ನೇರಳೆ ಹಣ್ಣಿನ ಬೀಜವನ್ನು ಇದರ ಜೊತೆ ಸೇವಿಸಿದರೆ.. ಬ್ಲಡ್ ಶುಗರ್ ಕಂಟ್ರೋಲ್ ಆಗೋದು ಖಚಿತ!
ನೇರಳೆ ಹಣ್ಣಿನ ಬೀಜಗಳನ್ನ ಸರಿಯಾದ ವಿಧಾನದಲ್ಲಿ ಸೇವಿಸಿದರೆ ರಕ್ಕದಲ್ಲಿನ ಸಕ್ಕರೆಯ ಮಟ್ಟ ನಿಯಂತ್ರಿಸಬಹುದು.
ನೇರಳೆ ಹಣ್ಣಿನ ಸೀಸನ್ ಇರುವ ಸಂದರ್ಭದಲ್ಲಿ, ಬೀಜವನ್ನು ಒಣಗಿಸಿ ಪುಡಿ ಮಾಡಿ ಇಟ್ಟುಕೊಳ್ಳಬೇಕು.
ನೇರಳೆ ಹಣ್ಣಿನ ಬೀಜದ ಪುಡಿಯನ್ನು ಬೆಚ್ಚಗಿನ ನೀರಿಗೆ ಹಾಕಿ ಪ್ರತಿನಿತ್ಯ ಸೇವಿಸುತ್ತ ಇದ್ದರೆ, ಮಧುಮೇಹಿಗಳಲ್ಲಿ ಬ್ಲಡ್ ಶುಗರ್ ಹೆಚ್ಚಾಗುವುದಿಲ್ಲ.
ನೇರಳೆ ಹಣ್ಣು ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ ಹೊಂದಿದ್ದು, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ.
ಇದು ಇನ್ಸುಲಿನ್ ಸೂಕ್ಷ್ಮತೆಯನ್ನು ಹೆಚ್ಚಿಸುವ ಸಂಯುಕ್ತಗಳನ್ನು ಹೊಂದಿರುತ್ತದೆ. ಈ ಕಾರಣದಿಂದಾಗಿ, ದೇಹವು ಇನ್ಸುಲಿನ್ ಹಾರ್ಮೋನ್ ಅನ್ನು ಉತ್ತಮವಾಗಿ ಬಳಸುತ್ತದೆ.
ನೇರಳೆ ಹಣ್ಣಿನ ಬೀಜದ ಪುಡಿಯ ಸೇವನೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದು ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ. ಕೀಲು ನೋವಿಗೆ ಪರಿಹಾರ ನೀಡುತ್ತದೆ.
ಸೂಚನೆ: ಪ್ರಿಯ ಓದುಗರೇ, ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.