ಬ್ಲಡ್ ಶುಗರ್ ಕಂಟ್ರೋಲ್ ಮಾಡಲು ಸಹಾಯ ಮಾಡುತ್ತೆ ಈ ನೀರು: ಆದರೆ ಕುಡಿಯುವ ಸಮಯ ಇದಾಗಿರಬೇಕು!
ಪ್ರೋಟೀನ್, ಕಬ್ಬಿಣ, ಕ್ಯಾಲ್ಸಿಯಂ, ಫೈಬರ್, ಪೊಟ್ಯಾಸಿಯಮ್, ಮ್ಯಾಂಗನೀಸ್, ವಿಟಮಿನ್ ಸಿ, ಸತು ಮುಂತಾದ ಪೋಷಕಾಂಶಗಳು ಇದರಲ್ಲಿ ಕಂಡುಬರುತ್ತವೆ. ಮೆಂತ್ಯ ಬೀಜಗಳು ಮತ್ತು ಎಲೆಗಳನ್ನು ಹಲವು ವಿಧಗಳಲ್ಲಿ ಬಳಸಬಹುದು. ಇದು ಆಹಾರದ ರುಚಿಯನ್ನು ಹೆಚ್ಚಿಸುವುದರ ಜೊತೆಗೆ, ಅನೇಕ ರೋಗಗಳಿಂದ ರಕ್ಷಿಸಲು ಸಹಕಾರಿಯಾಗಿದೆ.
ಅದರಲ್ಲೂ ಮೆಂತ್ಯವು ಮಧುಮೇಹ ರೋಗಿಗಳಿಗೆ ವರದಾನಕ್ಕಿಂತ ಕಡಿಮೆಯಿಲ್ಲ. ಇದರಲ್ಲಿರುವ ಕರಗುವ ನಾರಿನಂಶವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಮಧುಮೇಹ ಇರುವವರು ತಮ್ಮ ಆಹಾರದಲ್ಲಿ ಮೆಂತ್ಯವನ್ನು ಸೇರಿಸಿಕೊಳ್ಳಬೇಕು. ಅಥವಾ ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಮೆಂತ್ಯೆ ನೆನಸಿಟ್ಟ ನೀರು ಕುಡಿದರೆ ಕ್ಷಣದಲ್ಲಿ ಬ್ಲಡ್ ಶುಗರ್ ನಿಯಂತ್ರಣಕ್ಕೆ ಬರುತ್ತದೆ.
ಮೆಂತ್ಯದ ಎಲೆಗಳು, ಪುಡಿ ಮತ್ತು ಬೀಜಗಳು ಈ ಎಲ್ಲವೂ ಮಧುಮೇಹಿಗಳಿಗೆ ಪ್ರಯೋಜನಕಾರಿ. ಮೆಂತ್ಯ ಬೀಜಗಳನ್ನು ನೀರಿನಲ್ಲಿ ನೆನೆಸಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ನೀರನ್ನು ಕುಡಿಯಿರಿ.
ಮೆಂತ್ಯ ಬೀಜಗಳಲ್ಲಿ ಕಬ್ಬಿಣ, ರಂಜಕ, ಕ್ಯಾಲ್ಸಿಯಂ ಮತ್ತು ಅನೇಕ ಪೋಷಕಾಂಶಗಳು ಕಂಡುಬರುತ್ತವೆ. ಮೂಳೆಗಳಿಗೆ ಇವು ಪ್ರಯೋಜನಕಾರಿ. ಇವುಗಳಲ್ಲಿರುವ ಉರಿಯೂತ ನಿವಾರಕ ಗುಣಗಳು ಕೀಲುಗಳಲ್ಲಿನ ನೋವು ಮತ್ತು ಊತವನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ.
ಮೆಂತ್ಯ ಫೈಬರ್ನಲ್ಲಿ ಸಮೃದ್ಧವಾಗಿದೆ. ಇದು ಸರಿಯಾದ ಜೀರ್ಣಕ್ರಿಯೆಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಇದರ ನೀರನ್ನು ಕುಡಿಯುವುದರಿಂದ ಹೊಟ್ಟೆ ಉರಿ, ಗ್ಯಾಸ್, ಅಜೀರ್ಣ ಇತ್ಯಾದಿ ಸಮಸ್ಯೆಗಳನ್ನು ಕಡಿಮೆ ಮಾಡಿಕೊಳ್ಳಬಹುದು. ಇದಕ್ಕಾಗಿ ನೀವು ರಾತ್ರಿ ಮಲಗುವ ಮುನ್ನ ಉಗುರುಬೆಚ್ಚನೆಯ ನೀರಿನಲ್ಲಿ ಮೆಂತ್ಯ ಪುಡಿಯನ್ನು ಬೆರೆಸಿ ಕುಡಿದರೆ ಬೆಸ್ಟ್.
ಸೂಚನೆ: ಲೇಖನದಲ್ಲಿ ಉಲ್ಲೇಖಿಸಲಾದ ಸಲಹೆಗಳು ಸಾಮಾನ್ಯ ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಮತ್ತು ವೃತ್ತಿಪರ ವೈದ್ಯಕೀಯ ಸಲಹೆಯಾಗಿ ತೆಗೆದುಕೊಳ್ಳಬಾರದು. ನೀವು ಯಾವುದೇ ಪ್ರಶ್ನೆಗಳನ್ನು ಅಥವಾ ಕಾಳಜಿಗಳನ್ನು ಹೊಂದಿದ್ದರೆ, ವೈದ್ಯರನ್ನು ಸಂಪರ್ಕಿಸಿ. Zee News Kannada ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ