Weight Reduce Tips: ಕೆಲವೇ ದಿನಗಳಲ್ಲಿ ಹೊಟ್ಟೆ ಭಾಗದ ಕೊಬ್ಬು ಕರಗಿಸಬೇಕೆ?ಇಲ್ಲಿದೆ ಒಂದು ಸೂಪರ್ ಡ್ರಿಂಕ್!
1. ಕೇಸರಿ ನೀರಿನ ಪ್ರಯೋಜನಗಳು: ಇದು ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ದಿನವಿಡೀ ನಿಮ್ಮ ದೇಹವನ್ನು ಶಕ್ತಿಯುತವಾಗಿರಿಸಲು ಸಹಾಯ ಮಾಡುತ್ತದೆ.
2. ಇದರ ಬಳಕೆಯು ಕೂದಲು ಉದುರುವಿಕೆಯ ಸಮಸ್ಯೆಗೆ ಸಹ ಸಹಾಯ ಮಾಡುತ್ತದೆ. ನಿಮ್ಮ ಚರ್ಮಕ್ಕೆ ಹೊಳಪನ್ನು ತರುತ್ತದೆ.
3. ಇದು ಹೃದಯದ ಆರೋಗ್ಯಕ್ಕೂ ಪ್ರಯೋಜನಕಾರಿ. ಮುಟ್ಟಿನ ನೋವಿನಿಂದ ಪರಿಹಾರವನ್ನು ನೀಡುತ್ತದೆ.
4. ಇದರ ಪ್ರಯೋಜನಗಳನ್ನು ತಿಳಿದುಕೊಂಡ ಬಳಿಕ, ಈ ಒಂದು ಸಂಗತಿ ನಿಮಗೆ ಹಲವಾರು ರೀತಿಯಲ್ಲಿ ಪ್ರಯೋಜನವನ್ನು ನೀಡುತ್ತದೆ ಎಂಬುದನ್ನೂ ನೀವು ಅರ್ಥಮಾಡಿಕೊಂಡಿರಬೇಕು.
5. ಕೇಸರಿ ನೀರನ್ನು ಹೇಗೆ ಮಾಡುವುದು?: ಕೇಸರಿ ನೀರನ್ನು ತಯಾರಿಸಲು, 1 ಕಪ್ ನೀರಿನಲ್ಲಿ ಕೇಸರಿ ಹಾಕಿ, ಅದಕ್ಕೆ ದಾಲ್ಚಿನ್ನಿ ಮತ್ತು ಏಲಕ್ಕಿ ಸೇರಿಸಿ ಮತ್ತು ಸುಮಾರು ಐದು ನಿಮಿಷಗಳ ಕಾಲ ನೀರನ್ನು ಕುದಿಸಿ. ಇದಾದ ಬಳಿಕ ಸ್ವಲ್ಪ ಸಮಯದವರೆಗೆ ತಣ್ಣಗಾಗಲು ಇರಿಸಿ. ಆರಾಮವಾಗಿ ಕುಡಿಯಬಹುದಾದಷ್ಟು ತಣ್ಣಗಾದಾಗ, ಅದಕ್ಕೆ ಜೇನುತುಪ್ಪ ಬೆರೆಸಿ ಸೇವಿಸಿ. ಇದು ತುಂಬಾ ಬಿಸಿಯಾಗಿರುವಾಗ ಜೇನುತುಪ್ಪವನ್ನು ಸೇರಿಸಬೇಡಿ, ತುಂಬಾ ಬಿಸಿ ನೀರಿನಲ್ಲಿ ಜೇನುತುಪ್ಪವನ್ನು ಬೆರೆಸುವುದು ಅದರ ಪೋಷಕಾಂಶಗಳನ್ನು ನಾಶಪಡಿಸುತ್ತದೆ ಎಂಬುದನ್ನು ನೆನಪಿನಲ್ಲಿಡಿ.
(Disclaimer- ಆತ್ಮೀಯ ಓದುಗರೇ, ನಮ್ಮ ಸುದ್ದಿಯನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಈ ಸುದ್ದಿಯನ್ನು ನಿಮ್ಮಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಮಾತ್ರ ಬರೆಯಲಾಗಿದೆ. ಇದನ್ನು ಬರೆಯುವಲ್ಲಿ ನಾವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯ ಸಹಾಯವನ್ನು ಪಡೆದುಕೊಂಡಿದ್ದೇವೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದ ಯಾವುದೇ ಮಾಹಿತಿಯನ್ನು ನೀವು ಎಲ್ಲಾದರು ಓದಿದ್ದರೆ, ಅದನ್ನು ಅನುಸರಿಸುವ ಮುನ್ನ ವೈದ್ಯರನ್ನು ಅಥವಾ ವಿಷಯ ತಜ್ನರನ್ನು ಸಂಪರ್ಕಿಸಿ.)