ನಿತ್ಯ ಖಾಲಿ ಹೊಟ್ಟೆಯಲ್ಲಿ ಈ ನೀರನ್ನು ಕುಡಿದರೆ ಒಂದೇ ವಾರದಲ್ಲಿ ಸುಲಭವಾಗಿ ಕರಗುತ್ತೆ ಸೊಂಟದ ಬೊಜ್ಜು!
ತೂಕ ಇಳಿಕೆ ಮಾಡುವುದು ಕಷ್ಟ ಎಂದು ಅನೇಕರು ಭಾವಿಸುತ್ತಾರೆ. ಆದರೆ ನೀವು ಒಂದೇ ವಾರದಲ್ಲಿ ತೂಕವನ್ನು ಕಳೆದುಕೊಳ್ಳಬಹುದು. ಹೇಗೆ ಗೊತ್ತಾ? ಇಲ್ಲಿದೆ ಕೆಲ ಟಿಪ್ಸ್’ಗಳು.
ಅತ್ಯಂತ ಸಮತೋಲಿತ ರೀತಿಯಲ್ಲಿ ನಿರ್ವಹಣೆ ಮಾಡಿದರೆ, ತೂಕವನ್ನು ಸುಲಭವಾಗಿ ಕಡಿಮೆ ಮಾಡಬಹುದು. ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಹೆಲ್ತ್ ಪ್ರಕಾರ, ನೀವು 7 ದಿನಗಳಲ್ಲಿ 0.45 ರಿಂದ 1.36 ಕೆಜಿ ವರೆಗೆ ತೂಕವನ್ನು ಕಳೆದುಕೊಳ್ಳಬಹುದು.
ಕೊಬ್ಬು ದೇಹದಲ್ಲಿ ಹೆಚ್ಚಾಗಲು ಪ್ರಮುಖ ಕಾರಣ, ಎಣ್ಣೆ ಮತ್ತು ಸಕ್ಕರೆ ಅಂಶ. ಆದ್ದರಿಂದ, ತೂಕ ನಷ್ಟ ಮಾಡಬೇಕೆನ್ನುವವರು ಇವುಗಳಿಂದ ದೂರವಿರಬೇಕು. ಹೀಗೆ ಮಾಡಿದರೆ ಕೇವಲ 7 ದಿನಗಳಲ್ಲಿ ನೈಸರ್ಗಿಕವಾಗು ತೂಕ ಇಳಿಕೆ ಮಾಡಬಹುದು.
ಚಯಾಪಚಯವನ್ನು ಹೆಚ್ಚಿಸಲು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನಿಂಬೆ ನೀರನ್ನು ಸೇವಿಸಿ. ನಿಂಬೆಯಲ್ಲಿರುವ ಸಿಟ್ರಿಕ್ ಆಮ್ಲವು ಕೊಬ್ಬನ್ನು ಕರಗಿಸುವ ಕೆಲಸ ಮಾಡುತ್ತದೆ. ಬೆಚ್ಚಗಿದ್ದಾಗಲೇ ಕುಡಿದರೆ ಅನೇಕ ಪ್ರಯೋಜನಗಳನ್ನು ಪಡೆಯಬಹುದು.
ತ್ರಿಫಲಾ ಪುಡಿಯನ್ನು ಸಹ ಸೇವಿಸಿದರೆ ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಬಹುದು. ತ್ರಿಫಲ ಚೂರ್ಣವನ್ನು 1 ಲೋಟ ಉಗುರು ಬೆಚ್ಚಗಿನ ನೀರಿಗೆ ಬೆರೆಸಿ ರಾತ್ರಿ ಮಲಗುವ ಮುನ್ನ ಕುಡಿಯಿರಿ. ಇದು ಹೊಟ್ಟೆಯನ್ನು ಸ್ವಚ್ಛಗೊಳಿಸಲು ಮತ್ತು ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಶುಂಠಿ ಚಹಾವನ್ನು ಕುಡಿಯುವುದರಿಂದಲೂ ತೂಕ ಕಡಿಮೆ ಮಾಡಬಹುದು. ಆದರೆ ಅದಕ್ಕೆ ಹಾಲು ಬೆರೆಸಬಾರದು. ಶುಂಠಿಯನ್ನು 10 ನಿಮಿಷಗಳ ಕಾಲ ನೀರಿನಲ್ಲಿ ಕುದಿಸಿ ನಂತರ ನಿಂಬೆ ರಸ ಮತ್ತು ಜೇನುತುಪ್ಪವನ್ನು ಬೆರೆಸಿ ಕೂಡ ಕುಡಿಯಬಹುದು.
(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇವುಗಳನ್ನು ಅನುಸರಿಸುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. Zee ಮಾಧ್ಯಮವು ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ.)