Health Benefits of Drumstick Leaves: ಕ್ಯಾಲ್ಸಿಯಂ ಸಮೃದ್ಧವಾಗಿರುವ ಇದು ಮೂಳೆಗಳನ್ನು ಬಲಪಡಿಸುತ್ತದೆ. ನುಗ್ಗೆ ಸೊಪ್ಪಿನ ನೀರು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ನುಗ್ಗೆ ಸೊಪ್ಪಿನ ನೀರು ಉತ್ಕರ್ಷಣ ನಿರೋಧಕಗಳು ಮತ್ತು ಖನಿಜಗಳು ಮತ್ತು ವಿಟಮಿನ್ A, C, E, ಕ್ಯಾಲ್ಸಿಯಂ, ಪೊಟ್ಯಾಸಿಯಮ್, ಬೀಟಾ ಕ್ಯಾರೋಟಿನ್ನಲ್ಲಿ ಸಮೃದ್ದವಾಗಿದೆ.
Health Benefits of Drumstick Leaves: ನುಗ್ಗೆ ಕಾಯಿ ಮತ್ತು ಸೊಪ್ಪು ಹಲವು ಪೋಷಕಾಂಶಗಳಿಂದ ಸಮೃದ್ಧವಾಗಿದೆ. ನುಗ್ಗೆ ಎಲೆ, ಹೂವು, ಹಣ್ಣು, ಕಾಂಡ ಹೀಗೆ ಎಲ್ಲವೂ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಇದರ ಸೇವನೆಯಿಂದ ಚಯಾಪಚಯ ಹೆಚ್ಚುವುದರ ಜೊತೆಗೆ ದೇಹದಲ್ಲಿನ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ. ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ನುಗ್ಗೆ ಸೊಪ್ಪಿನ ನೀರು ಸೇವಿಸಿದರೆ ದೇಹದಿಂದ ವಿಷಕಾರಿ ಪದಾರ್ಥಗಳನ್ನು ತೆಗೆದುಹಾಕುತ್ತದೆ. ನುಗ್ಗೆ ಸೊಪ್ಪು ಸೇವನೆಯಿಂದ ದೊರೆಯುವ ಆರೋಗ್ಯ ಪ್ರಯೋಜನಗಳ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ...
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.
ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ನುಗ್ಗೆ ಸೊಪ್ಪಿನ ನೀರನ್ನು ಕುಡಿಯುವುದರಿಂದ ಹಲವಾರು ಪ್ರಯೋಜನಗಳಿವೆ. ನುಗ್ಗೆ ಸೊಪ್ಪಿನ ಎಲೆಗಳು ಕೂದಲು ಉದುರುವಿಕೆ, ರಕ್ತಹೀನತೆ, ಸಂಧಿವಾತ, ಥೈರಾಯ್ಡ್, ಅಸ್ತಮಾ, ದುರ್ಬಲ ರೋಗನಿರೋಧಕ ಶಕ್ತಿ, ಮಧುಮೇಹ ಸೇರಿದಂತೆ ಎಲ್ಲಾ ಕಾಯಿಲೆಗಳಿಗೆ & ತೂಕ ಕಡಿಮೆ ಮಾಡಲು ಉಪಯುಕ್ತವಾಗಿದೆ.
ಆಯುರ್ವೇದದಲ್ಲಿ ನುಗ್ಗೆ ಸೊಪ್ಪನ್ನು ಔಷಧೀಯ ಸಸ್ಯವೆಂದು ಪರಿಗಣಿಸಲಾಗಿದೆ. ಇದನ್ನು ಅನೇಕ ರೋಗಗಳ ಚಿಕಿತ್ಸೆಯಲ್ಲಿ ಬಳಸಲಾಗುತ್ತದೆ. ಇದು ಕ್ಯಾರೆಟ್ಗಿಂತ 10 ಪಟ್ಟು ಹೆಚ್ಚು ವಿಟಮಿನ್ Aಯನ್ನು ಹೊಂದಿರುತ್ತದೆ. ಹಾಲಿಗಿಂತ 17 ಪಟ್ಟು ಹೆಚ್ಚು ಕ್ಯಾಲ್ಸಿಯಂ, ಕಿತ್ತಳೆಗಿಂತ ಏಳು ಪಟ್ಟು ಹೆಚ್ಚು ವಿಟಮಿನ್ C, ಬಾಳೆಹಣ್ಣಿಗಿಂತ 15 ಪಟ್ಟು ಹೆಚ್ಚು ಪೊಟ್ಯಾಸಿಯಮ್, 25 ಪಟ್ಟು ಹೆಚ್ಚು ಕಬ್ಬಿಣ ಮತ್ತು ಮೊಸರುಗಿಂತ ೯ ಪಟ್ಟು ಹೆಚ್ಚು ಪ್ರೋಟೀನ್ ಹೊಂದಿರುತ್ತದೆ.
ನುಗ್ಗೆ ಸೊಪ್ಪು ಉಪಯೋಗಿಸುವುದರಿಂದ ತಾಯಂದಿರಲ್ಲಿ ಎದೆ ಹಾಲಿನ ಉತ್ಪಾದನೆಯನ್ನು ಹೆಚ್ಚಿಸುತ್ತದೆ. ಸಂಧಿವಾತದಂತಹ ಮಸ್ಕ್ಯುಲೋಸ್ಕೆಲಿಟಲ್ ನೋವಿನ ಪರಿಹಾರಕ್ಕೆ ನುಗ್ಗೆ ಸೊಪ್ಪು ಸಹಾಯ ಮಾಡುತ್ತದೆ. ಇದು ಉರಿಯೂತದ ಗುಣಲಕ್ಷಣಗಳನ್ನು ಹೊಂದಿದ್ದು, ಊತವನ್ನು ಕಡಿಮೆ ಮಾಡುತ್ತದೆ. ಇದರಲ್ಲಿರುವ ಪಾಲಿಫಿನಾಲ್ಗಳು ಮತ್ತು ಫ್ಲೇವನಾಯ್ಡ್ಗಳು ನೋವಿನಿಂದ ಪರಿಹಾರವನ್ನು ನೀಡುತ್ತದೆ.
ಕ್ಯಾಲ್ಸಿಯಂ ಸಮೃದ್ಧವಾಗಿರುವ ಇದು ಮೂಳೆಗಳನ್ನು ಬಲಪಡಿಸುತ್ತದೆ. ನುಗ್ಗೆ ಸೊಪ್ಪಿನ ನೀರು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದರಿಂದ ಅನೇಕ ರೋಗಗಳಿಂದ ರಕ್ಷಣೆ ಸಿಗುತ್ತದೆ. ನುಗ್ಗೆ ಸೊಪ್ಪಿನ ನೀರು ಉತ್ಕರ್ಷಣ ನಿರೋಧಕಗಳು ಮತ್ತು ಖನಿಜಗಳು ಮತ್ತು ವಿಟಮಿನ್ A, C, E, ಕ್ಯಾಲ್ಸಿಯಂ, ಪೊಟ್ಯಾಸಿಯಮ್, ಬೀಟಾ ಕ್ಯಾರೋಟಿನ್ನಲ್ಲಿ ಸಮೃದ್ದವಾಗಿದೆ. ಇದು ಅನೇಕ ಸೋಂಕುಗಳಿಂದ ದೂರವಿಡುತ್ತದೆ.
ಹಿಮೋಗ್ಲೋಬಿನ್ ಹೆಚ್ಚು ಮಾಡಾಲು ನುಗ್ಗೆ ಸೊಪ್ಪು ನೆರವಾಗುತ್ತದೆ. ವೇಗವಾಗಿ ತೂಕ ಕಳೆದುಕೊಳ್ಳಬೇಕಾದರೆ ನುಗ್ಗೆ ಸೊಪ್ಪಿನ ನೀರು ತುಂಬಾ ಉಪಯುಕ್ತವಾಗಿದೆ. ಮಧುಮೇಹದಿಂದ ಬಳಲುತ್ತಿರುವವರಿಗೆ ನುಗ್ಗೆ ಸೊಪ್ಪಿನ ನೀರು ತುಂಬಾ ಪ್ರಯೋಜನಕಾರಿ. ಇದು ಇನ್ಸುಲಿನ್ ಸೂಕ್ಷ್ಮತೆಯನ್ನು ಸುಧಾರಿಸುವುದಲ್ಲದೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ. ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ನುಗ್ಗೆ ಸೊಪ್ಪಿನ ನೀರನ್ನು ಸೇವಿಸುತ್ತಾ ಬಂದರೆ ಮಧುಮೇಹದ ಅಪಾಯ ಕಡಿಮೆಯಾಗುತ್ತದೆ.