ಬೇಸಿಗೆಯಲ್ಲಿ ಕಬ್ಬಿನಹಾಲು ಸೇವನೆಯಿಂದ ಆರೋಗ್ಯಕ್ಕೆ ಸಿಗುವ ಅದ್ಭುತ ಪ್ರಯೋಜನಗಳಿವು!
ನೂರಕ್ಕೆ ನೂರರಷ್ಟು ನೈಸರ್ಗಿಕ ಪಾನೀಯವಾಗಿರುವ ಕಬ್ಬಿನ ಹಾಲು ಸೋಡಿಯಂ, ಪೊಟ್ಯಾಸಿಯಮ್, ಕ್ಯಾಲ್ಸಿಯಂ, ಮೆಗ್ನೀಸಿಯಮ್ ಮತ್ತು ಕಬ್ಬಿಣದ ಅಂಶಗಳನ್ನು ಒಳಗೊಂಡಿದೆ. ರುಚಿಯಲ್ಲಿ ಸಿಹಿಯಾಗಿರುವ ಈ ಪಾನೀಯ ಸೇವನೆಯು ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನಕಾರಿ.
ನಮ್ಮಲ್ಲಿ ಕೆಲವರು ಬೇಸಿಗೆಯಲ್ಲಿ ದೇಹದ ಉಷ್ಣಾಂಶ ಹೆಚ್ಚಾಗುತ್ತದೆ ಎಂದು ಕಬ್ಬಿನಹಾಲನ್ನು ಕುಡಿಯುವುದಿಲ್ಲ. ಆದರೆ, ಇದು ತಪ್ಪು ಕಲ್ಪನೆ. ಬೇಸಿಗೆಯಲ್ಲಿ ಕಬ್ಬಿನಹಾಲನ್ನು ಕುಡಿಯುವುದರಿಂದ ಇದು ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ನೀಡುತ್ತದೆ. ಅವುಗಳೆಂದರೆ...
ಬೇಸಿಗೆಯಲ್ಲಿ ಕಬ್ಬಿನಹಾಲಿನ ಸೇವನೆಯಿಂದ ದೇಹಕ್ಕೆ ತ್ವರಿತ ಶಕ್ತಿ ದೊರೆಯುತ್ತದೆ. ನಿರ್ಜಲೀಕರಣ ಸಮಸ್ಯೆಯನ್ನು ನಿವಾರಿಸುವಲ್ಲಿ ಇದು ಅತ್ಯುತ್ತಮ ಪಾನೀಯ.
ಕಬ್ಬಿನಹಾಲಿನಲ್ಲಿ ಜೀವಸತ್ವಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳು ಹೇರಳವಾಗಿ ಕಂಡು ಬರುತ್ತದೆ. ಇದು ಯಕೃತ್ ನಂತಹ ಪ್ರಮುಖ ಅಂಗಗಳ ಆರೋಗ್ಯವನ್ನು ಬೆಂಬಲಿಸುತ್ತದೆ.
ಕಬ್ಬಿನ ರಸದಲ್ಲಿ ಕ್ಯಾನ್ಸರ್ ವಿರೋಧಿ ಗುಣಗಳಿದ್ದು ನಿಯಮಿತವಾಗಿ ಕಬ್ಬಿನ ಹಾಲನ್ನು ಕುಡಿಯುವುದರಿಂದ ಕ್ಯಾನ್ಸರ್ ಅಪಾಯದಿಂದ ದೂರ ಉಳಿಯಬಹುದು ಎಂದು ಹಲವು ಅಧ್ಯಯನಗಳಿಂದ ತಿಳಿದುಬಂದಿದೆ.
ಜೀರ್ಣಕಾರಿ ಸಮಸ್ಯೆಯಿಂದ ಬಳಲುತ್ತಿರುವವರಿಗೂ ಕಬ್ಬಿನಹಾಲು ಅತ್ಯುತ್ತಮ ಔಷಧಿಯಂತೆ ಕಾರ್ಯನಿರ್ವಹಿಸುತ್ತದೆ. ವಾಸ್ತವವಾಗಿ, ಕಬ್ಬಿನ ರಸದಲ್ಲಿರುವ ಪೊಟ್ಯಾಸಿಯಮ್ ಹೊಟ್ಟೆಯಲ್ಲಿನ ಪಿಹೆಚ್ ಮಟ್ಟವನ್ನು ಸಮತೋಲನಗೊಳಿಸುತ್ತದೆ.
ಕಬ್ಬಿನಹಾಲಿನಲ್ಲಿ ಸಕ್ಕರೆಯ ಅಂಶವಿದ್ದರೂ ಕೂಡ ಇದನ್ನು ಮಧುಮೇಹಿಗಳಿಗೆ ಅತ್ಯುತ್ತಮ ಪಾನೀಯ ಎಂದು ಪರಿಗಣಿಸಲಾಗಿದೆ. ಮಧುಮೇಹಿಗಳು ಹಿತ-ಮಿತವಾಗಿ ಕಬ್ಬಿನಹಾಲು ಕುಡಿಯುವುದು ಹೆಚ್ಚು ಪ್ರಯೋಜನಕಾರಿ.
ನಿಯಮಿತವಾಗಿ ಕಬ್ಬಿನಹಾಲನ್ನು ಕುಡಿಯುವುದರಿಂದ ಇದರಲ್ಲಿರುವ ಗ್ಲೈಕೋಲಿಕ್ ಆಮ್ಲದಂತಹ ಆಲ್ಫಾ-ಹೈಡ್ರಾಕ್ಸಿ ಆಮ್ಲಗಳು ಮೊಡವೆಯಂತಹ ಚರ್ಮದ ಸಮಸ್ಯೆಗಳಿಂದ ದೂರ ಉಳಿಯಲು ಪ್ರಯೋಜನಕಾರಿ ಎನ್ನಲಾಗಿದೆ.
ಕಬ್ಬಿನ ರಸದಲ್ಲಿ ಕ್ಯಾಲ್ಸಿಯಂ-ಸಮೃದ್ಧವಾಗಿದೆ. ಹಾಗಾಗಿ, ಇದು ಮೂಳೆಗಳ ಆರೋಗ್ಯಕ್ಕೆ ಒಳ್ಳೆಯದು. ಇದಲ್ಲದೆ, ಕಬ್ಬನ್ನು ಜಗಿದು ಅದರ ರಸ ಕುಡಿಯುವುದು ಹಣ್ಣುಗಳ ಆರೋಗ್ಯಕ್ಕೂ ತುಂಬಾ ಪ್ರಯೋಜನಕಾರಿ.
ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.