Earthqauke In Turkey: 7.9 ತೀವ್ರತೆಯ ಭೂಕಂಪ ಸಿರಿಯಾ ಮತ್ತು ಟರ್ಕಿಯಲ್ಲಿ ವಿನಾಶಕಾರಿ ವಾತಾವರಣವನ್ನು ಉಂಟು ಮಾಡಿದೆ. ಸಿರಿಯಾ ಮತ್ತು ಟರ್ಕಿ ಈ ಭೂಕಂಪದಿಂದ ಹೆಚ್ಚು ಹಾನಿಗೊಳಗಾಗಿವೆ. ಪೀಡಿತ ಪ್ರದೇಶಗಳಲ್ಲಿ ಭಯ ಹುಟ್ಟಿಸುವ ದೃಶ್ಯ ಗೋಚರಿಸುತ್ತಿದೆ. ಇಲ್ಲಿ ಹಲವು ಕಟ್ಟಡಗಳು ಧರೆಗುರುಳಿವೆ. ಕಟ್ಟಡದ ಅವಶೇಷಗಳಡಿ ಸಿಲುಕಿರುವವರನ್ನು ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದೆ. ಗಾಯಾಳುಗಳಿಗೆ ವೈದ್ಯಕೀಯ ನೆರವು ನೀಡಲಾಗುತ್ತಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
ಸೋಮವಾರ ಮುಂಜಾನೆ ಆಗ್ನೇಯ ಟರ್ಕಿ ಮತ್ತು ಸಿರಿಯಾದಲ್ಲಿ 7.8 ತೀವ್ರತೆಯ ಭೂಕಂಪ ಸಂಭವಿಸಿದೆ. ಇದರಿಂದಾಗಿ ಹಲವು ಕಟ್ಟಡಗಳು ಕುಸಿದಿವೆ. ಸಿರಿಯಾ ಮತ್ತು ಟರ್ಕಿಯಲ್ಲಿ ಭೂಕಂಪದಿಂದಾಗಿ 568 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಅವಶೇಷಗಳಡಿ ಸಿಲುಕಿಕೊಂಡವರನ್ನು ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದೆ.
ಟರ್ಕಿ ಮತ್ತು ಸಿರಿಯಾದಲ್ಲಿ, ಕಟ್ಟಡಗಳ ಒಳಗೆ ಸಿಲುಕಿರುವವರು ಭೂಕಂಪ ಪೀಡಿತ ಪ್ರದೇಶಗಳಲ್ಲಿ ಸಹಾಯಕ್ಕಾಗಿ ಮನವಿ ಮಾಡುತ್ತಿರುವುದು ಕಂಡುಬಂದಿದೆ. ಈ ಭೂಕಂಪದ ಕೇಂದ್ರಬಿಂದು ಟರ್ಕಿಯ ಗಾಜಿಯಾಂಟೆಪ್ . ಭೂಕಂಪ ಪೀಡಿತ ಪ್ರದೇಶಗಳಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಇಲ್ಲಿ ಸುಮಾರು 6 ಕಂಪನಗಳ ಅನುಭವವಾಗಿದೆ. ಹಾನಿಗೊಳಗಾದ ಕಟ್ಟಡಗಳಿಗೆ ತೆರಳದಂತೆ ಜನರಿಗೆ ಸೂಚಿಸಲಾಗಿದೆ.
ಕನಿಷ್ಠ 130 ಕಟ್ಟಡಗಳು ಕುಸಿದಿವೆ. ಅನೇಕ ಜನರು ಅವಶೇಷಗಳ ಅಡಿಯಲ್ಲಿ ಹೂತುಹೋಗಿದ್ದಾರೆ.
ಯುಎಸ್ ಜಿಯೋಲಾಜಿಕಲ್ ಸರ್ವೆ ಪ್ರಕಾರ, ಭೂಕಂಪದ ಕೇಂದ್ರಬಿಂದು ಗಾಜಿಯಾಂಟೆಪ್ನಿಂದ ಸುಮಾರು 33 ಕಿ.ಮೀ ದೂರದಲ್ಲಿದೆ. ಹಲವು ಪ್ರಾಂತ್ಯಗಳಲ್ಲಿ ಇದರ ಕಂಪನದ ಅನುಭವವಾಗಿದೆ. ಇದಕ್ಕೂ ಮೊದಲು, 1999 ರಲ್ಲಿ ಟರ್ಕಿಯಲ್ಲಿ ಭೀಕರ ಭೂಕಂಪ ಸಂಭವಿಸಿ 17,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು.