ಖಾಲಿ ಹೊಟ್ಟೆಯಲ್ಲಿ ನೀರಿನೊಂದಿಗೆ ಇದನ್ನು ಬೆರಸಿ ಕುಡಿಯಿರಿ..ಇದು ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ..!
ಬೆಳಿಗ್ಗೆ ಎದ್ದ ನಂತರ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದು ಆರೋಗ್ಯಕ್ಕೆ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ, ಆದರೆ ನೀವು ನೀರಿನಲ್ಲಿ ನಿಂಬೆ ಬೆರೆಸಿ ಕುಡಿದರೆ ದೇಹಕ್ಕೆ ಡಬಲ್ ಲಾಭವನ್ನು ಪಡೆಯಬಹುದು. ಹೌದು, ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನಿಂಬೆಹಣ್ಣು ಬೆರಸಿದ ನೀರನ್ನು ಕುಡಿಯುವುದು ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಹೊಟ್ಟೆಗೆ ಸಂಬಂಧಿಸಿದ ಅನೇಕ ಸಮಸ್ಯೆಗಳಿಂದ ಪರಿಹಾರವನ್ನು ನೀಡುತ್ತದೆ. ಹಲವಾರು ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ನಿಂಬೆ ನಿಮ್ಮ ಚರ್ಮದ ಆರೋಗ್ಯವನ್ನು ಕೂಡ ಸುಧಾರಿಸುತ್ತದೆ.
ಖಾಲಿ ಹೊಟ್ಟೆಯಲ್ಲಿ ನಿಂಬೆ ಬೆರಸಿದ ನೀರನ್ನು ಕುಡಿಯುವುದರಿಂದ, ಅದು ನಿಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ. ನಿಂಬೆಯಲ್ಲಿ ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳಿವೆ, ಇದು ಹೊಟ್ಟೆಯ ಆಮ್ಲೀಯತೆಯನ್ನು ಕಡಿಮೆ ಮಾಡುತ್ತದೆ ಮತ್ತು ಆಹಾರವನ್ನು ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ. ಇದನ್ನು ಸೇವಿಸುವುದರಿಂದ ಅಜೀರ್ಣ ಮತ್ತು ಮಲಬದ್ಧತೆಯಂತಹ ಸಮಸ್ಯೆಗಳಿಂದ ಪರಿಹಾರ ಪಡೆಯಬಹುದು.
ನಿಂಬೆ ಬೆರಸಿದ ನೀರು, ದೇಹದಿಂದ ವಿಷಕಾರಿ ಅಂಶಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಇದು ಯಕೃತ್ತು ಮತ್ತು ಮೂತ್ರಪಿಂಡಗಳ ಕಾರ್ಯನಿರ್ವಹಣೆಯನ್ನು ಸುಧಾರಿಸುತ್ತದೆ.
ನಿಂಬೆ ಬೆರಸಿದ ನೀರಿನಲ್ಲಿ ಹೆಚ್ಚಿನ ಪ್ರಮಾಣದ ವಿಟಮಿನ್ ಸಿ ಅಂಶ ಇದೆ, ಇದು ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುತ್ತದೆ. ನಮ್ಮ ಪ್ರತಿರಕ್ಷಣಾ ವ್ಯವಸ್ಥೆಗೆ ವಿಟಮಿನ್ ಸಿ ಬಹಳ ಮುಖ್ಯ. ನಿಂಬೆ ನೀರನ್ನು ಕುಡಿಯುವುದರಿಂದ ಮಳೆಗಾಲದಲ್ಲಿ ವೈರಲ್ ಸೋಂಕುಗಳನ್ನು ತಡೆಯಬಹುದು.
ನಿಂಬೆ ನೀರನ್ನು ನಿಯಮಿತವಾಗಿ ಸೇವಿಸುವುದು ಚರ್ಮಕ್ಕೆ ಪ್ರಯೋಜನಕಾರಿಯಾಗಿದೆ. ಇದರಲ್ಲಿರುವ ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳು ಚರ್ಮಕ್ಕೆ ತಾಜಾತನ ಮತ್ತು ಹೊಳಪನ್ನು ನೀಡುತ್ತದೆ. ಇದು ಕಲೆಗಳನ್ನು ಕಡಿಮೆ ಮಾಡಲು ಮತ್ತು ಚರ್ಮದ ಮೃದುತ್ವವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.
ನಿಂಬೆ ನೀರನ್ನು ಸೇವಿಸುವುದರಿಂದ ತೂಕ ಇಳಿಸಲು ಸಹಕಾರಿಯಾಗುವುದಷ್ಟೇ ಅಲ್ಲದೆ, ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ಕಡಿಮೆ ಕ್ಯಾಲೋರಿ ಅಂಶವನ್ನು ಹೊಂದಿದ್ದು, ತೂಕ ಕಡಿಮೆ ಮಾಡಿಕೊಳ್ಳುಲು ಬಯಸುವವರಿಗೆ ತುಂಬಾ ಪ್ರಯೋಜನಕಾರಿ.