Health Tips : ಚಳಿಗಾಲದಲ್ಲಿ ಬೆಲ್ಲದ ಹಾಲು ಸೇವಿಸಿ.. ಈ ಕಾಯಿಲೆಯಿಂದ ನಿಮ್ಮನ್ನು ರಕ್ಷಿಸಿ.!

Fri, 14 Oct 2022-6:09 pm,

ಹಾಲಿನಲ್ಲಿ ಕ್ಯಾಲ್ಸಿಯಂ ಸೇರಿದಂತೆ ಅನೇಕ ಪೋಷಕಾಂಶಗಳಿವೆ, ಇದು ವ್ಯಕ್ತಿಯ ದೇಹಕ್ಕೆ ತುಂಬಾ ಪ್ರಯೋಜನಕಾರಿ. ಆದರೆ ನೀವು ಅದಕ್ಕೆ ನೀವು ಕೊಂಚ ಬೆಲ್ಲವನ್ನು ಸೇರಿಸಿ ಕುಡಿಯುವುದರಿಂದ ಅದರ ಪ್ರಯೋಜನಗಳು ಹೆಚ್ಚಾಗುತ್ತದೆ. 

ಹಾಲಿನಲ್ಲಿ ಬೆಲ್ಲವನ್ನು ಹಾಕಿ ಕುಡಿಯುವುದು ಆರೋಗ್ಯಕ್ಕೆ ಅನೇಕ ಪ್ರಯೋಜನಗಳನ್ನು ನೀಡುತ್ತದೆ. ಚಳಿಗಾಲದಲ್ಲಿ ಇದನ್ನು ಹಾಲಿನೊಂದಿಗೆ ಬೆರೆಸಿ ಕುಡಿಯುವುದರಿಂದ ದೇಹಕ್ಕೆ ಸಾಕಷ್ಟು ಲಾಭಗಳು ಸಿಗುತ್ತವೆ. ಹಾಲಿನಲ್ಲಿ ವಿಟಮಿನ್ ಎ, ವಿಟಮಿನ್ ಬಿ ಮತ್ತು ಡಿ ಜೊತೆಗೆ ಕ್ಯಾಲ್ಸಿಯಂ, ಪ್ರೋಟೀನ್ ಮತ್ತು ಲ್ಯಾಕ್ಟಿಕ್ ಆಮ್ಲಗಳು ಕಂಡುಬರುತ್ತವೆ. ಬೆಲ್ಲದಲ್ಲಿ ಸುಕ್ರೋಸ್, ಗ್ಲೂಕೋಸ್, ಕಬ್ಬಿಣ ಮತ್ತು ಅನೇಕ ಖನಿಜಗಳು ಕಂಡುಬರುತ್ತವೆ.

ಬೊಜ್ಜು ಹೆಚ್ಚಿದರೆ ಹಾಲಿಗೆ ಸಕ್ಕರೆ ಬೆರೆಸಿ ಕುಡಿಯುವ ಬದಲು, ಹಾಲಿಗೆ ಬೆಲ್ಲ ಬೆರೆಸಿ ಕುಡಿಯಿರಿ. ಇದು ತೂಕ ಕಡಿಮೆ ಮಾಡಲು ಸಹಾಯಕವಾಗಿದೆ. ಮೂಳೆಗಳನ್ನು ಬಲಗೊಳಿಸಲು ಬೆಲ್ಲದಲ್ಲಿ ಬಹಳಷ್ಟು ಕ್ಯಾಲ್ಸಿಯಂ ಮತ್ತು ರಂಜಕ ಕಂಡುಬರುತ್ತದೆ. ಈ ಕಾರಣಕ್ಕಾಗಿ ಬೆಲ್ಲದ ಟೀ ಕುಡಿಯುವುದರಿಂದ ಮೂಳೆಗಳು ಬಲಗೊಳ್ಳುತ್ತವೆ.

ಬಿಸಿ ಹಾಲು ಮತ್ತು ಬೆಲ್ಲವನ್ನು ಬೆರೆಸಿ ಕುಡಿದರೆ ಹೊಟ್ಟೆಯ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ. ನಿಮ್ಮ ಜೀರ್ಣಕ್ರಿಯೆಯೂ ಚೆನ್ನಾಗಿರುತ್ತದೆ. ಇಷ್ಟೇ ಅಲ್ಲ, ಮಹಿಳೆಯರು ಬೆಚ್ಚನೆಯ ಹಾಲಿನೊಂದಿಗೆ ಬೆಲ್ಲವನ್ನು ಬೆರೆಸಿ ಕುಡಿಯುವುದರಿಂದ ಋತುಬಂಧದ ನೋವಿನಿಂದ ಪರಿಹಾರ ಸಿಗುತ್ತದೆ. 

ZEENEWS TRENDING STORIES

By continuing to use the site, you agree to the use of cookies. You can find out more by Tapping this link