ಖಾಲಿ ಹೊಟ್ಟೆಗೆ ಕೇವಲ ಒಂದು ಲೋಟ ಈ ನೀರು ! ಈ ರೋಗಗಳಿಗೆ ಶಾಶ್ವತವಾಗಿ ಹೇಳಿ ಗುಡ್ ಬೈ
ಪ್ರತಿದಿನ ಬೆಳಿಗ್ಗೆ ನೀರಿಗೆ ನಿಂಬೆ ರಸ ಬೆರೆಸಿ ಕುಡಿಯಬೇಕು. ಹೀಗೆ ಮಾಡುವುದರಿಂದ ದೇಹದಲ್ಲಿ ಸೇರಿಕೊಂಡಿರುವ ಕಲ್ಮಶಗಳು ಹೊರ ಹೋಗುತ್ತವೆ. ಇದು ತೂಕ ನಷ್ಟಕ್ಕೆ ಕಾರಣವಾಗುತ್ತದೆ. ಅಲ್ಲದೆ ದೇಹದಲ್ಲಿ ಸಂಗ್ರಹವಾಗಿರುವ ಕೊಬ್ಬನ್ನು ಬರ್ನ್ ಮಾಡಲು ಕೂಡಾ ಇದು ಸಹಕಾರಿಯಾಗಿದೆ.
ನಿಂಬೆ ನೀರಿನಲ್ಲಿ ವಿಟಮಿನ್ ಮತ್ತು ಫೈಬರ್ ಹೇರಳವಾಗಿ ಕಂಡು ಬರುತ್ತವೆ. ಇದು ಜೀರ್ಣಕ್ರಿಯೆಯನ್ನು ಆರೋಗ್ಯವಾಗಿ ಇಡುತ್ತದೆ. ಇದನ್ನು ಕುಡಿಯುವುದರಿಂದ ಅಜೀರ್ಣದಂತಹ ಹೊಟ್ಟೆಗೆ ಸಂಬಂಧಿಸಿದ ಕಾಯಿಲೆಗಳು ಗುಣವಾಗುತ್ತವೆ.
ನಿಂಬೆ ರಸ ಪೊಟ್ಯಾಸಿಯಮ್ ಮತ್ತು ಕ್ಯಾಲ್ಸಿಯಂನಲ್ಲಿ ಸಮೃದ್ದವಾಗಿದೆ. ಇದು ರಕ್ತದೊತ್ತಡ ನಿಯಂತ್ರಣಕ್ಕೆ ರಾಮಬಾಣ. ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿದಿನ ನಿಂಬೆ ನೀರನ್ನು ಸೇವಿಸಬೇಕು.
ನಿಂಬೆ ನೀರನ್ನು ಕುಡಿಯುವುದರಿಂದ ದೇಹದಲ್ಲಿ ಹಿಮೋಗ್ಲೋಬಿನ್ ಮಟ್ಟ ಹೆಚ್ಚಾಗುತ್ತದೆ. ಇದರಲ್ಲಿ ಸಾಕಷ್ಟು ಪ್ರಮಾಣದ ಪೋಷಕಾಂಶಗಳಾದ ಉತ್ಕರ್ಷಣ ನಿರೋಧಕಗಳು, ವಿಟಮಿನ್ ಬಿ, ಪೊಟ್ಯಾಸಿಯಮ್ ಕಂಡುಬರುತ್ತದೆ. ಇದು ರಕ್ತವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.
ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳು ನಿಂಬೆ ನೀರಿನಲ್ಲಿ ಹೇರಳವಾಗಿ ಕಂಡುಬರುತ್ತವೆ. ಇದರ ಸೇವನೆಯು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಪ್ರತಿದಿನ ನಿಂಬೆ ನೀರನ್ನು ಕುಡಿಯುವುದರಿಂದ ದೇಹವು ಶೀತ, ಕೆಮ್ಮು ಮತ್ತು ಜ್ವರದಂತಹ ಕಾಯಿಲೆಗಳಿಂದ ದೂರವಿರುತ್ತದೆ.