ಮಳೆಗಾಲದಲ್ಲಿ ಅರಿಶಿನದ ಹಾಲು ಕುಡಿದರೆ ಆರೋಗ್ಯಕ್ಕಿದೆ ಸಾಕಷ್ಟು ಅದ್ಭುತ ಪ್ರಯೋಜನ
ಅರಿಶಿನದ ಹಾಲು ಮನೆಯಲ್ಲಿ ಸುಲಭವಾಗಿ ತಯಾರಿಸಬಹುದಾದ ಪೌಷ್ಟಿಕಾಂಶಯುಕ್ತ ಹಾಲು. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಪರಿಣಾಮಕಾರಿ ಆದ ಈ ಪಾಣೀಯವನ್ನು ಟೀ, ಕಾಫಿಗೆ ಬದಲಿಯಾಗಿ ಬಳಸಲಾಗುತ್ತದೆ. ವಿವಿಧ ಆರೋಗ್ಯ ಸಮಸ್ಯೆಗಳಿಗೆ ನೈಸರ್ಗಿಕ ಪರಿಹಾರ ಎಂದು ಇದನ್ನು ಪರಿಗಣಿಸಲಾಗಿದೆ. ಇದರ ಪ್ರಮುಖ ಪ್ರಯೋಜನಗಳೆಂದರೆ...
ಅರಿಶಿನದ ಕರ್ಕ್ಯುಮಿನ್ ಅದರ ಪ್ರಬಲವಾದ ಉತ್ಕರ್ಷಣ ನಿರೋಧಕ, ಉರಿಯೂತದ, ಆಂಟಿಬ್ಯಾಕ್ಟೀರಿಯಲ್, ಆಂಟಿವೈರಲ್ ಮತ್ತು ಆಂಟಿಫಂಗಲ್ ಪರಿಣಾಮಗಳಿಗೆ ಹೆಸರುವಾಸಿಯಾಗಿದೆ, ಇದು ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುವ ಮೂಲಕ ನಮ್ಮನ್ನು ಸೋಂಕಿನಿಂದ ರಕ್ಷಿಸುವಲ್ಲಿ ಪರಿಣಾಮಕಾರಿ ಎಂದು ಹೇಳಲಾಗುತ್ತದೆ.
ಅರಿಶಿನ ಹಾಲಿನ ಉರಿಯೂತದ ಮತ್ತು ಆಂಟಿಮೈಕ್ರೊಬಿಯಲ್ ಗುಣಲಕ್ಷಣಗಳು ವಿವಿಧ ಜೀರ್ಣಕಾರಿ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲು ಪರಿಣಾಮಕಾರಿ ಎಂದು ಹಲವು ಸಂಶೋಧನೆಗಳಿಂದ ತಿಳಿದು ಬಂದಿದೆ.
ಅರಿಶಿನ ಹಾಲು ನಿಮ್ಮ ಅಸ್ಥಿಪಂಜರದ ವ್ಯವಸ್ಥೆಯನ್ನು ಬಲಪಡಿಸಬಲ್ಲ ವಿಶ್ವಾಶಾರ್ಹ ಪಾನೀಯವಾಗಿದೆ. ಈ ಪಾನೀಯವು ಕ್ಯಾಲ್ಸಿಯಂ ಮತ್ತು ವಿಟಮಿನ್ ಡಿ ಸಮೃದ್ಧವಾಗಿದ್ದು, ನಮ್ಮ ಮೂಳೆಗಳನ್ನು ಬಲಪಡಿಸುವಲ್ಲಿ ತುಂಬಾ ಪ್ರಯೋಜನಕಾರಿ ಎಂದು ನಂಬಲಾಗಿದೆ.
ಅರಿಶಿನ ಹಾಲಿನಲ್ಲಿರುವ ಪೋಷಕಾಂಶಗಳು ಹೃದ್ರೋಗದ ವಿರುದ್ಧ ರಕ್ಷಾಕವಚವಾಗಿ ಕಾರ್ಯನಿರ್ವಹಿಸುತ್ತವೆ.
ಅರಿಶಿನದ ಹಾಲಿಗೆ ಸಕ್ಕರೆಯನ್ನು ಮಿಕ್ಸ್ ಮಾಡದೆ ಹಾಗೆ ಕುಡಿಯುವುದರಿಂದ ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇದನ್ನು Zee ಮೀಡಿಯಾ ಖಚಿತಪಡಿಸುವುದಿಲ್ಲ.