ಆಹಾರದಲ್ಲಿ ಇಂಗು ಬಳಸುವುದರಿಂದ ಏನಾಗುತ್ತೆ ಗೊತ್ತಾ..?
ಇಂಗು ಆಹಾರದ ಉತ್ತಮ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಇದು ಹೊಟ್ಟೆಯ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ. ಗ್ಯಾಸ್ ಮತ್ತು ಅಸಿಡಿಟಿ ಸಮಸ್ಯೆಗಳನ್ನು ನಿಯಂತ್ರಿಸುವಲ್ಲಿ ಇದು ತುಂಬಾ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.
ಇಂಗು ಆ್ಯಂಟಿ ಬ್ಯಾಕ್ಟೀರಿಯಾ ಮತ್ತು ಆ್ಯಂಟಿ ಫಂಗಲ್ ಗುಣಗಳನ್ನು ಹೊಂದಿದೆ. ಇದು ಮೊಡವೆ ಮತ್ತು ಇತರ ಚರ್ಮದ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಆಸಿಫೊಟಿಡಾ ಉರಿಯೂತದ ವಿರುದ್ಧ ಹೋರಾಡುವ ಗುಣಲಕ್ಷಣಗಳಿಂದ ಸಮೃದ್ಧವಾಗಿದೆ. ಇದು ನಮ್ಮ ದೇಹದಲ್ಲಿನ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಮತ್ತು ಕೀಲು ನೋವನ್ನು ಸಹ ನಿವಾರಿಸುವಲ್ಲಿ ಸಹಾಯ ಮಾಡುತ್ತದೆ.
ನಮ್ಮ ದೈನಂದಿನ ಆಹಾರದಲ್ಲಿ ಒಂದು ಚಿಟಿಕೆ ಇಂಗು ಸೇರಿಸುವುದರಿಂದ ನಮ್ಮ ರೋಗನಿರೋಧಕ ಶಕ್ತಿಯನ್ನು ಇದು ಹೆಚ್ಚಿಸುತ್ತದೆ.
ಇಂಗನ್ನು ಅಫ್ಘಾನಿಸ್ತಾನ, ಪಾಕಿಸ್ತಾನ, ಇರಾನ್, ಬಲೂಚಿಸ್ತಾನ್ ಮತ್ತು ಕಾಬೂಲ್ ಪರ್ವತಗಳಲ್ಲಿ ಹೆಚ್ಚು ಇಳುವರಿ ಮಾಡಲಾಗುತ್ತದೆ.
ಇಂಗು ಸೇವನೆಯಿಂದ ಹೊಟ್ಟೆ ನೋವಿನಂತಹ ಸಮಸ್ಯೆಗಳು ವಿವಾರಣೆಯಾಗುತ್ತವೆ. ಇದಲ್ಲದೆ, ಕೆಮ್ಮು ಮತ್ತು ಶೀತದಂತಹ ಸಮಸ್ಯೆಗಳಿಗೂ ಇಂಗು ಸೇವನೆ ರಾಮಬಾಣ.
ಇಂಗು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದರೆ ಅನೇಕರು ಇದನ್ನು ಆಹಾರದ ರುಚಿ ಹೆಚ್ಚಿಸಲು ಮಾತ್ರ ಬಳಸುತ್ತಾರೆ. ಆದರೆ ಇದನ್ನು ತಿನ್ನುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ ಎಂಬುದು ಕೆಲವರಿಗಷ್ಟೆ ಗೊತ್ತಿದೆ.
ಇಂಗು ಆಹಾರಕ್ಕೆ ಪರಿಮಳ ಮತ್ತು ರುಚಿಯನ್ನು ಅಷ್ಟೆ ಅಲ್ಲ ಇದರೊಂದಿಗೆ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ.
ಇಂಗುವನ್ನು ಅನೇಕ ಅಡುಗೆಗಳಲ್ಲಿ ಬಳಸಲಾಗುತ್ತದೆ. ಒಂದು ಚಿಟಿಕೆ ಇಂಗು ಭಕ್ಷ್ಯಗಳನ್ನು ರುಚಿಕರವಾಗಿ ಮಾಡುತ್ತದೆ.
Asafoetida: ಆಹಾರದಲ್ಲಿ ಇಂಗು ಸೇರಿಸುವುದರಿಂದ ಏನೆಲ್ಲಾ ಆರೋಗ್ಯ ಪ್ರಯೋಜನಗಳು ಇವೆ ನಿಮಗೆ ಗೊತ್ತಾ..?