ವಯಸ್ಸು 53 ಆದ್ರೂ ರಾಹುಲ್ ಗಾಂಧಿ ಇನ್ನೂ ಯಾಕೆ ಮದುವೆಯಾಗಿಲ್ಲ ಗೊತ್ತಾ? ಈ ಕಠಿಣ ನಿರ್ಧಾರ ಕೈಗೊಳ್ಳಲು ಕಾರಣವೇ ಅವರು..
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಇದೀಗ 53 ವರ್ಷ ವಯಸ್ಸು. ಆದರೆ ಇದುವರೆಗೆ ಮದುವೆಯಾಗಿಲ್ಲ. ಈ ಬಗ್ಗೆ ಅನೇಕ ವದಂತಿಗಳು ಹರಿದಾಡಿದರೂ, ಸತ್ಯ ಏನು ಎಂಬುದನ್ನು ಸ್ವತಃ ಅವರೇ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.
ಈ ಹಿಂದೆ ಕೆಲ ನಟಿಯರ ಜೊತೆ ರಾಹುಲ್ ಹೆಸರು ಕೇಳಿಬಂದಿತ್ತು. ಆದರೆ ಯಾವ ವದಂತಿಯೂ ಹೆಚ್ಚು ಕಾಲ ಉಳಿದಿರಲಿಲ್ಲ.
ಅಷ್ಟೇ ಅಲ್ಲದೆ, ರಾಹುಲ್ ಗಾಂಧಿಯವರ ಮದುವೆ ವಿಚಾರಕ್ಕೆ ಸಂಬಂಧಿಸಿದಂತೆ ಆಗಾಗ್ಗೆ ಪ್ರಶ್ನೆಗಳು ಕೂಡ ಉದ್ಭವಿಸುತ್ತವೆ.
ಜೈಪುರದ ಮಹಾರಾಣಿ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ರಾಹುಲ್ ಗಾಂಧಿ ನಡೆಸಿದ ಸಂವಾದದಲ್ಲಿ ಮದುವೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ್ದಾರೆ.
ನೀವು ತುಂಬಾ ಸ್ಮಾರ್ಟ್ ಆಗಿದ್ದೀರ. ಆದ್ರೆ ಮದುವೆಯ ಬಗ್ಗೆ ಏಕೆ ಯೋಚಿಸಲಿಲ್ಲ? ಎಂದು ರಾಹುಲ್ ಅವರಿಗೆ ವ್ಯಕ್ತಿಯೊಬ್ಬರು ಪ್ರಶ್ನೆ ಕೇಳಿದ್ದಾರೆ
ಈ ಪ್ರಶ್ನೆಗೆ ಉತ್ತರಿಸಿದ ಅವರು, ಏಕೆಂದರೆ ನಾನು ನನ್ನ ಕೆಲಸದಲ್ಲಿ ಮತ್ತು ಕಾಂಗ್ರೆಸ್ ಪಕ್ಷದಲ್ಲಿ ಸಂಪೂರ್ಣವಾಗಿ ಸಿಕ್ಕಿಹಾಕಿಕೊಂಡಿದ್ದೇನೆ ಎಂದು ಹೇಳಿದರು.
ಇದಾದ ಬಳಿಕ ತಮ್ಮ ನೆಚ್ಚಿನ ಭಕ್ಷ್ಯಗಳ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಹಾಗಲಕಾಯಿಯನ್ನು ಹೊರತುಪಡಿಸಿ ಎಲ್ಲವೂ ಇಷ್ಟ ಎಂದಿದ್ದಾರೆ.