Bad Cholesterol: ಈ ಕಾರಣಗಳಿಂದಲೂ ಕೂಡ ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾಗುತ್ತದೆ ನಿಮಗೆ ಗೊತ್ತಾ?
1. ಹೆಚ್ಚು ಒತ್ತಡ ತೆಗೆದುಕೊಳ್ಳುವುದರಿಂದ ಕೊಲೆಸ್ಟ್ರಾಲ್ ಕಡಿಮೆಯಾಗುವುದಿಲ್ಲ.ಅದಕ್ಕಾಗಿಯೇ ನಿಮಗೆ ಕೊಲೆಸ್ಟ್ರಾಲ್ ಸಮಸ್ಯೆ ಇದ್ದರೆ ಒತ್ತಡವನ್ನು ತೆಗೆದುಕೊಳ್ಳಬೇಡಿ.
2. ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಔಷಧಿಗಳ ಮೊರೆ ಹೋಗಬೇಡಿ. ಏಕೆಂದರೆ ಇತ್ತೀಚಿನ ದಿನಗಳಲ್ಲಿ ಹಲವು ಜನರು ಕೊಲೆಸ್ಟ್ರಾಲ್ ಅನ್ನು ಔಷಧಿಗಳ ಮೂಲಕ ಕಡಿಮೆ ಮಾಡಲು ಯತ್ನಿಸುತ್ತಾರೆ. ಆದರೆ ಹಾಗೆ ಮಾಡುವುದು ಸರಿಯಲ್ಲ.
3. ಆಲ್ಕೋಹಾಲ್ ಸೇವನೆಯು ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುತ್ತದೆ. ಹೀಗಾಗಿ ನೀವು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಬಯಸಿದರೆ, ಆಲ್ಕೊಹಾಲ್ ಸೇವಿಸಬೇಡಿ.
4. ನೀವು ಪ್ರತಿದಿನ 30 ನಿಮಿಷಗಳ ಕಾಲ ವಾಕ್ ಮಾಡಿದರೂ ಕೂಡ ಕೊಲೆಸ್ಟ್ರಾಲ್ ಕಡಿಮೆಯಾಗುತ್ತಿಲ್ಲ ಎಂದಾದಲ್ಲಿ, ನೀವು ವ್ಯಾಯಾಮವನ್ನು ಮಾಡಬೇಕು ಮತ್ತು ವ್ಯಾಯಾಮಕ್ಕೆ ಹೆಚ್ಚಿನ ಸಮಯವನ್ನು ಕೊಡಬೇಕು.
5. ಕೆಲವೊಮ್ಮೆ ಸೇವಿಸುವ ಆಹಾರ ತಪ್ಪಾಗಿ ಸೇವಿಸುವುದರಿಂದ ಕೂಡ ಕೊಲೆಸ್ಟ್ರಾಲ್ ಹೆಚ್ಚಾಗುತ್ತದೆ. ಅನೇಕ ಜನರು ಅಧಿಕ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಹಸಿರು ತರಕಾರಿಗಳನ್ನು ಅಧಿಕ ಪ್ರಮಾಣದಲ್ಲಿ ಸೇವಿಸುತ್ತಾರೆ, ಆದರೆ ಕೆಲವರು ಯಾವುದೇ ಯೋಜನೆ ಇಲ್ಲದೆ ಏನನ್ನೂ ತಿನ್ನುತ್ತಾರೆ. ಹೀಗಾಗಿ ನೀವು ನಿಮ್ಮ ಆಹಾರದ ಸರಿಯಾದ ಡಯಟ್ ಪ್ಲಾನ್ ಸಿದ್ಧಪಡಿಸಿಕೊಳ್ಳಬೇಕು (ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಅನುಸರಿಸುವ ಮುನ್ನ ವೈದ್ಯಕೀಯ ಸಲಹೆ ಪಡೆದುಕೊಳ್ಳಿ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಪುಷ್ಠಿಕರಿಸುವುದಿಲ್ಲ)