬೇಸಿಗೆ ಶುರುವಾಗಿದೆ. ಮಾರುಕಟ್ಟೆಯಲ್ಲಿ ಕಲ್ಲಂಗಡಿ ಹಣ್ಣಿನ ಅಬ್ಬರವೂ ಜೋರಾಗಿದೆ. ಆದರೆ ಕಲ್ಲಂಗಡಿ ಹಣ್ಣು ಖರೀದಿಸಿ ಮನೆಗೆ ತರುವ ಅನೇಕರು ಅದನ್ನ ಫ್ರಿಡ್ಜ್‌ನಲ್ಲಿಟ್ಟು ಸೇವಿಸುತ್ತಾರೆ. ಆದರೆ ಈ ಹಣ್ಣನ್ನು ಫ್ರಿಡ್ಜ್‌ನಲ್ಲಿಟ್ಟು ಸೇವಿಸಬಾರದು ಅಂತಾ ಹೇಳಲಾಗುತ್ತದೆ. ಇದರ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ ನೋಡಿ...

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ಕಲ್ಲಂಗಡಿ ಹಣ್ಣಿನಲ್ಲಿ ವಿವಿಧ ಖನಿಜಗಳು ಮತ್ತು ಸತು, ಕಬ್ಬಿಣ, ಮೆಗ್ನೀಸಿಯಮ್ ಮತ್ತು ಪ್ರೋಟೀನ್‌ಗಳಂತಹ ಪೋಷಕಾಂಶಗಳಿವೆ. ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ನಿಯಮಿತವಾಗಿ ಕಲ್ಲಂಗಡಿ ಹಣ್ಣು ಸೇವಿಸಬೇಕು. ಕಲ್ಲಂಗಡಿ ಹಣ್ಣಿನಲ್ಲಿರುವ ವಿಟಮಿನ್‌ ʼಎʼ ಹಾಗೂ ʼಸಿʼ ಅಂಶ ಚರ್ಮದ ಆರೋಗ್ಯಕ್ಕೆ ಬಹಳ ಉತ್ತಮ. ವಿಟಮಿನ್‌ ʼಸಿʼ ಚರ್ಮದಲ್ಲಿ ಕೊಲಾಜನ್‌ ಉತ್ಪತ್ತಿಗೆ ಕಾರಣವಾಗುತ್ತದೆ. ಇದರಲ್ಲಿರುವ ಪೋಷಕಾಂಶ ಚರ್ಮ ಹಾಗೂ ಕೂದಲಿನ ಆರೋಗ್ಯಕ್ಕೆ ಉತ್ತಮ.   

2 /6

ಕಲ್ಲಂಗಡಿ ಹಣ್ಣಿನಲ್ಲಿ ಕ್ಯಾಲೊರಿ ಕಡಿಮೆ ಇರುತ್ತದೆ. ಕೇವಲ ಹಣ್ಣಷ್ಟೇ ಅಲ್ಲ ಹಣ್ಣಿನ ಸಿಪ್ಪೆ ಹಾಗೂ ಬೀಜವನ್ನೂ ಬಳಸುವ ಮೂಲಕ ಹಲವು ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು. ಕಲ್ಲಂಗಡಿ ಹಣ್ಣಿನಲ್ಲಿರುವ ಲೈಕೊಪೀನ್‌ ಅಂಶ ಕಣ್ಣಿನ ಆರೋಗ್ಯಕ್ಕೂ ಸಹಕಾರಿ. ವಯಸ್ಸಾದಂತೆ ಎದುರಿಸುವ ಮ್ಯಾಕ್ಯುಲರ್ ಡಿಜನರೇಶನ್ ಎನ್ನುವ ಕಣ್ಣಿನ ಸಮಸ್ಯೆಗೂ ಇದರ ಸೇವನೆ ಉತ್ತಮ. ಕಲ್ಲಂಗಡಿಯಲ್ಲಿರುವ ಕೆಲವೊಂದು ಪೋಷಕಾಂಶಗಳು ಹೃದಯ ಆರೋಗ್ಯಕ್ಕೆ ಉತ್ತಮ.

3 /6

ಬೇಸಿಗೆಯಲ್ಲಿ ಬಹುತೇಕ ಹೆಚ್ಚಾಗಿ ಕಲ್ಲಂಗಡಿ ಹಣ್ಣು ಖರೀದಿಸುತ್ತಾರೆ. ಬಿರು ಬಿಸಿಲಿನಿಂದ ಬಳಲುವ ಜನರು ಕಲ್ಲಂಗಡಿ ಹಣ್ಣು ಸೇವಿಸಿ ಹೊಟ್ಟೆ ತಂಪು ಮಾಡಿಕೊಳ್ಳುತ್ತಾರೆ. ಏಕೆಂದರೆ ಇದರಲ್ಲಿ ನೀರಿನ ಅಂಶ ಹೆಚ್ಚಾಗಿರುತ್ತದೆ. ಬೇಸಿಗೆಯಲ್ಲಿ ಕಲ್ಲಂಗಡಿ ತಿನ್ನುವುದರಿಂದ ದೇಹದಲ್ಲಿ ನೀರಿನಂಶ ಕಡಿಮೆಯಾಗುವುದಿಲ್ಲ. ಇದರಲ್ಲಿ ಶೇ.92ರಷ್ಟು ನೀರು ಇರುತ್ತದೆ. ಇದು ಪ್ರೋಟೀನ್‌ಗಳು, ಜೀವಸತ್ವಗಳು ಮತ್ತು ಫೈಬರ್‌ನಂತಹ ಅನೇಕ ಪೋಷಕಾಂಶಗಳನ್ನು ಒಳಗೊಂಡಿದೆ.

4 /6

ಕಲ್ಲಂಗಡಿಯಲ್ಲಿರುವ ನಾರಿನ ಅಂಶವು ಹಸಿವನ್ನು ನಿಯಂತ್ರಿಸುತ್ತದೆ. ಹೀಗಾಗಿ ನೀವು ಸುಲಭವಾಗಿ ತೂಕ ಇಳಿಸಿಕೊಳ್ಳಬಹುದು. ಆದರೆ ಅನೇಕರು ಕಲ್ಲಂಗಡಿ ಖರೀದಿಸಿದ ನಂತರ ಅದನ್ನು ಕತ್ತರಿಸಿ ಫ್ರಿಡ್ಜ್‌ನಲ್ಲಿ ಇಡುತ್ತಾರೆ. ಹೀಗೆ ಮಾಡುವುದರಿಂದ ಹಲವು ಆರೋಗ್ಯಕರ ಸಮಸ್ಯೆಗಳು ಉಂಟಾಗುತ್ತವೆ ಎನ್ನುವುದು ಅನೇಕರಿಗೆ ತಿಳಿದಿರುವುದಿಲ್ಲ. ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್‌ನಲ್ಲಿಟ್ಟು ತಿನ್ನುವುದರಿಂದ ಆಗುವ ಅಪಾಯಗಳ ತಿಳಿದುಕೊಳ್ಳಿರಿ.

5 /6

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್‌ನಲ್ಲಿ ಯಾವುದೇ ಕಾರಣಕ್ಕೂ ಇಡಬಾರದು. ಇದರ ಹೊರ ಭಾಗವು ತುಂಬಾ ದಪ್ಪವಾಗಿರುತ್ತದೆ. ಇದರಿಂದ ಕಲ್ಲಂಗಡಿ ಬೇಗನೆ ಹಾಳಾಗುವುದಿಲ್ಲ. ಇದು ಸುಮಾರು 15-20 ದಿನಗಳನ್ನು ತೆಗೆದುಕೊಳ್ಳುತ್ತದೆ. ಅದಕ್ಕಾಗಿಯೇ ಅದನ್ನು ಶೈತ್ರೀಕರಣಗೊಳಿಸುವ ಅಗತ್ಯವಿಲ್ಲ. ಕಲ್ಲಂಗಡಿ ಹಣ್ಣನ್ನು ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟರೆ ಅದರ ಪೌಷ್ಟಿಕಾಂಶದ ಮೌಲ್ಯವು ಕಡಿಮೆಯಾಗುತ್ತದೆ. ಹೀಗಾಗಿ ನೀವು ಈ ಅಪ್ಪಿತಪ್ಪಿಯೂ ಈ ತಪ್ಪನ್ನು ಮಾಡಬಾರದು. ಅದನ್ನ ನೈಸರ್ಗಿಕವಾಗಿಯೇ ಕತ್ತರಿಸಿ ತಿಂದರೆ ನಿಮ್ಮ ಅದರ ಆರೋಗ್ಯ ಪ್ರಯೋಜನಗಳು ದೊರೆಯುತ್ತವೆ.

6 /6

ಕಲ್ಲಂಗಡಿ ಬೇಸಿಗೆಯಲ್ಲಿ ದೊರೆಯುವ ಅದ್ಭುತ ಹಾಗೂ ಹೆಚ್ಚು ನೀರಿನ ಅಂಶವಿರುವ ಹಣ್ಣು. ಆದರೆ ಅದನ್ನು ಫ್ರಿಡ್ಜ್‌ನಲ್ಲಿ ಇಡುವುದರಿಂದ ಅದರ ಪೋಷಕಾಂಶಗಳು ಕಡಿಮೆಯಾಗುತ್ತವೆ. ತಣ್ಣನೆಯ ಕಲ್ಲಂಗಡಿ ತಿನ್ನುವುದರಿಂದ ಕೆಮ್ಮು ಮತ್ತು ಶೀತ ಉಂಟಾಗುತ್ತದೆ. ನೀವು ದೀರ್ಘಕಾಲದವರೆಗೆ ಫ್ರಿಡ್ಜ್‌ನಲ್ಲಿಟ್ಟಿರುವ ಕಲ್ಲಂಗಡಿ ಹಣ್ಣು ತಿಂದರೆ ನಿಮಗೆ ಆಹಾರ ವಿಷವಾಗಬಹುದು. ಹೀಗಾಗಿ ಯಾವಾಗಲೂ ತಾಜಾ ಕಲ್ಲಂಗಡಿ ಹಣ್ಣನ್ನು ಮಾತ್ರ ತಿನ್ನಬೇಕು. ತಾಜಾ ಇರವಾಗಲೇ ತಿಂದರೆ ನಿಮಗೆ ಎಲ್ಲಾ ರೀತಿಯ ಆರೋಗ್ಯ ಪ್ರಯೋಜನಗಳು ಸಿಗುತ್ತದೆ. ಫ್ರಿಡ್ಜ್‌ನಲ್ಲಿಟ್ಟ ಕಲ್ಲಂಗಡಿ ಸೇವಿಸಿದರೆ ನಿಮಗೆ ಆರೋಗ್ಯ ಸಮಸ್ಯೆಗಳು ಕಾಡಬಹುದು.