ಈರುಳ್ಳಿ ರಸಕ್ಕೆ ಈ ಪುಡಿ ಬೆರೆಸಿ ಕುಡಿಯಿರಿ.. ಶುಗರ್ ತಿಂಗಳುಗಳ ಕಾಲ ಕಂಟ್ರೋಲ್‌ನಲ್ಲಿರುತ್ತೆ !
ಮಧುಮೇಹ ಅಂಗ ವೈಫಲ್ಯ, ಬೊಜ್ಜು, ಮೂತ್ರಪಿಂಡ ಮತ್ತು ಕಣ್ಣಿನ ವೈಫಲ್ಯಕ್ಕೂ ಕಾರಣವಾಗುತ್ತದೆ. ಕೆಲವು ಆಹಾರಗಳನ್ನು ಸೇವಿಸುವ ಮೂಲಕ ಬ್ಲಡ್‌ಶುಗರ್‌ನಿಯಂತ್ರಣದಲ್ಲಿಟ್ಟುಕೊಳ್ಳಬಹುದು.
ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಮನೆಮದ್ದುಗಳ ಮೂಲಕವೂ ನಿಯಂತ್ರಿಸಬಹುದು. ಈರುಳ್ಳಿ ರಸ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವಲ್ಲಿ ಪ್ರಯೋಜನಕಾರಿ ಆಗಿದೆ.
ಈರುಳ್ಳಿ ಕಡಿಮೆ ಕ್ಯಾಲೋರಿ ಹೊಂದಿದೆ. ವಿಟಮಿನ್ ಸಿ, ಬಿ ಮತ್ತು ಪೊಟ್ಯಾಸಿಯಮ್ ಅನ್ನು ಹೊಂದಿರುತ್ತದೆ. ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ ಹೊಂದಿದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಈರುಳ್ಳಿಯಲ್ಲಿ ಫೈಬರ್ ಹೇರಳವಾಗಿ ಕಂಡುಬರುತ್ತದೆ. ಇದು ದೇಹದಲ್ಲಿನ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಡಲು ಸಹಕಾರಿ. ಜೀರ್ಣಕ್ರಿಯೆಯನ್ನು ಸರಿಪಡಿಸುತ್ತದೆ. ಈರುಳ್ಳಿಯಲ್ಲಿರುವ ಫೈಬರ್ ಕರುಳಿನ ಚಲನೆಯನ್ನು ಸುಲಭಗೊಳಿಸುತ್ತದೆ.
2 ಕತ್ತರಿಸಿದ ಈರುಳ್ಳಿ, 1 ಕಪ್ ನೀರು, ಸ್ವಲ್ಪ ಜೀರಿಗೆ ಪುಡಿ ಸೇರಿಸಿ ಬ್ಲೆಂಡರ್‌ನಲ್ಲಿ ಚೆನ್ನಾಗಿ ರುಬ್ಬಿ. ನಂತರ ಅದಕ್ಕೆ ನಿಂಬೆ ರಸ ಮತ್ತು ಕಲ್ಲು ಉಪ್ಪನ್ನು ಸೇರಿಸಿ ಕುಡಿಯಿರಿ. ಇದನ್ನು ಊಟಕ್ಕೂ ಮುನ್ನ ಕುಡಿದರೆ ಬ್ಲಡ್ ಶುಗರ್ ಹೆಚ್ಚಾಗುವುದಿಲ್ಲ.
ಮಧುಮೇಹ ರೋಗಿಗಳು ಈರುಳ್ಳಿಯನ್ನು ಸಲಾಡ್ ರೂಪದಲ್ಲಿ ಸಹ ಸೇವಿಸಬಹುದು. ಊಟಕ್ಕೂ ಮೊದಲು ಒಂದು ಬಟ್ಟಲಿನಲ್ಲಿ ಈರುಳ್ಳಿ ಮತ್ತು ಸೌತೆಕಾಯಿಯನ್ನು ಕತ್ತರಿಸಿ, ಉಪ್ಪು, ಕರಿಮೆಣಸು ಮತ್ತು ನಿಂಬೆ ರಸವನ್ನು ಸೇರಿಸಿ ತಿನ್ನಿರಿ.
ಸೂಚನೆ: ಪ್ರಿಯ ಓದುಗರೇ, ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.